ಆ್ಯಪ್ನಗರ

ತಿಂಗಳಿಗೊಮ್ಮೆ ಜನಸಂಪರ್ಕ ಸಭೆ ನಡೆಸಲು ಸೂಚಿಸಿರುವೆ

ಶಿರಸಿ : ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ತಿಂಗಳಿಗೊಮ್ಮೆ ಕಡ್ಡಾಯವಾಗಿ ಜನಸಂಪರ್ಕ ಸಭೆಗಳನ್ನು ಆಯೋಜನೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವದಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೂತನ ಅಧ್ಯಕ್ಷ ವಿ.ಎಸ್‌ ಪಾಟಿಲ್‌ ಹೇಳಿದರು.

Vijaya Karnataka 18 Oct 2019, 5:00 am
ಶಿರಸಿ : ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ತಿಂಗಳಿಗೊಮ್ಮೆ ಕಡ್ಡಾಯವಾಗಿ ಜನಸಂಪರ್ಕ ಸಭೆಗಳನ್ನು ಆಯೋಜನೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವದಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೂತನ ಅಧ್ಯಕ್ಷ ವಿ.ಎಸ್‌ ಪಾಟಿಲ್‌ ಹೇಳಿದರು.
Vijaya Karnataka Web they have been advised to hold a public meeting once a month
ತಿಂಗಳಿಗೊಮ್ಮೆ ಜನಸಂಪರ್ಕ ಸಭೆ ನಡೆಸಲು ಸೂಚಿಸಿರುವೆ


ನಗರದ ಪ್ರವಾಸಿ ಮಂದಿರದಲ್ಲಿಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸ್ಥೆಯನ್ನು ಇನ್ನಷ್ಟು ಜನಸ್ನೇಹಿಯನ್ನಾಗಿಸಲು ಸಾರ್ವಜನಿಕರ ಸಭೆ ನಡೆಸಬೇಕು. ಸಾರಿಗೆ ಸಂಸ್ಥೆಯ ಅಧಿಕಾರಿಗಳು ಜನರೊಂದಿಗೆ ಬೆರೆಯಬೇಕು, ಸೌಹಾರ್ದ ರೀತಿಯಲ್ಲಿವರ್ತಿಸಬೇಕು ಎಂದು ಸೂಚಿಸಿದ್ದೇನೆ ಎಂದರು.

ತಿಂಗಳ ಮೊದಲ ವಾರದಲ್ಲಿದಿನಾಂಕ ನಿಗದಿ ಪಡಿಸಿ ಸಭೆ ನಡೆಸಲಾಗುತ್ತದೆ. ಸಾರ್ವಜನಿಕರು ತಮ್ಮ ಬೇಡಿಕೆಗಳನ್ನು ಸಭೆಯಲ್ಲಿಸಲ್ಲಿಸಬಹುದಾಗಿದೆ. ಅಲ್ಲದೇ ಸ್ಥಳಿಯ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಸಾರ್ವಜನಿಕರೆದುರಲ್ಲಿಯೇ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ. ಜನಸಂಪರ್ಕ ಸಭೆಯಲ್ಲಿತಾನೂ ಕೂಡ ಭಾಗಿಯಾಗುತ್ತೇನೆ ಎಂದರು.

ಸಂಸ್ಥೆಗೆ ಸರ್ಕಾರದಿಂದ ಸಾಕಷ್ಟು ಹಣ ಬರುವುದು ಬಾಕಿ ಇದೆ. ಕೆಲವೇ ದಿನಗಳಲ್ಲಿಸಾರಿಗೆ ಸಚಿವರನ್ನು ಭೇಟಿ ಮಾಡಿ ಸರ್ಕಾರದಿಂದ ಬರಬೇಕಿರುವ 771ಕೋಟಿ ರೂ.ಗಳನ್ನು ನೀಡುವಂತೆ ಮನವಿ ಮಾಡಲಾಗುತ್ತದೆ. ಸಂಸ್ಥೆಯು ನಷ್ಟದಲ್ಲಿಮುನ್ನಡೆಯುತ್ತಿದ್ದರೂ ಜನಸಾಮಾನ್ಯರ ಸೇವೆಗೆ ತೊಂದರೆಯಾಗುವಂತಹ ಯಾವುದೇ ನಿರ್ಣಯ ಕೈಗೊಳ್ಳುವುದಿಲ್ಲ. ಸರ್ಕಾರದಿಂದ ಹೆಚ್ಚಿನ ಅನುದಾನ ಪಡೆದು ಜನಸ್ನೇಹಿ ಸಂಸ್ಥೆಯನ್ನಾಗಿ ಮಾಡಲಾಗುತ್ತದೆ ಎಂದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ