ಆ್ಯಪ್ನಗರ

ಮತದಾರರ ಪಟ್ಟಿ ಪರಿಶೀಲನೆ: ಶೇ.27 ಸಾಧನೆ

ಕಾರವಾರ : ಸಮಗ್ರ ಮತದಾರರ ಪಟ್ಟಿಯ ವಿಶೇಷ ಪರಿಶೀಲನೆ ಕಾರ್ಯಕ್ರಮದಲ್ಲಿಶೇ.27ರಷ್ಟು ಸಾಧನೆ ಮಾಡುವ ಮೂಲಕ ಉತ್ತರ ಕನ್ನಡ ಜಿಲ್ಲೆರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ ಎಂದು ಜಿಲ್ಲಾಧಿಕಾರಿ ಡಾ.ಹರೀಶ್‌ಕುಮಾರ್‌ ಪ್ರಕಟಣೆಯಲ್ಲಿತಿಳಿಸಿದ್ದಾರೆ.

Vijaya Karnataka 13 Oct 2019, 5:00 am
ಕಾರವಾರ : ಸಮಗ್ರ ಮತದಾರರ ಪಟ್ಟಿಯ ವಿಶೇಷ ಪರಿಶೀಲನೆ ಕಾರ್ಯಕ್ರಮದಲ್ಲಿಶೇ.27ರಷ್ಟು ಸಾಧನೆ ಮಾಡುವ ಮೂಲಕ ಉತ್ತರ ಕನ್ನಡ ಜಿಲ್ಲೆರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ ಎಂದು ಜಿಲ್ಲಾಧಿಕಾರಿ ಡಾ.ಹರೀಶ್‌ಕುಮಾರ್‌ ಪ್ರಕಟಣೆಯಲ್ಲಿತಿಳಿಸಿದ್ದಾರೆ.
Vijaya Karnataka Web voter check 27 performance
ಮತದಾರರ ಪಟ್ಟಿ ಪರಿಶೀಲನೆ: ಶೇ.27 ಸಾಧನೆ


ಮತದಾರರ ಪಟ್ಟಿಗೆ ಸೇರ್ಪಡೆ, ತೆಗೆದು ಹಾಕುವುದು, ಪರಿಶೀಲನೆ ಮತ್ತು ದೃಢೀಕರಣ ಹಾಗೂ ಮತದಾರರ ಪಟ್ಟಿಯನ್ನು ತಿದ್ದುಪಡಿ ಕುರಿತಂತೆ ಸಮಗ್ರ ಮತದಾರರ ಪಟ್ಟಿ ವಿಶೇಷ ಪರಿಶೀಲನೆ ಕಾರ್ಯಕ್ರಮ ಸೆಪ್ಟೆಂಬರ್‌ 1ರಿಂದ ಅಕ್ಟೋಬರ್‌ 15ರ ವರೆಗೆ ನಡೆಯುತ್ತಿದೆ. ಜಿಲ್ಲೆಯ ಒಟ್ಟು ಮತದಾರರ ಸಂಖ್ಯೆ 11,54,745 ಇದ್ದು ಈವರೆಗೆ ಶೇ.27ರಷ್ಟು ಪ್ರಗತಿ ಸಾಧಿಸಿ ರಾಜ್ಯದಲ್ಲಿಯೇ ಅತಿಹೆಚ್ಚು ಮತದಾರರು ಪರಿಶೀಲನೆ ಕಾರ್ಯಕ್ರಮದಲ್ಲಿಭಾಗಿಯಾದ ಹೆಗ್ಗಳಿಕೆಗೆ ಪಾತ್ರವಾಗಿದೆ.

ಜಿಲ್ಲೆಯಲ್ಲಿಅಕ್ಟೋಬರ್‌ 11ರ ವರೆಗೆ 3,08,089 ಮತದಾರರು ಮತದಾರರ ಪಟ್ಟಿ ಪರಿಶೀಲನೆ ಮಾಡಿದ್ದು ಶೇ.27ರಷ್ಟು ಪ್ರಗತಿ ಸಾಧಿಸಿದೆ. ಇನ್ನೂ ಅಕ್ಟೋಬರ್‌ 15ರ ವರೆಗೆ ಕಾಲಾವಕಾಶವಿರುವ ಹಿನ್ನೆಲೆಯಲ್ಲಿಮತ್ತಷ್ಟು ಹೆಚ್ಚಿನ ಸಂಖ್ಯೆಯಲ್ಲಿಮತದಾರರು ತಮ್ಮ ಹೆಸರು ಸೇರ್ಪಡೆ, ತಿದ್ದುಪಡಿ ಅಥವಾ ತೆಗೆದು ಹಾಕುವ, ಪರಿಶೀಲಿಸುವ ಪ್ರಕ್ರಿಯೆಯನ್ನು ಮಾಡುವ ಮೂಲಕ ಶೇ.100 ಶುದ್ಧ ಮತದಾರರ ಪಟ್ಟಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಡಾ.ಹರೀಶ್‌ಕುಮಾರ್‌ ತಿಳಿಸಿದ್ದಾರೆ.

ಚುನಾವಣಾ ಆಯೋಗ ನಿಗದಿಪಡಿಸಿದ ಸೂಕ್ತ ದಾಖಲೆಗಳೊಂದಿಗೆ ಅಕ್ಟೋಬರ್‌ 15ರೊಳಗೆ ಸಾಮಾನ್ಯ ಸೇವಾ ಕೇಂದ್ರ, ಮತಗಟ್ಟೆ ಅಧಿಕಾರಿ ಅಥವಾ ಮತದಾರರ ನೋಂದಾಣಾಧಿಕಾರಿಗಳ ಕಚೇರಿಯ ಮತದಾರರ ಪೂರಕಕೇಂದ್ರ (1950)ರಲ್ಲಿಪರಿಶೀಲಿಸಿ ಕೊಳ್ಳಬಹುದು ಹಾಗೂ ಸೂಕ್ತ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ