ಆ್ಯಪ್ನಗರ

ವಿದ್ಯಾರ್ಥಿಗಳ ಸಮಯಪ್ರಜ್ಞೆ: ತಪ್ಪಿದ ರೈಲು ದುರಂತ

ಕುಮಟಾ : ಪಟ್ಟಣದ ಶಾಸಕರ ಮಾದರಿ ಶಾಲೆ ವಿದ್ಯಾರ್ಥಿಗಳ ಸಮಯಪ್ರಜ್ಞೆಯಿಂದ ಕುಮಟಾದ ಕೊಂಕಣ ರೈಲ್ವೆ ನಿಲ್ದಾಣ ಸಮೀಪ ಶನಿವಾರ ಸಂಭವಿಸಬಹುದಾದ ರೈಲ್ವೆ ದುರಂತ ತಪ್ಪಿರುವುದು ತಡವಾಗಿ ಬೆಳಕಿಗೆ ಬಂದಿದೆ.

Vijaya Karnataka 31 Dec 2018, 8:35 pm
ಕುಮಟಾ : ಪಟ್ಟಣದ ಶಾಸಕರ ಮಾದರಿ ಶಾಲೆ ವಿದ್ಯಾರ್ಥಿಗಳ ಸಮಯಪ್ರಜ್ಞೆಯಿಂದ ಕುಮಟಾದ ಕೊಂಕಣ ರೈಲ್ವೆ ನಿಲ್ದಾಣ ಸಮೀಪ ಶನಿವಾರ ಸಂಭವಿಸಬಹುದಾದ ರೈಲ್ವೆ ದುರಂತ ತಪ್ಪಿರುವುದು ತಡವಾಗಿ ಬೆಳಕಿಗೆ ಬಂದಿದೆ.
Vijaya Karnataka Web KWR-PHT 30 KMT 3
ಸಮಯಪ್ರಜ್ಞೆ ಮೆರೆದ ವಿದ್ಯಾರ್ಥಿಗಳೊಂದಿಗೆ ಗ್ಯಾಂಗ್‌ಮನ್‌


ವಿದ್ಯಾರ್ಥಿಗಳಾದ ಮಂಜುನಾಥ ಹಾಗೂ ಶಶಿಕುಮಾರ, ಹಳಿ ಬಿರುಕು ಬಿಟ್ಟಿರುವುದನ್ನು ಕಂಡಿದ್ದಾರೆ. ತಕ್ಷಣ ರೈಲ್ವೆ ನಿಲ್ದಾಣಕ್ಕೆ ತೆರಳಿ ಗ್ಯಾಂಗ್‌ಮನ್‌ಗೆ ವಿಷಯ ತಿಳಿಸಿದ್ದಾರೆ. ಆಗ ಗ್ಯಾಂಗ್‌ಮನ್‌ ಹಳಿ ಬಿರುಕು ಬಿಟ್ಟಿರುವ ಸ್ಥಳಕ್ಕೆ ದೌಡಾಯಿಸಿದ್ದಾರೆ. ಕೂಡಲೇ ದುರಸ್ತಿಗೊಳಿಸಿ ಹಳಿ ಜೋಡಿಸಿದ್ದು, ಕ್ಷಿಪ್ರವಾಗಿ ನಡೆದ ಈ ವಿದ್ಯಮಾನದಿಂದ ಸಂಭವನೀಯ ಅನಾಹುತ ತಪ್ಪಿದೆ. ವಿದ್ಯಾರ್ಥಿಗಳ ಸಮಯಪ್ರಜ್ಞೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ