ಆ್ಯಪ್ನಗರ

ಸಿಎಂ ಯಡಿಯೂರಪ್ಪ ವಿರುದ್ಧ ಯತ್ನಾಳ ಮತ್ತೆ ಗುಡುಗು

ಮೊನ್ನೆ ನಾನು ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ್ದೆ. ನಾನು ಸಚಿವನೇ ಆಗಿಲ್ಲ. ಸಿಎಂ ಸ್ಥಾನದ ಆಕಾಂಕ್ಷಿಯಂತೂ ಅಲ್ಲವೇ ಅಲ್ಲ. ಯಾರ ಹಣೆಯಲ್ಲಿ ಏನು ಬರೆದಿದೆ ಯಾರಿಗೆ ಗೊತ್ತು ಎಂದು ಬಸನಗೌಡ ಪಾಟೀಲ್‌ ಯತ್ನಾಳ್‌ ತಿಳಿಸಿದರು.

Vijaya Karnataka Web 30 Oct 2020, 7:47 pm
ವಿಜಯಪುರ: ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ವಿರುದ್ಧ ಕತ್ತಿ ಮಸೆಯುತ್ತಿರುವ ಬಸನಗೌಡ ಪಾಟೀಲ್‌ ಯತ್ನಾಳ ಮತ್ತೆ ಗುಡುಗಿದ್ದಾರೆ.
Vijaya Karnataka Web ಬಸನಗೌಡ ಪಾಟೀಲ್‌ ಯತ್ನಾಳ


ವಿಜಯಪುರದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಮಾತನಾಡಿದರು.

ಯಡಿಯೂರಪ್ಪ 3 ವರ್ಷ ಮುಖ್ಯಮಂತ್ರಿ ಆಗಿರ್ತಾರೆ ಎಂದು ನಾನೇನೂ ಹೇಳುವುದಿಲ್ಲ. ಸೂರ್ಯ, ಚಂದ್ರರಿರುವಷ್ಟು ದಿನ ಸಿಎಂ ಆಗಿರ್ತಾರೆ ಎಂದು ಹೇಳಲ್ಲ ಎಂದು ತಮ್ಮದೇ ಧಾಟಿಯಲ್ಲಿ ಗುಡುಗಿದ್ದಾರೆ.

ನಾನ್ಯಾವುದೇ ವಿವಾದಾತ್ಮಕ ಹೇಳಿಕೆ ನೀಡಿಲ್ಲ. ಅನುದಾನ ತಡೆಯನ್ನು ಪ್ರಶ್ನಿಸಿದ್ದೇನೆ. ಅದಕ್ಕೆ ಈಗ ರಾಜ್ಯದ ಬಹುತೇಕ ಮಹಾನಗರ ಪಾಲಿಕೆಗಳಿಗೆ ಹಣ ಬಿಡುಗಡೆ ಮಾಡಲಾಗಿದೆ ಎಂದು ಬಸನಗೌಡ ಪಾಟೀಲ್‌ ಯತ್ನಾಳ ತಿಳಿಸಿದರು.

"ಮಗು ಅಳದಿದ್ದರೆ ತಾಯಿ ಹಾಲು ಕುಡಿಸುವುದಿಲ್ಲ" ಎಂದು ಯತ್ನಾಳ್ ಮಾರ್ಮಿಕವಾಗಿ ಕುಟುಕಿದರು.

ಮೊನ್ನೆ ನಾನು ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ್ದೆ. ನಾನು ಸಚಿವನೇ ಆಗಿಲ್ಲ. ಸಿಎಂ ಸ್ಥಾನದ ಆಕಾಂಕ್ಷಿಯಂತೂ ಅಲ್ಲವೇ ಅಲ್ಲ. ಯಾರ ಹಣೆಯಲ್ಲಿ ಏನು ಬರೆದಿದೆ ಯಾರಿಗೆ ಗೊತ್ತು ಎಂದು ಬಸನಗೌಡ ಪಾಟೀಲ್‌ ಯತ್ನಾಳ್‌ ತಿಳಿಸಿದರು.

ಇತ್ತೀಚೆಗೆ ವಿ ಬಿಎಸ್‌ ಯಡಿಯೂರಪ್ಪ ಬಹಳ ದಿನ ಅಧಿಕಾರದಲ್ಲಿ ಇರುವುದಿಲ್ಲ, ಮೇಲಿನವರಿಗೂ ಯಡಿಯೂರಪ್ಪ ಸಾಕಾಗಿದ್ದಾರೆ ಎಂದು ಬಸನಗೌಡ ಪಾಟೀಲ ಯತ್ನಾಳ್ ಹೇಳಿಕೆ ನೀಡಿದ್ದು ಭಾರಿ ಚರ್ಚೆಗೆ ಕಾರಣವಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ