ಆ್ಯಪ್ನಗರ

ಕತ್ತಲೆ ಕಳೆದು ಬೆಳಕು ಮೂಡಲಿ

ಗೋಕರ್ಣ : ಜಗತ್ತನ್ನು ಮಾರಕ ವ್ಯಾಧಿ ಪೀಡಿಸುತ್ತಿದ್ದು, ಇಡೀ ಜಗತ್ತೇ ಕಂಗಾಲಾಗಿದೆ. ನಿಜಕ್ಕೂ ಜಗತ್ತು ಕತ್ತಲಲ್ಲಿ, ಕಷ್ಟದಲ್ಲಿದೆ. ಬೆಳಕು ಸಿಗುತ್ತಿಲ್ಲ. ಜಗತ್ತಿನ ಅಮಾವಾಸ್ಯೆ ಪೂರ್ಣಿಮೆಯಾಗಿ ಪರಿವರ್ತನೆಯಾಗಲಿ ಎಂದು ಶ್ರೀ ರಾಘವೇಶ್ವರ ಭಾರತೀ ಶ್ರೀ ನುಡಿದರು.

Vijaya Karnataka 6 Jul 2020, 5:00 am
ಗೋಕರ್ಣ : ಜಗತ್ತನ್ನು ಮಾರಕ ವ್ಯಾಧಿ ಪೀಡಿಸುತ್ತಿದ್ದು, ಇಡೀ ಜಗತ್ತೇ ಕಂಗಾಲಾಗಿದೆ. ನಿಜಕ್ಕೂ ಜಗತ್ತು ಕತ್ತಲಲ್ಲಿ, ಕಷ್ಟದಲ್ಲಿದೆ. ಬೆಳಕು ಸಿಗುತ್ತಿಲ್ಲ. ಜಗತ್ತಿನ ಅಮಾವಾಸ್ಯೆ ಪೂರ್ಣಿಮೆಯಾಗಿ ಪರಿವರ್ತನೆಯಾಗಲಿ ಎಂದು ಶ್ರೀ ರಾಘವೇಶ್ವರ ಭಾರತೀ ಶ್ರೀ ನುಡಿದರು.
Vijaya Karnataka Web 5 GKN 1 A_24
ಗೋಕರ್ಣದ ಅಶೋಕೆಯ ವಿಷ್ಣುಗುಪ್ತ ವಿದ್ಯಾಪೀಠದ ಪರಿಸರದಲ್ಲಿ ಭಾನುವಾರ 27ನೇ ಚಾತುರ್ಮಾಸ್ಯದ ವ್ಯಾಸಪೂಜೆ ನೆರವೇರಿಸಿ ಶ್ರೀ ರಾಘವೇಸ್ವರ ಶ್ರೀಗಳು ಆಶೀರ್ವಚನ ನೀಡಿದರು.


ಗೋಕರ್ಣದ ಅಶೋಕೆಯ ವಿಷ್ಣುಗುಪ್ತ ವಿದ್ಯಾಪೀಠದ ಪರಿಸರದಲ್ಲಿ ಭಾನುವಾರ 27ನೇ ಚಾತುರ್ಮಾಸ್ಯದ ವ್ಯಾಸಪೂಜೆ ನೆರವೇರಿಸಿ ಪೂಜ್ಯರು ಆಶೀರ್ವಚನ ನೀಡಿದರು.

ಅಂತರಂಗದಲ್ಲಿಜ್ಞಾನದ ಬೆಳಕು ಹಾಗೂ ಚೈತನ್ಯದ ತಂಪನ್ನು ಉಂಟುಮಾಡುವಂಥದ್ದು ಗುರು ಪೂರ್ಣಿಮೆ. ಶಾರ್ವರಿ ಎಂದರೆ ಕತ್ತಲು, ಪೂರ್ಣಿಮೆ ಎಂದರೆ ಬೆಳಕು. ಕತ್ತಲೆಯ ಮಧ್ಯೆ ಬೆಳಗುವಂತಹ ಬೆಳಕು. ಸೂರ್ಯನ ಬೆಳಕಿನ ತಾಪ ಧಗೆಯನ್ನು ಉಂಟು ಮಾಡುತ್ತದೆ. ಆದರೆ ಪೂರ್ಣಿಮೆ ಬೆಳಕು, ತಂಪು ನೀಡುತ್ತದೆ. ಶಾರ್ವರಿ ಗುರು ಪೂರ್ಣಿಮೆ ಎಂದರೆ ಗುರು ತಂದ ಬೆಳಕಾಗಿದೆ ಎಂದರು.

ಭಾರತದಲ್ಲಿಉಂಟಾದ ಜ್ಞಾನ ಪ್ರಕಾಶ ಪ್ರಪಂಚದಲ್ಲೆಲ್ಲೂಆಗಿಲ್ಲ. ಇಂತಹ ದೊಡ್ಡ ಜ್ಞಾನಧನದ ವಾರಸುದಾರರು ನಾವಾಗಿದ್ದು, ಇಂದು ಎಲ್ಲವನ್ನೂ ಕಳೆದುಕೊಂಡಿದ್ದೇವೆ. ದೇಶಕ್ಕೆ ಕತ್ತಲು ಆವರಿಸಿದೆ. ಈ ಕತ್ತಲೆಯನ್ನು ನಿವಾರಿಸಲು ಗುರುಪೂರ್ಣಿಮೆಯೇ ಬೇಕಾಗಿದೆ ಎಂದು ನುಡಿದರು.

ಈ ಚಾತುರ್ಮಾಸ್ಯದ ಉದ್ದೇಶವೇ ವಿದ್ಯೆ. ವಿದ್ಯೆ ಉಳಿಯಬೇಕು, ವಿದ್ಯೆ ಬೆಳೆಯಬೇಕು, ಬೆಳಗಬೇಕು, ಮತ್ತೊಮ್ಮೆ ವಿದ್ಯೆಯ ಪುನಪ್ರತಿಷ್ಠಾಪನೆ ಆಗಬೇಕಾಗಿದೆ ಎಂಬ ಕಾರಣಕ್ಕೆ ಒಂದು ವಿಶ್ವ ವಿದ್ಯಾ ಪೀಠ, ಐದು ಗುರುಕುಲಗಳನ್ನು ಸ್ಥಾಪನೆ ಮಾಡಲಾಗುತ್ತಿದೆ. ಈ ಮೂಲಕ ದೇಶದ ಕತ್ತಲನ್ನು ದೂರ ಮಾಡುವ ಕಾರ್ಯ ಮಾಡಲಾಗುತ್ತಿದೆ ಎಂದರು.

ವ್ಯಾಧಿತಂದ ಕಷ್ಟ ನಷ್ಟ, ಯುದ್ಧ ಭೀತಿ ಈ ಮೂರು ಬಗೆಯ ಕಷ್ಟದಲ್ಲಿಕತ್ತಲೆಯಲ್ಲಿದೇಶ ಇರುವ ಹೊತ್ತು. ದೇಶಕ್ಕೆ ಬಂದ ಕತ್ತಲೆ ನಿವಾರಣೆಯಾಗಲಿ, ದೇಶ ಬೆಳಕಾಗಲಿ, ದೇಶಕ್ಕೆ ಒಳಿತಾಗಲಿ ಎಂದು ಶಂಕರಾಚಾರ್ಯ ಪರಂಪರೆಯ ಪೀಠ ಹಾರೈಸುತ್ತದೆ ಎಂದರು.

ಶನಿವಾರ ಸಂಜೆ ಶ್ರೀಗಳವರ ಪುರಪ್ರವೇಶ ಕಾರ್ಯಕ್ರಮ ನಡೆಯಿತು. ಭಾನುವಾರ ಶ್ರೀಕರಾರ್ಚಿತ ಪೂಜೆ, ವ್ಯಾಸಪೂಜೆ, ಭಿಕ್ಷಾ ಸೇವೆ ನಡೆಯಿತು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ