ಆ್ಯಪ್ನಗರ

ಬಾಲಕಾರ್ಮಿಕ ನಿರ್ಮೂಲನೆ ಎಲ್ಲರ ಹೊಣೆ

ವಿಜಯಪುರ : ಸಾರ್ವಜನಿಕರು, ಖಾಸಗಿ ಮತ್ತು ಸರಕಾರಿ ಸಂಸ್ಥೆಗಳು ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಾಮೂಹಿಕ ಜವಾಬ್ದಾರಿ ಹೊತ್ತರೆ ಸದೃಢ ರಾಷ್ಟ್ರ ನಿರ್ಮಾಣಕ್ಕೆ ಸಹಕಾರಿಯಾಗಲಿದೆ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ ರವೀಂದ್ರ ಕಾರಬಾರಿ ಹೇಳಿದರು.

Vijaya Karnataka Web 13 Jun 2019, 5:00 am
ವಿಜಯಪುರ : ಸಾರ್ವಜನಿಕರು, ಖಾಸಗಿ ಮತ್ತು ಸರಕಾರಿ ಸಂಸ್ಥೆಗಳು ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಾಮೂಹಿಕ ಜವಾಬ್ದಾರಿ ಹೊತ್ತರೆ ಸದೃಢ ರಾಷ್ಟ್ರ ನಿರ್ಮಾಣಕ್ಕೆ ಸಹಕಾರಿಯಾಗಲಿದೆ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ ರವೀಂದ್ರ ಕಾರಬಾರಿ ಹೇಳಿದರು.
Vijaya Karnataka Web child labor is the responsibility of everyone
ಬಾಲಕಾರ್ಮಿಕ ನಿರ್ಮೂಲನೆ ಎಲ್ಲರ ಹೊಣೆ


ನಗರದ ಸಿದ್ದೇಶ್ವರ ಕಲಾಭವನದಲ್ಲಿ ಬುಧವಾರ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಸಾರ್ವಜನಿಕ ಶಿಕ್ಷ ಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ನ್ಯಾಯವಾದಿಗಳ ಸಂಘ ಹಾಗೂ ರಾಷ್ಟ್ರೀಯ ಬಾಲಕಾರ್ಮಿಕ ಯೋಜನಾ ಸಂಘದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಎಲ್ಲ ಇಲಾಖೆಗಳು ಒಟ್ಟುಗೂಡಿ, ಶಿಕ್ಷ ಣದಿಂದ ವಂಚಿತರಾದ 14 ವರ್ಷದೊಳಗಿನ ಮಕ್ಕಳನ್ನು ಶಾಲೆಗೆ ಸೇರಿಸುವ ನಿಟ್ಟಿನಲ್ಲಿ ತಾಲೂಕು ಮತ್ತು ಗ್ರಾಮ ಮಟ್ಟದಲ್ಲಿ ಕಾರ್ಯ ಪ್ರವೃತ್ತರಾಗಬೇಕು ಎಂದರು.

ನನ್ನ ನಡೆ ಶಾಲೆಯ ಕಡೆ :
ನನ್ನ ನಡೆ ಶಾಲೆಯ ಕಡೆ ಎಂಬ ಘೋಷವಾಕ್ಯದಡಿ ಬಾಲಕಾರ್ಮಿಕ ಪದ್ಧತಿಗೆ ಒಳಪಟ್ಟ ಮಕ್ಕಳ ಪಾಲಕರ ಮನವೊಲಿಸಿ ಮುಖ್ಯವಾಹಿನಿಗೆ ತರಲು ಎಲ್ಲರೂ ಶ್ರಮಿಸಬೇಕೆಂದು ರವೀಂದ್ರ ಕಾರಬಾರಿ ತಿಳಿಸಿದರು.

ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಎಂಬ ನಾಣ್ಣುಡಿಯಂತೆ ಎಲ್ಲ ವರ್ಗದ ಮಕ್ಕಳು ಶಿಕ್ಷ ಣವಂತರಾಗಬೇಕು. ಬಡತನ ಸೇರಿದಂತೆ ಹಲವು ಕಾರಣಗಳಿಂದ ಬಾಲಕಾರ್ಮಿಕ ಎಂಬ ಪಿಡುಗಿಗೆ ಒಳಗಾದ ಮಕ್ಕಳ ಸರ್ವತೋಮುಖ ಅಭಿವೃದ್ಧಿಯಾಗಬೇಕಾದರೆ ಎಲ್ಲರೂ ಜಾಗೃತರಾಗಿ ಬಾಲಕಾರ್ಮಿಕ ಪದ್ಧತಿಯನ್ನು ಹೋಗಲಾಡಿಸಿ, ಎಲ್ಲ ಮಕ್ಕಳು ಶಿಕ್ಷ ಣವಂತರಾಗಬೇಕು ಎಂದು ಹೇಳಿದರು.

ಶಿಕ್ಷಣವೇ ಮೂಲ ಮದ್ದು :
ಉಪವಿಭಾಗಾಧಿಕಾರಿ ರುದ್ರೇಶ್‌ ಅಧ್ಯಕ್ಷತೆ ವಹಿಸಿ, ಬಾಲಕಾರ್ಮಿಕ ಪದ್ಧತಿ ನೂರಾರು ವರ್ಷಗಳಿಂದ ರೂಢಿಯಲ್ಲಿರುವ ಪಿಡುಗಾಗಿದ್ದು, ಇದು ವಾಸಿ ಮಾಡದ ಗಾಯದಂತೆ ಬೆಳೆಯುತ್ತಿದೆ. ಈ ಗಾಯಕ್ಕೆ ಶಿಕ್ಷ ಣವೊಂದೇ ಮೂಲ ಮದ್ದಾಗಿದೆ ಎಂದರು.

ಯಾವುದೇ ಮತ, ಪಥ, ವರ್ಗ, ಕನಿಷ್ಠ, ಗರಿಷ್ಠ ಎನ್ನದೇ ಬಾಲ ಕಾರ್ಮಿಕ ಪದ್ಧತಿ ಪಿಡುಗಿಗೆ ಬಲಿಯಾದವರನ್ನು ರಕ್ಷಿಸಿ ಉತ್ತಮ ಶಿಕ್ಷ ಣವಂತರನ್ನಾಗಿಸುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಹೇಳಿದರು.

ಮಕ್ಕಳ ಸಹಾಯವಾಣಿ ಕೇಂದ್ರದ ಜಿಲ್ಲಾ ಸಂಯೋಜಕಿ ಸುನಂದಾ ತೋಳಬಂದಿ ಮಾತನಾಡಿ, ಕೆಳಸ್ಥರದಲ್ಲಿ ಇರುವಂತಹ ಹಾಗೂ ಶಿಕ್ಷ ಣದಿಂದ ವಂಚಿತ ಮಕ್ಕಳ ರಕ್ಷ ಣೆ, ಕೇವಲ ದಿನಾಚರಣೆಗಳಿಗೆ ಮಾತ್ರ ಸೀಮಿತಗೊಳ್ಳಬಾರದು. ಜಿಲ್ಲಾಡಳಿತ ಹಾಗೂ ಎಲ್ಲ ಇಲಾಖೆಗಳು ಸೇರಿ ವರ್ಷದ 365 ದಿನಗಳೂ ಕೂಡ ಕಾರ್ಯಪ್ರವೃತ್ತರಾಗಿ ಇಂತಹ ಕೆಟ್ಟ ಪದ್ಧತಿಗೆ ಒಳಗಾದ ಮಕ್ಕಳನ್ನು ರಕ್ಷಿಸಬೇಕು ಎಂದು ಹೇಳಿದರು.

ಕಾರ್ಮಿಕ ಅಧಿಕಾರಿ ಅಶೋಕ ಬಾಳಿಕಟ್ಟಿ ಮಾತನಾಡಿ, ಜಿಲ್ಲಾಡಳಿತದ ಸಹಕಾರದಿಂದ ಇಟ್ಟಂಗಿ ಭಟ್ಟಿ, ಹೋಟೆಲ್‌ಗಳು ಸೇರಿದಂತೆ ವಿವಿಧೆಡೆ ಕೆಲಸಕ್ಕೆ ಇದ್ದ ಜಿಲ್ಲೆಯ 12 ಕಾರ್ಮಿಕರನ್ನು ರಕ್ಷಿಸಿ, ಅವರಿಗೆ ಪುನರವಸತಿ ಕಲ್ಪಿಸಲಾಗಿದೆ ಎಂದರು.

ಈ ಪದ್ಧತಿಯನ್ನು ರೂಢಿಸಿಕೊಂಡು ಬಂದ ಮಾಲೀಕರಿಗೂ ಹಾಗೂ ಪಾಲಕರಿಗೆ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಲಾಗುತ್ತದೆ ಎಂದು ಹೇಳಿದರು.

ಉಪವಿಭಾಗಾಧಿಕಾರಿ ರುದ್ರೇಶ್‌ ಬಾಲಕಾರ್ಮಿಕ ಪದ್ಧತಿ ವಿರೋಧ ಅಂಗವಾಗಿ ಪ್ರತಿಜ್ಞಾ ಬೋಧಿಸಿದರು. ಇದಕ್ಕೂ ಮುನ್ನ ನಗರದ ಸರಕಾರಿ ಪ.ಪೂ.ಕಾಲೇಜ್‌ನಿಂದ ಆರಂಭಗೊಂಡ ಜಾಥಾಕ್ಕೆ ನ್ಯಾಯಾಧೀಶ ಎಸ್‌.ಎನ್‌.ನಾಯಕ ಚಾಲನೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಸಿ.ಬಿ.ಕುಂಬಾರ, ನಿರ್ಮಲಾ ಸುರಪುರ, ಶ್ರೀಧರ ಕುಲಕರ್ಣಿ, ಶ್ರೀನಿವಾಸ ವಾಲೀಕಾರ, ಎಂ.ಎಚ್‌.ಖಾಸನೀಸ, ಅಶೋಕ ಹಂಚಲಿ ಮತ್ತಿತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ