ಆ್ಯಪ್ನಗರ

ಟಿಪ್ಪು ಜಯಂತಿ ಆಮಂತ್ರಣದಲ್ಲಿ ಹೆಸರು: ಉ.ಕ. ಡಿಸಿಗೆ ಪೀಕಲಾಟ

ಟಿಪ್ಪು ಜಯಂತಿಯ ಆಮಂತ್ರಣ ಪತ್ರಿಕೆಯಲ್ಲಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರ ಹೆಸರು ಹಾಕಬೇಕೆ, ಬೇಡವೆ ಎಂಬ ಬಗ್ಗೆ ಉತ್ತರ ಕನ್ನಡ ಜಿಲ್ಲಾಡಳಿತಕ್ಕೆ ಇನ್ನೂ ಸ್ಪಷ್ಟತೆಯಿಲ್ಲ.

Vijaya Karnataka 5 Nov 2017, 8:44 am

ಕಾರವಾರ: ಟಿಪ್ಪು ಜಯಂತಿಯ ಆಮಂತ್ರಣ ಪತ್ರಿಕೆಯಲ್ಲಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರ ಹೆಸರು ಹಾಕಬೇಕೆ, ಬೇಡವೆ ಎಂಬ ಬಗ್ಗೆ ಉತ್ತರ ಕನ್ನಡ ಜಿಲ್ಲಾಡಳಿತಕ್ಕೆ ಇನ್ನೂ ಸ್ಪಷ್ಟತೆಯಿಲ್ಲ. ಈ ಕುರಿತು ಜಿಲ್ಲಾಡಳಿತ ರಾಜ್ಯ ಶಿಷ್ಟಾಚಾರ ನಿರ್ವಹಣೆ ಸಮಿತಿಗೆ ಪತ್ರ ಬರೆದು ಮಾರ್ಗದರ್ಶನ ನೀಡುವಂತೆ ಕೋರಿದೆ.

ಟಿಪ್ಪು ಜಯಂತಿಯ ಆಮಂತ್ರಣ ಪತ್ರಿಕೆಯಲ್ಲಿ ತಮ್ಮ ಹೆಸರು ನಮೂದಿಸದಂತೆ ಸಚಿವ ಅನಂತಕುಮಾರ ಹೆಗಡೆ ಜಿಲ್ಲಾಡಳಿತದ ಮೂಲಕ ರಾಜ್ಯ ಸರಕಾರಕ್ಕೆ ಪತ್ರ ಬರೆದು ಸೂಚಿಸಿದ್ದರು.

ನ. 10 ರಂದೇ ಟಿಪ್ಪು ಜಯಂತಿ ನಡೆಯಲಿರುವ ಕಾರಣ ಇನ್ನು ಒಂದೆರಡು ದಿನಗಳಲ್ಲಿ ಆಮಂತ್ರಣ ಪತ್ರಿಕೆ ಮುದ್ರಣಕ್ಕೆ ನೀಡಬೇಕಿದೆ. ಆಮಂತ್ರಣದಲ್ಲಿ ಹೆಸರು ಹಾಕದಿದ್ದರೆ ಶಿಷ್ಟಾಚಾರ ಉಲ್ಲಂಘನೆ ಆಗುತ್ತದೆ ಎಂಬ ಭಯ ಒಂದೆಡೆಯಾದರೆ ಸ್ವತಃ ಸಚಿವರೇ ಹೆಸರು ಹಾಕದಂತೆ ಸೂಚನೆ ನೀಡಿರುವುದರಿಂದ ಜಿಲ್ಲಾಡಳಿತ ಗೊಂದಲಕ್ಕೆ ಸಿಲುಕಿದೆ.

Vijaya Karnataka Web tipu jayanthi anant kumar hegde
ಟಿಪ್ಪು ಜಯಂತಿ ಆಮಂತ್ರಣದಲ್ಲಿ ಹೆಸರು: ಉ.ಕ. ಡಿಸಿಗೆ ಪೀಕಲಾಟ


ಈ ಹಿನ್ನೆಲೆಯಲ್ಲಿ ಸ್ಪಷ್ಟ ಸೂಚನೆ ನೀಡುವಂತೆ ಶಿಷ್ಟಾಚಾರ ಸಮಿತಿಗೆ ಪತ್ರ ಬರೆದಿರುವುದಾಗಿ ಜಿಲ್ಲಾಧಿಕಾರಿ ಎಸ್‌. ಎಸ್‌. ನಕುಲ್‌ 'ವಿಜಯ ಕರ್ನಾಟಕ'ಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ಅರ್ಥಪೂರ್ಣ ಆಚರಣೆ

ಟಿಪ್ಪು ಜಯಂತಿಯನ್ನು ಕಾರವಾರದ ಜಿಲ್ಲಾ ರಂಗಮಂದಿರದಲ್ಲಿ ನ. 10ರಂದು ಅರ್ಥಪೂರ್ಣವಾಗಿ ಆಚರಿಸಲು ಉತ್ತರ ಕನ್ನಡ ಜಿಲ್ಲಾಡಳಿತ ನಿರ್ಧರಿಸಿದೆ. ಈ ಕುರಿತು ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ಜಯಂತಿ ಅಂಗವಾಗಿ ಕಾರವಾರದ ಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆ ಅಥವಾ ಚಿತ್ರ ರಚನಾ ಸ್ಪರ್ಧೆ ಆಯೋಜಿಸಲಾಗುವುದು ಎಂದು ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್‌ ಅಧೀಕ್ಷ ಕ ವಿನಾಯಕ ಪಾಟೀಲ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಮಕೃಷ್ಣ ನಾಯಕ್‌ ಇತರರು ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ