ಆ್ಯಪ್ನಗರ

ಇಲಾಖೆಗಳ ಲೋಪದಿಂದ ದಕ್ಕದ ಸೌಲಭ್ಯ :ಆಕ್ಷೇಪ

ಶಿರಸಿ: ಸರಕಾರದ ಹಲವಾರು ಜನಪರ ಯೋಜನೆಗಳು ಜಾರಿಗೊಂಡು, ಸಂಬಂಧಿಸಿದ ಅನುದಾನ ಬಿಡುಗಡೆಯಾಗಿದ್ದರೂ ಸಹ ಫಲಾನುಭವಿಗಳಿಗೆ ಯೋಜನೆಗಳ ಸಹಾಯಧನ ದೊರೆಯದ ಪರಿಸ್ಥಿತಿ ಇಲಾಖೆಗಳ ಸಮನ್ವಯ ಕೊರತೆಯಿಂದ ನಿರ್ಮಾಣವಾಗುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಜಿ.ಎನ್‌ ಹೆಗಡೆ ಮುರೇಗಾರ್‌ ಹೇಳಿದರು.

Vijaya Karnataka 30 Dec 2018, 5:00 am
ಶಿರಸಿ: ಸರಕಾರದ ಹಲವಾರು ಜನಪರ ಯೋಜನೆಗಳು ಜಾರಿಗೊಂಡು, ಸಂಬಂಧಿಸಿದ ಅನುದಾನ ಬಿಡುಗಡೆಯಾಗಿದ್ದರೂ ಸಹ ಫಲಾನುಭವಿಗಳಿಗೆ ಯೋಜನೆಗಳ ಸಹಾಯಧನ ದೊರೆಯದ ಪರಿಸ್ಥಿತಿ ಇಲಾಖೆಗಳ ಸಮನ್ವಯ ಕೊರತೆಯಿಂದ ನಿರ್ಮಾಣವಾಗುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಜಿ.ಎನ್‌ ಹೆಗಡೆ ಮುರೇಗಾರ್‌ ಹೇಳಿದರು.
Vijaya Karnataka Web the disadvantage of the departments of the departments objection
ಇಲಾಖೆಗಳ ಲೋಪದಿಂದ ದಕ್ಕದ ಸೌಲಭ್ಯ :ಆಕ್ಷೇಪ


ನಗರದ ತಾಪಂ ಸಭಾಂಗಣದಲ್ಲಿ ಗುರುವಾರ ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆ ವತಿಯಿಂದ ಚುನಾಯಿತ ಪ್ರತಿನಿಧಿಗಳಿಗೆ ರಾಷ್ಟ್ರೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಾರ್ಯಕ್ರಮಗಳ ಹಾಗೂ ಯೋಜನೆಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸರಕಾರದ ಯೋಜನೆಗಳ ಕುರಿತು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಸೂಕ್ತ ಮಾಹಿತಿಗಳಿರಬೇಕು. ಇಲ್ಲವಾದಲ್ಲಿ ಗ್ರಾಮೀಣ ಭಾಗದ ಜನತೆಗೆ ನ್ಯಾಯ ದೊರಕಿಸಲು ಸಾಧ್ಯವಿಲ್ಲ. ಸರಕಾರ ಜನತೆಗೆ ನೀಡಿದ ಯೋಜನೆಗಳನ್ನು ಜನತೆಗೆ ತಲುಪಿಸುವ ಮೂಲಕ ಸಮರ್ಪಕವಾಗಿ ಅನುಷ್ಠಾನಕ್ಕೆ ತರುವುದು ಅಧಿಕಾರಿಗಳ ಕರ್ತವ್ಯವಾಗಿದೆ. ಆದರೆ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ ್ಯದ ಪರಿಣಾಮ ಗ್ರಾಮೀಣ ಜನತೆ ತೊಂದರೆ ಅನುಭವಿಸುವಂತಾಗಿದೆ ಎಂದರು.

ಜೊತೆಯಲ್ಲಿ ಅಧಿಕಾರಿಗಳು ವಾಸ್ತವಾಂÍ ಅರಿಯದೆ ನಿಯಮಗಳನ್ನು ಅವಳವಡಿಕೆ ಮಾಡುತ್ತಿದ್ದಾರೆ. ಯೋಜನೆ ಪಡೆಯಲು ಫಲಾನುಭವಿ ಬೈಕ್‌, ಮೊಬೈಲ್‌ ಹೊಂದಿರಬಾರದೆಂದು ನಿಯಮ ರೂಪಿಸಿದ್ರೆ ಜಾರಿಗೆ ತರಲು ಹೇಗೆ ಸಾಧ್ಯವಿದೆ ಎಂದು ಪ್ರಶ್ನಿಸಿದ ಅವರು, ಅಧಿಕಾರಿಗಳು ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ವೇಳೆ ನಿಯಮಗಳ ಸರಳೀಕರಣ ಮಾಡಬೇಕು. ವಾಸ್ತವಾಂಶ ಅರಿತು ಮಾನವೀಯತೆಯನ್ನಾಧರಿಸಿ ಕೆಲಸ ಮಾಡಬೇಕು ಎಂದರು.

ಅಧಿಕಾರಿಗಳು ಸರಕಾರಿ ಕಾರ್ಯಕ್ರಮಗಳ ಕುರಿತು ಜನತೆಗೆ ವಾರಗಳ ಮೊದಲೆ ಮಾಹಿತಿ ನೀಡಬೇಕು. ಪತ್ರಿಕಾ ಪ್ರಕಟಣೆಗಳ ಮೂಲಕ ಜನಸಾಮಾನ್ಯರಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆಯೂ ಸೂಚಿಸಬೇಕು. ಆದರೆ ಸರಕಾರದ ಕಾರ್ಯಕ್ರಮಗಳೆಲ್ಲವೂ ಕಾಟಾಚಾರಕ್ಕೆ ನಡೆಯುವಂತೆ ತೋರುತ್ತಿದೆ. ಕಾರ್ಯಕ್ರಮದ ಹಿಂದಿನ ದಿನ ಜನಪ್ರತಿನಿಧಿಗಳಿಗೆ ಕಾರ್ಯಕ್ರಮಕ್ಕೆ ಆಗಮಿಸಿ ಉದ್ಘಾಟಿಸುವಂತೆ ತಿಳಿಸುತ್ತಾರೆ. ಈ ವರ್ತನೆಯಿಂದ ಸರಕಾರಿ ಕಾರ್ಯಕ್ರಮಗಳ ಪ್ರಯೋಜನ ಪಡೆದುಕೊಳ್ಳಬೇಕಿದ್ದ ಸಾರ್ವಜನಿಕರ ಪಾಲ್ಗೊಳ್ಳುವಿಕೆಯೆ ಕಡಿಮೆಯಿರುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜಿಪಂ ಸದಸ್ಯ ಬಸವರಾಜ ದೊಡ್ಮನಿ, ತಾಪಂ ಅಧ್ಯಕ್ಷೆ ಶ್ರೀಲತಾ ಕಾಳೇರಮನೆ, ಸದಸ್ಯರಾದ ರವಿ ಹೆಗಡೆ, ರತ್ನಾ ಶೆಟ್ಟಿ, ನರಸಿಂಹ ಹೆಗಡೆ, ನಾಗರಾಜ ಶೆಟ್ಟಿ, ಜಿಪಂ ಸದಸ್ಯ ಬಸವರಾಜ ದೊಡ್ಮನಿ ಇನ್ನಿತರರು ಉಪಸ್ಥಿತರಿದ್ದರು. ತಾಲೂಕು ವೈದ್ಯಾಧಿಕಾರಿ ಡಾ.ವಿಣಾಯಕ ಕಣ್ಣಿ ಸ್ವಾಗತಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ