ಆ್ಯಪ್ನಗರ

ಕಡ್ಡಾಯವಾಗಿ ಮತದಾನ ಪ್ರಕ್ರಿಯೆಯಲ್ಲಿಪಾಲ್ಗೊಳ್ಳಿ

ಯಲ್ಲಾಪುರ : ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಚುನಾವಣಾ ಸಾಕ್ಷರತಾ ಕೋಶ ಹಾಗೂ ತಾಲೂಕು ಆಡಳಿತದ ಸಹಯೋಗದಲ್ಲಿಮತದಾರರ ಪಟ್ಟಿಯ ಪರಿಶೀಲನಾ ಕಾರ್ಯಕ್ರಮ ನಡೆಯಿತು.

Vijaya Karnataka 20 Sep 2019, 5:00 am
ಯಲ್ಲಾಪುರ : ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಚುನಾವಣಾ ಸಾಕ್ಷರತಾ ಕೋಶ ಹಾಗೂ ತಾಲೂಕು ಆಡಳಿತದ ಸಹಯೋಗದಲ್ಲಿಮತದಾರರ ಪಟ್ಟಿಯ ಪರಿಶೀಲನಾ ಕಾರ್ಯಕ್ರಮ ನಡೆಯಿತು.
Vijaya Karnataka Web participate in the mandatory voting process
ಕಡ್ಡಾಯವಾಗಿ ಮತದಾನ ಪ್ರಕ್ರಿಯೆಯಲ್ಲಿಪಾಲ್ಗೊಳ್ಳಿ


ಈ ಕಾರ್ಯಕ್ರಮದಲ್ಲಿತಹಸೀಲ್ದಾರ್‌ ಡಿ.ಜಿ.ಹೆಗಡೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಶೇ.100 ರಷ್ಟು ಮತದಾರರ ವಿವರಗಳನ್ನು ಸರಿಪಡಿಸಿಕೊಂಡು ಕಡ್ಡಾಯವಾಗಿ ಮತದಾನದ ಪ್ರಕ್ರಿಯೆಯಲ್ಲಿಭಾಗವಹಿಸಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಡಾ.ದಾಕ್ಷಾಯಣಿ ಜಿ. ಹೆಗಡೆ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದ್ದು ವಿದ್ಯಾರ್ಥಿಗಳು ನಾಗರಿಕರಲ್ಲಿಮತದಾನದ ಅರಿವು ಮೂಡಿಸಲು ಪ್ರಯತ್ನಿಸಬೇಕು ಎಂದರು.

ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ನಿತೇಶ ತೊರ್ಕೆ, ವಿದ್ಯಾರ್ಥಿಗಳಿಗೆ ಎನ್‌.ಎಸ್‌.ವಿ.ಪಿ. ಪೋರ್ಟಲ್‌ ಹಾಗೂ ಮತದಾರರ ಸಹಾಯವಾಣಿ ಕುರಿತಾಗಿ ಪರಿಣಾಮಕಾರಿಯಾಗಿ ಮಾಹಿತಿ ನೀಡಿದರು. ಐ.ಕ್ಯು.ಎ.ಸಿ ಸಂಚಾಲಕ ಡಿ.ಎಸ್‌.ಭಟ್‌ ವಂದಿಸಿದರು ಹಾಗೂ ತಾಲೂಕಾ ಕಚೇರಿಯ ಸಿಬ್ಬಂದಿ ಚೇತನ್‌, ಸುಬ್ರಹ್ಮಣ್ಯ ಭಟ್ಟ ಉಪಸ್ಥಿತರಿದ್ದರು. ಕಾಲೇಜಿನ ಚುನಾವಣಾ ಸಾಕ್ಷರತಾ ಕ್ಲಬ್‌ ಸಂಚಾಲಕ ಶರತ್‌ ಕುಮಾರ್‌ ಸ್ವಾಗತಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ