ಆ್ಯಪ್ನಗರ

ಸಾಗರಮಾಲಾ ವಿರುದ್ಧ 4ನೇ ದಿನವೂ ಮುಂದುವರಿದ ಪ್ರತಿಭಟನೆ, ಕಾರವಾರ ಸಂಪೂರ್ಣ ಬಂದ್‌

ಗುರುವಾರ ಬೆಳಗ್ಗೆ ಎರಡು ಸಾವಿರಕ್ಕೂ ಹೆಚ್ಚು ಮೀನುಗಾರರು ಮತ್ತು ಸಾರ್ವಜನಿಕರು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ಬಳಿಕ ಬಿಲ್ಟ್ ಸರ್ಕಲ್‌ನಲ್ಲಿ ಪ್ರತಿಭಟನಾ ಸಭೆ ನಡೆಸಲಾಗುತ್ತಿದೆ.

Vijaya Karnataka 16 Jan 2020, 2:04 pm

ಕಾರವಾರ: ಸಾಗರಮಾಲಾ ಯೋಜನೆ ಅಡಿ ಕಾರವಾರ ವಾಣಿಜ್ಯ ಬಂದರು ವಿಸ್ತರಣೆ ವಿರೋಧಿಸಿ ಮೀನುಗಾರರು ಮತ್ತು ಸಾರ್ವಜನಿಕರು ನಡೆಸುತ್ತಿರುವ ಹೋರಾಟ ಗುರುವಾರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.
Vijaya Karnataka Web Fishermen Protest Karwar


ಗುರುವಾರ ಬೆಳಗ್ಗೆ ಎರಡು ಸಾವಿರಕ್ಕೂ ಹೆಚ್ಚು ಜನರು ಸೇರಿ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ಬಳಿಕ ಬಿಲ್ಟ್ ಸರ್ಕಲ್‌ನಲ್ಲಿ ಪ್ರತಿಭಟನಾ ಸಭೆ ನಡೆಸಲಾಗುತ್ತಿದೆ.

ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸಾರಿಗೆ ವ್ಯವಸ್ಥೆ ಸಂಪೂರ್ಣ ಸ್ತಬ್ಧವಾಗಿದ್ದು, ಬಸ್, ಟೆಂಪೋ, ಆಟೋ ರಿಕ್ಷಾ ಮೊದಲಾದ ಯಾವುದೇ ವಾಹನಗಳು ರಸ್ತೆಗೆ ಇಳಿದಿಲ್ಲ. ಅಂಗಡಿ ಮುಂಗಟ್ಟುಗಳು ಕೂಡ ಬಾಗಿಲೆಳೆದುಕೊಂಡಿದ್ದು, ವ್ಯಾಪಾರ ಪೂರ್ಣ ಪ್ರಮಾಣದಲ್ಲಿ ನಿಂತಿದೆ. ಬ್ಯಾಂಕ್ ಆಸ್ಪತ್ರೆಗಳು ಮಾತ್ರ ಕಾರ್ಯ ನಿರ್ವಹಿಸುತ್ತಿವೆ.

ಸಾಗರ ಮಾಲಾ ಯೋಜನೆ ವಿರುದ್ಧ ಮೀನುಗಾರರ ಪ್ರತಿಭಟನೆ: ದಿಢೀರ್ ಬಂದ್‌ಗೆ ಕಾರವಾರ ಅಯೋಮಯ..!


ಸೋಮವಾರ ಸಾಗರಮಾಲಾ ಯೋಜನೆ ಅಡಿ ವಾಣಿಜ್ಯ ಬಂದರು ವಿಸ್ತರಣೆ ವಿರೋಧಿಸಿ ಮೀನುಗಾರರು ಮೊದಲ ಬಾರಿಗೆ ಪ್ರತಿಭಟನೆಗೆ ಇಳಿದಿದ್ದರು. ಅಂದಿನಿಂದ ಇಂದಿನವರೆಗೂ ಪಟ್ಟು ಬಿಡದೆ ನಿರಂತರ ಪ್ರತಿಭಟನೆ ನಡೆಸುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ