ಆ್ಯಪ್ನಗರ

ಸಾಧಕರಿಗೆ ಪುರಸ್ಕಾರ, ನಿವೃತ್ತರಿಗೆ ಸನ್ಮಾನ

ಶಿರಸಿ : ಉತ್ತರ ಕನ್ನಡ ಜಿಲ್ಲಾ ಆರ್ಯ, ಈಡಿಗ, ನಾಮಧಾರಿ, ಬಿಲ್ಲವ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಶಿಕ್ಷ ಣ, ಕ್ರೀಡೆಯಲ್ಲಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದವರಿಗೆ ಪ್ರತಿಭಾ ಪುರಸ್ಕಾರ, ನಿವೃತ್ತರಿಗೆ ಸನ್ಮಾನ ನೆರವೇರಿಸಲಾಯಿತು.

Vijaya Karnataka 29 Jul 2019, 5:00 am
ಶಿರಸಿ : ಉತ್ತರ ಕನ್ನಡ ಜಿಲ್ಲಾ ಆರ್ಯ, ಈಡಿಗ, ನಾಮಧಾರಿ, ಬಿಲ್ಲವ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಶಿಕ್ಷ ಣ, ಕ್ರೀಡೆಯಲ್ಲಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದವರಿಗೆ ಪ್ರತಿಭಾ ಪುರಸ್ಕಾರ, ನಿವೃತ್ತರಿಗೆ ಸನ್ಮಾನ ನೆರವೇರಿಸಲಾಯಿತು.
Vijaya Karnataka Web rewards for the achievers reward for the retirees
ಸಾಧಕರಿಗೆ ಪುರಸ್ಕಾರ, ನಿವೃತ್ತರಿಗೆ ಸನ್ಮಾನ


ನಗರದ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ ಸಂಘದ 20ನೇ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಈ ಕಾರ್ಯ ನೆರವೇರಿಸಲಾಯಿತು. ಎಸ್‌ಎಸ್‌ಎಲ್‌ಸಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ನಾಗಾಂಜಲಿ ನಾಯ್ಕ, ಬಿಎಸ್‌ಸಿಯಲ್ಲಿ ಕವಿವಿಗೆ ಮೊದಲ ಸ್ಥಾನ ಗಳಿಸಿದ ಪಲ್ಲವಿ ನಾಯ್ಕ, ಬಾಲ್‌ ಬ್ಯಾಡ್ಮಿಂಟನ್‌ನಲ್ಲಿ ರಾಷ್ಟ್ರ ಮಟ್ಟದ ಸಾಧನೆ ಮಾಡಿದ ಹರ್ಷಾ ನಾಯ್ಕ, ರೋಲರ್‌ ಸ್ಕೇಟಿಂಗ್‌ನಲ್ಲಿ ರಾಷ್ಟ್ರ ತಂಡ ಪ್ರತಿನಿಧಿಸಿದ ಚಿರಾಗ್‌ ನಾಯ್ಕ, ನ್ಯಾಯಾಧೀಶರಾಗಿ ಆಯ್ಕೆಯಾಗಿರುವ ಶಿಲ್ಪಾ ನಾಯ್ಕ ಮುಂತಾದವರನ್ನು ಪುರಸ್ಕರಿಸಲಾಯಿತು.

ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಕುಲಪತಿ ಡಾ.ಎಂ.ಕೆ.ನಾಯ್ಕ, ಗದಗ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ರೂಪಾ ನಾಯ್ಕ, ಹೊನ್ನಾವರ ಎಸ್‌ಡಿಎಂ ಕಾಲೇಜಿನ ಪ್ರಾಚಾರ್ಯೆ ವಿಜಯಲಕ್ಷ್ಮೀ ನಾಯ್ಕ, ಡಿಎಫ್‌ಓ ಯು.ಡಿ.ನಾಯ್ಕ, ಸಂಘದ ಜಿಲ್ಲಾಧ್ಯಕ್ಷ ಡಾ.ನಾಗೇಶ ನಾಯ್ಕ ಪುರಸ್ಕಾರ ಕಾರ್ಯ ನೆರವೇರಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಕುಲಪತಿ ಡಾ.ಎಂ.ಕೆ.ನಾಯ್ಕ ಮಾತನಾಡಿ, ವಿದ್ಯಾರ್ಥಿಗಳು, ಯುವಜನತೆ ಬೆಳವಣಿಗೆಗೆ ಸೀಮಿತ ಪರಿಮಿತಿ ಹಾಕಿಕೊಳ್ಳದೇ ಮುನ್ನುಗ್ಗಿದರೆ ಅಸಾಧ್ಯವಾದುದು ಯಾವುದೂ ಇಲ್ಲ ಎಂದರು.

ನ್ಯಾಯಾಧೀಶೆ ರೂಪಾ ನಾಯ್ಕ ಮಾತನಾಡಿ, ವಿದ್ಯಾರ್ಥಿಗಳು ಶಿಸ್ತು ಹಾಗೂ ಮಾನವೀಯ ಮೌಲ್ಯವನ್ನು ಅಳವಡಿಸಿಕೊಂಡು ತಮ್ಮಂತೆ ಇತರರಿಗೂ ಮಾರ್ಗದರ್ಶನ ಮಾಡಿ ಕೈಹಿಡಿದು ಮೇಲಕ್ಕೆತ್ತಿದರೆ ಸಮಾಜ ತಾನಾಗಿಯೇ ಅಭಿವೃದ್ಧಿಯಾಗುತ್ತದೆ ಎಂದರು.

ಡಿಎಫ್‌ಒ ಯು.ಡಿ.ನಾಯ್ಕ ಮಾತನಾಡಿ, ನಾಮಧಾರಿ ಸಮಾಜ ಬಹುತೇಕ ಎಲ್ಲ ಕ್ಷೇತ್ರಗಳಲ್ಲೂ ಮುಂದುವರೆಯುತ್ತಿದ್ದು, ಅಧ್ಯಾತ್ಮಿಕ ಕ್ಷೇತ್ರದಲ್ಲಿ ನಮ್ಮ ಪಾಲ್ಗೊಳ್ಳುವಿಕೆ ಕಡಿಮೆಯಿದೆ. ಹಿಂಜರಿಕೆಯಿಂದ ಹೊರ ಬಂದು ಅದರತ್ತ ಗಮನ ಹರಿಸಬೇಕು ಎಂದರು.

ಅಧ್ಯಕ್ಷ ತೆ ವಹಿಸಿದ್ದ ಜಿಲ್ಲಾಧ್ಯಕ್ಷ ನಾಗೇಶ ನಾಯ್ಕ ಮಾತನಾಡಿ, ಸಕಾರಾತ್ಮಕ ಚಿಂತನೆಯೊಂದಿಗೆ ಸಮಾಜದ ವಿದ್ಯಾರ್ಥಿಗಳು ಹಾಗೂ ಯುವಸಮೂಹ ಬೆಳೆಯಬೇಕು. ಮಾನವೀಯ ಮೌಲ್ಯ ಹಾಗೂ ಸೇವಾ ಮನೋಭಾವದೊಂದಿಗೆ ಸಮಾಜ ಬೆಳೆಸಬೇಕು ಎಂದರು. ಪ್ರಾಚಾರ್ಯೆ ವಿಜಯಲಕ್ಷ್ಮೀ ನಾಯ್ಕ ಮಾತನಾಡಿದರು.

ನಿವೃತ್ತರಿಗೆ ಸನ್ಮಾನ : ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಕೃಷಿ ಇಲಾಖೆಯ ನಿವೃತ್ತ ನೌಕರ ಎಸ್‌.ಬಿ.ನಾಯ್ಕ, ಅರಣ್ಯ ಇಲಾಖೆಯ ಹನುಮಂತ ನಾಯ್ಕ, ಕೆಎಸ್‌ಆರ್‌ಟಿಸಿಯ ತಿಮ್ಮಪ್ಪ ನಾಯ್ಕ, ಚಂದ್ರಕಾಂತ ನಾಯ್ಕ, ನಿವೃತ್ತ ಪಿಡಿಓ ಎಂ.ಆರ್‌.ನಾಯ್ಕ ಅವರನ್ನು ಗೌರವಿಸಲಾಯಿತು.

ಸಂಘದ ಉಪಾಧ್ಯಕ್ಷ ಸಿ.ಡಿ.ನಾಯ್ಕ, ಪ್ರಧಾನ ಕಾರ್ಯದರ್ಶಿ ಮನೋಜ ನಾಯ್ಕ ಉಪಸ್ಥಿತರಿದ್ದರು. ಕೋಶಾಧ್ಯಕ್ಷ ಎಸ್‌.ಬಿ.ನಾಯ್ಕ ಸ್ವಾಗತಿಸಿದರು. ಸಾಂಸ್ಕೃತಿಕ ಕಾರ್ಯದರ್ಶಿಗಳಾದ ಜಿ.ವಿ.ನಾಯ್ಕ, ಜಿ.ಎಚ್‌.ನಾಯ್ಕ ನಿರೂಪಿಸಿದರು. ಉಪನ್ಯಾಸಕ ನಾಗರಾಜ ನಾಯ್ಕ ವಂದಿಸಿದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ