ಆ್ಯಪ್ನಗರ

ಮನೆ ಕಳೆದುಕೊಂಡವರಿಗೆ 10,000 ರೂ. ತುರ್ತು ಪರಿಹಾರ, ಹೆದ್ದಾರಿ ದುರಸ್ತಿಗೆ 200 ಕೋಟಿ ರೂ. - ಬೊಮ್ಮಾಯಿ ಘೋಷಣೆ

ಕಳಚೆ ಗ್ರಾಮವನ್ನು ಸಂಪೂರ್ಣವಾಗಿ ಸ್ಥಳಾಂತರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿರುವ ಬಸವರಾಜ್‌ ಬೊಮ್ಮಾಯಿ, ಪ್ರವಾಹದಿಂದ ಹಾಳಾಗಿರುವ ಗ್ರಾಮೀಣ ರಸ್ತೆ ಪುನರ್ ನಿರ್ಮಾಣಕ್ಕೆ 100 ಕೋಟಿ ರೂ., ರಾಜ್ಯ ಹೆದ್ದಾರಿ ದುರಸ್ತಿಗೆ 100 ಕೋಟಿ ರೂ. ಸೇರಿ ಒಟ್ಟು 200 ಕೋಟಿ ರೂ. ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಾರೆ.

Vijaya Karnataka Web 29 Jul 2021, 7:49 pm

ಹೈಲೈಟ್ಸ್‌:

  • ಕಳಚೆ ಗ್ರಾಮವನ್ನು ಸಂಪೂರ್ಣವಾಗಿ ಸ್ಥಳಾಂತರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ ಬಸವರಾಜ್‌ ಬೊಮ್ಮಾಯಿ
  • ಪ್ರವಾಹದಿಂದ ಹಾಳಾಗಿರುವ ಗ್ರಾಮೀಣ ರಸ್ತೆ ಪುನರ್ ನಿರ್ಮಾಣಕ್ಕೆ 100 ಕೋಟಿ ರೂ. ಬಿಡುಗಡೆ
  • ರಾಜ್ಯ ಹೆದ್ದಾರಿ ದುರಸ್ತಿಗೆ 100 ಕೋಟಿ ರೂ. ಸೇರಿ ಒಟ್ಟು 200 ಕೋಟಿ ರೂ. ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ ಸಿಎಂ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Basavaraj Bommai
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಗುರುವಾರ ಸ್ವತಃ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜತೆಗೆ ಸಂತ್ರಸ್ತರಿಂದ ಅಹವಾಲುಗಳನ್ನೂ ಸ್ವೀಕರಿಸಿದರು.
ಯಲ್ಲಾಪುರ ಹಾಗೂ ಅಂಕೋಲಾ ತಾಲೂಕಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಸಿಎಂ, ಅಂಕೋಲಾದ ನಾಡವರ ಸಭಾಭವನದಲ್ಲಿ ಪ್ರವಾಹ ಹಾನಿ ಕುರಿತು ಸಭೆಯನ್ನೂ ನಡೆಸಿದರು.

ಸಭೆಯಲ್ಲಿ ಕಳಚೆ ಗ್ರಾಮವನ್ನು ಸಂಪೂರ್ಣವಾಗಿ ಸ್ಥಳಾಂತರಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದರು. ಇದರ ಜತೆಗೆ ಪ್ರವಾಹದಿಂದ ಹಾಳಾಗಿರುವ ಗ್ರಾಮೀಣ ರಸ್ತೆ ಪುನರ್ ನಿರ್ಮಾಣಕ್ಕೆ 100 ಕೋಟಿ ರೂ., ರಾಜ್ಯ ಹೆದ್ದಾರಿ ದುರಸ್ತಿಗೆ 100 ಕೋಟಿ ರೂ. ಸೇರಿದಂತೆ ಒಟ್ಟು 200 ಕೋಟಿ ರೂ. ನಾಳೆಯೇ ಬಿಡುಗಡೆಗೆ ಆದೇಶ ಮಾಡುವುದಾಗಿ ಭರವಸೆ ಇತ್ತರು.

ಪರಿಹಾರದ ಬಗ್ಗೆ ಪ್ರವಾಹ ಸಂತ್ರಸ್ತರು ಚಿಂತಿಸುವ ಅಗತ್ಯವಿಲ್ಲ - ಬೊಮ್ಮಾಯಿ ಭರವಸೆ
ಅರಬೈಲ್ ಘಾಟ್ ಸೇರಿದಂತೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ತಕ್ಷಣ ರಾಜ್ಯ ಸರಕಾರದಿಂದ 10 ಕೋಟಿ ರೂ. ಬಿಡುಗಡೆ ಮಾಡುವ ಭರವಸೆ ನೀಡಿದ ಮುಖ್ಯಮಂತ್ರಿಗಳು, 35 ಕೋಟಿ ರೂ.ಗಾಗಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿಯೂ ತಿಳಿಸಿದರು.


ಮನೆ ಕಳೆದುಕೊಂಡವರಿಗೆ 2019ರಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರ ಅವಧಿಯಲ್ಲಿ ನೀಡಲಾಗುತ್ತಿದ್ದ 10 ಸಾವಿರ ರೂ. ತಕ್ಷಣದ ಪರಿಹಾರವನ್ನು ಈ ಬಾರಿಯೂ ನೀಡುವುದಾಗಿ ಬೊಮ್ಮಾಯಿ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ