ಆ್ಯಪ್ನಗರ

ಜೊಯಿಡಾ: ಕೊಚ್ಚಿಹೊದ ಬೆಳೆ

ಜೊಯಿಡಾ: ತಾಲೂಕಿನ ಅಣಶಿ ಗ್ರಾ.ಪಂ. ವ್ಯಾಪ್ತಿಯ ಕುಮಗಾಳಿ ಗ್ರಾಮದಲ್ಲಿ ಬುಧವಾರ ರಾತ್ರಿ ಸುರಿದ ಭಾರಿ ಮಳೆಗೆ ರೈತರ ಬಿತ್ತನೆ ಮಾಡಿದ ಬೆಳೆ ಸಂಪೂರ್ಣ ಕೊಚ್ಚಿಹೋಗಿದೆ.

Vijaya Karnataka 12 Jul 2019, 5:00 am
ಜೊಯಿಡಾ: ತಾಲೂಕಿನ ಅಣಶಿ ಗ್ರಾ.ಪಂ. ವ್ಯಾಪ್ತಿಯ ಕುಮಗಾಳಿ ಗ್ರಾಮದಲ್ಲಿ ಬುಧವಾರ ರಾತ್ರಿ ಸುರಿದ ಭಾರಿ ಮಳೆಗೆ ರೈತರ ಬಿತ್ತನೆ ಮಾಡಿದ ಬೆಳೆ ಸಂಪೂರ್ಣ ಕೊಚ್ಚಿಹೋಗಿದೆ.
Vijaya Karnataka Web zoida a crop of minnows
ಜೊಯಿಡಾ: ಕೊಚ್ಚಿಹೊದ ಬೆಳೆ


ಅಣಶಿ ಗ್ರಾ.ಪಂ. ವ್ಯಾಪ್ತಿಯ ಕುಮಗಾಳಿ, ವಾಸಪಡ, ಗಾಳ, ಆಂಬಾಳಿ ಗ್ರಾಮದಲ್ಲಿ ಬುಧವಾರ ರಾತ್ರಿ ಭಾರಿ ಮಳೆಯಾಗಿದೆ. ಕುಮಗಾಳಿ ಗ್ರಾಮದಲ್ಲಿ ಹರಿಯುವ ಹೊಳೆಯ ಅಂಚಿನಲ್ಲಿ ರೈತರು ಬಿತ್ತನೆ ಮಾಡಿದ್ದರು. ಭಾರಿಮಳೆಯಿಂದ 21 ರೈತರ ಬಿತ್ತನೆ ಮಾಡಿದ ಗದ್ದೆಯಲ್ಲಿ ನೀರು ತುಂಬಿದೆ.

ಹಾನಿಗೊಳಗಾದ ಗ್ರಾಮಸ್ಥರು ಪರಿಹಾರಕ್ಕಾಗಿ ಮನವಿ ಮಾಡಿದ್ದಾರೆ. ಕಂದಾಯ ಹಾಗೂ ಕೃಷಿ ಇಲಾಖೆಯಿಂದ ಜಂಟಿ ಸಮೀಕ್ಷೆ ಮಾಡಿ ಪರಿಹಾರ ನೀಡಲು ಕ್ರಮಕೈಗೊಳ್ಳುವುದಾಗಿ ತಹಸೀಲ್ದಾರ್‌ ಸಂಜಯ ಕಾಂಬ್ಳೆ ಮಾಹಿತಿ ನೀಡಿದ್ದಾರೆ.

ಅಣಶಿ ಗ್ರಾ.ಪಂ. ವ್ಯಾಪ್ತಿಯಲ್ಲೂ ಭಾರಿ ಮಳೆಯಿಂದಾಗಿ ರೈತರ ಭತ್ತದ ಬೆಳೆ ಕೊಚ್ಚಿಹೋಗಿದೆ. ರೈತರಿಗೆ ಪರಿಹಾರ ನೀಡಬೇಕೆಂದು ಅಣಶಿ ಗ್ರಾ.ಪಂ.ಸದಸ್ಯ ಮಹಾದೇವ ಗಾವಡಾ ಅಗ್ರಹಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ