ಆ್ಯಪ್ನಗರ

ವಿಜಯಪುರದಲ್ಲಿ ಕೊರೊನಾಬ್ಬರ: 89 ಮಂದಿಗೆ ಪಾಸಿಟವ್‌, 710ಕ್ಕೆ ಏರಿದ ಸೋಂಕಿತರ ಸಂಖ್ಯೆ

ಗುರುವಾರ ಒಬ್ಬನಿಗೆ ಮಾತ್ರ ಸೋಂಕು ಪತ್ತೆಯಾಗಿದ್ದರಿಂದ ಜಿಲ್ಲಾವಾರು ಸೋಂಕಿತರ ಪಟ್ಟಿಯಲ್ಲಿ ವಿಜಯಪುರ ಜಿಲ್ಲೆ 30ನೇ ಸ್ಥಾನದಲ್ಲಿತ್ತು. ಆದರೆ ಶುಕ್ರವಾರ ಜಿಲ್ಲೆಯ ಮಟ್ಟಿಗೆ ದಾಖಲೆ ಪ್ರಮಾಣದ 89 ಜನರಲ್ಲಿ ಸೋಂಕು ಪತ್ತೆಯಾಗಿದ್ದರಿಂದ ಜಿಲ್ಲೆ ರಾಜ್ಯದಲ್ಲಿ 3ನೇ ಸ್ಥಾನದಲ್ಲಿದೆ.

Vijaya Karnataka Web 10 Jul 2020, 9:49 pm
ವಿಜಯಪುರ: ಜಿಲ್ಲೆಯಲ್ಲಿ ಶುಕ್ರವಾರ ಕೊರೊನಾ ಅಬ್ಬರ ಹೆಚ್ಚಾಗಿದೆ. 89 ಮಂದಿಗೆ ಸೋಂಕು ದೃಢಪಟ್ಟಿದೆ. 710ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.
Vijaya Karnataka Web ಕೊರೊನಾ
ಕೊರೊನಾ


ಕಳೆದೊಂದು ವಾರದಿಂದ 30ರ ಆಸುಪಾಸು ಸೋಂಕಿತರು ಪತ್ತೆಯಾಗುತ್ತಿದ್ದರು. ಗುರುವಾರ ಒಬ್ಬನಿಗೆ ಮಾತ್ರ ಸೋಂಕು ಪತ್ತೆಯಾಗಿದ್ದರಿಂದ ಜನತೆ ನಿಟ್ಟುಸಿರು ಬಿಟ್ಟಿದ್ದರು. ಆದರೀಗ ಬರೋಬ್ಬರಿ 89 ಮಂದಿಗೆ ಸೋಂಕು ದೃಢಪಟ್ಟಿದ್ದರಿಂದ ಜನತೆಯಲ್ಲಿ ಆತಂಕ ಎದುರಾಗಿದೆ.

ಆರೋಗ್ಯ ಇಲಾಖೆ ವರದಿ ಪ್ರಕಾರ 89 ಸೋಂಕಿತರಲ್ಲಿ 71 ಮಂದಿಗೆ ಸೋಂಕಿನ ಸಂಪರ್ಕವೇ ಪತ್ತೆಯಾಗಿಲ್ಲ. 15 ಮಂದಿಗೆ ಅನಾರೋಗ್ಯ (ಐಎಲ್‌ಐ)ದಿಂದ ಸೋಂಕು ದೃಢಪಟ್ಟಿದೆ. 3 ಮಂದಿಗೆ ಅಂತರ್ ಜಿಲ್ಲೆ ಪ್ರಯಾಣದ ಪ್ರಯಾಣದಿಂದ ಸೋಂಕು ತಗುಲಿದೆ.

ಪಟ್ಟಿಯಲ್ಲಿ 3ನೇ ಸ್ಥಾನ

ಗುರುವಾರ ಒಬ್ಬನಿಗೆ ಮಾತ್ರ ಸೋಂಕು ಪತ್ತೆಯಾಗಿದ್ದರಿಂದ ಜಿಲ್ಲಾವಾರು ಸೋಂಕಿತರ ಪಟ್ಟಿಯಲ್ಲಿ ವಿಜಯಪುರ ಜಿಲ್ಲೆ 30ನೇ ಸ್ಥಾನದಲ್ಲಿತ್ತು. ಆದರೆ ಶುಕ್ರವಾರ ಜಿಲ್ಲೆಯ ಮಟ್ಟಿಗೆ ದಾಖಲೆ ಪ್ರಮಾಣದ 89 ಜನರಲ್ಲಿ ಸೋಂಕು ಪತ್ತೆಯಾಗಿದ್ದರಿಂದ ಜಿಲ್ಲೆ ರಾಜ್ಯದಲ್ಲಿ 3ನೇ ಸ್ಥಾನದಲ್ಲಿದೆ.

ಆರೋಗ್ಯ ಕಾರ್ಯಕರ್ತರಿಗೂ ಸೋಂಕು

89 ಸೋಂಕಿತರಲ್ಲಿ ನಾಲ್ವರು ಮಹಾನಗರ ಪಾಲಿಕೆಯ ಪೌರ ಕಾರ್ಮಿಕರು, ಓರ್ವ ಪೌರ ಕಾರ್ಮಿಕರ ಮೇಲ್ವಿಚಾರಕ, ಓರ್ವ ಪೊಲೀಸ್ ಪೇದೆ ಹಾಗೂ ನಾಲ್ವರು ಆರೋಗ್ಯ ಕಾರ್ಯಕರ್ತರಿಗೂ ಸೋಂಕು ತಗುಲಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದ್ದಾರೆ.

13 ಸೋಂಕಿತರು ಗುಣಮುಖ

ಶುಕ್ರವಾರ ಜಿಲ್ಲೆಯಲ್ಲಿ 13 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದರು. ಈವರೆಗೆ 463 ಸೋಂಕಿತರು ಗುಣಮುಖರಾಗಿದ್ದಾರೆ. 234 ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಈವೆರೆಗೆ 31,678 ಮಂದಿಯ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿದ್ದು , 29,030 ಮಂದಿ ವರದಿ ನೆಗೆಟಿವ್ ಬಂದಿದೆ. 1938 ಜನರ ಪರೀಕ್ಷಾ ವರದಿ ಬರಬೇಕಿದೆ ಎಂದು ಅವರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ