ಆ್ಯಪ್ನಗರ

ಮಾಸಿಕ ಹತ್ತು ಸಾವಿರ ರೂ.ಗೌರವಧನ ನೀಡಿ

ಮುಂಡಗೋಡ : ಕೋವಿಡ್‌ -19 ಕಾರ್ಯ ನಿಯೋಜನೆಯಲ್ಲಿರುವ ಆಶಾ ಕಾರ್ಯಕರ್ತೆಯರಿಗೆ ಮಾಸಿಕ 10 ಸಾವಿರ ರೂ. ಗೌರವಧನ ನೀಡಬೇಕು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ತಾಲೂಕು ಘಟಕದಿಂದ ಇತ್ತೀಚೆಗೆ ತಹಸೀಲ್ದಾರ್‌ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

Vijaya Karnataka 5 Jun 2020, 5:00 am
ಮುಂಡಗೋಡ : ಕೋವಿಡ್‌ -19 ಕಾರ್ಯ ನಿಯೋಜನೆಯಲ್ಲಿರುವ ಆಶಾ ಕಾರ್ಯಕರ್ತೆಯರಿಗೆ ಮಾಸಿಕ 10 ಸಾವಿರ ರೂ. ಗೌರವಧನ ನೀಡಬೇಕು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ತಾಲೂಕು ಘಟಕದಿಂದ ಇತ್ತೀಚೆಗೆ ತಹಸೀಲ್ದಾರ್‌ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.
Vijaya Karnataka Web pay rs 10000 monthly
ಮಾಸಿಕ ಹತ್ತು ಸಾವಿರ ರೂ.ಗೌರವಧನ ನೀಡಿ

ಕೊರೋನಾ ವೈರಸ್‌ ಭೀತಿಯಿಂದ ಸರಕಾರ ಲಾಕ್‌ಡೌನ್‌ ಮಾಡಿದೆ. ಈ ವೇಳೆ ಆಶಾ ಕಾರ್ಯಕರ್ತೆಯರು ಜೀವದ ಹಂಗು ತೊರೆದು ಕಾರ್ಯನಿರ್ವಹಿಸುತ್ತಾ ರೋಗಾಣು ಹರಡುವಿಕೆ ತಡೆಗಟ್ಟಲು ಶ್ರಮಿಸುತ್ತಿದ್ದಾರೆ.

ರಾಜ್ಯಾದ್ಯಂತ ಕಳೆದ ಎರಡು ತಿಂಗಳಿಂದ ಅವಿರತ ಸೇವೆಯಲ್ಲಿರುವ ಫ್ರಂಟ್‌ಲೈನ್‌ ವಾರಿಯರ್ಸ್ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿರುವುದು ಆತಂಕ ಮೂಡಿಸಿದೆ.

ಹಲ್ಲೆಗೊಳಗಾದ ಆಶಾ ಕಾರ್ಯಕರ್ತೆಯರಿಗೆ ಪರಿಹಾರ ಕೊಡಬೇಕು. ಹಲ್ಲೆಮಾಡಿದವರನ್ನು ತಕ್ಷಣ ಬಂಧಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಅಗತ್ಯಕ್ಕೆ ತಕ್ಕಂತೆ ಮಾಸ್ಕ್‌, ಸ್ಯಾನಿಟೈಸರ್‌, ಕೈಗವಸುಗಳನ್ನು ನೀಡಬೇಕು. ಮದ್ಯ ನಿಷೇಧ ಮಾಡಬೇಕು. ಸೇವಾ ವೇಳೆಯಲ್ಲಿ ಸಾವಿಗೀಡಾದರೆ ಅವರ ಕುಟುಂಬಕ್ಕೆ 50 ಲಕ್ಷ ರೂ. ವಿಮೆ ಸೌಲಭ್ಯ ನೀಡಬೇಕು ಎಂದು ಮನವಿಯಲ್ಲಿಒತ್ತಾಯಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ