ಆ್ಯಪ್ನಗರ

ವಿಜಯಪುರ: 13 ಲಕ್ಷ ರೂ. ಮೌಲ್ಯದ ಹಸಿ ಗಾಂಜಾ ವಶ

ಬಬಲೇಶ್ವರ ತಾಲೂಕಿನ ಕಾಖಂಡಕಿ ಗ್ರಾಮದ ಸರ್ವೇ ನಂಬರ್‌ 1148 ನೇದ್ದರ ಕಬ್ಬಿಣ ಗದ್ದೆಯಲ್ಲಿ 70 ಹಸಿ ಗಿಡಗಳನ್ನು ಬೆಳೆದಿದ್ದಾರೆ ಎಂಬ ಖಚಿತ ಮಾಹಿತಿ ಆಧರಿಸಿ ಅಬಕಾರಿ‌ ಪೊಲೀಸರು ದಾಳಿ ಮಾಡಿದ್ದಾರೆ.

Vijaya Karnataka Web 11 Sep 2020, 9:39 pm
ವಿಜಯಪುರ: ಕಬ್ಬಿಣ ಗದ್ದೆಯಲ್ಲಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಪತ್ತೆ ಮಾಡಿರುವ ಅಬಕಾರಿ ಪೊಲೀಸರು, 13 ಲಕ್ಷ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ.
Vijaya Karnataka Web ಗಾಂಜಾ
ಗಾಂಜಾ


ಮುಧೋಳ ತಾಲೂಕಿನ ಮಹಾದೇವ ಸಂಗಪ್ಪ ನೀಲಜಗಿ ಹಾಗೂ ಜಮೀನಿನ ಮಾಲಿಕ ಗಂಗಪ್ಪ ಸಂಗಪ್ಪ ನೀಲಜಗಿ ಪರಾರಿಯಾಗಿದ್ದಾರೆ.

ಇವರಿಬ್ಬರೂ ಬಬಲೇಶ್ವರ ತಾಲೂಕಿನ ಕಾಖಂಡಕಿ ಗ್ರಾಮದ ಸರ್ವೇ ನಂಬರ್‌ 1148 ನೇದ್ದರ ಕಬ್ಬಿಣ ಗದ್ದೆಯಲ್ಲಿ 70 ಹಸಿ ಗಿಡಗಳನ್ನು ಬೆಳೆದಿದ್ದಾರೆ ಎಂಬ ಖಚಿತ ಮಾಹಿತಿ ಆಧರಿಸಿ ಅಬಕಾರಿ‌ ಪೊಲೀಸರು ದಾಳಿ ಮಾಡಿದ್ದಾರೆ.

ದಾಳಿ ವೇಳೆ 13 ಲಕ್ಷ ರೂ. ಮೌಲ್ಯದ 130 ಕೆಜಿ ಹಸಿ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳ ವಿರುದ್ದ ಎನ್ ಡಿಪಿಎಸ್ ಕಾಯ್ದೆಯಡಿ ಅಬಕಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಬಕಾರಿ ಜಂಟಿ ಆಯುಕ್ತ ಡಾ. ವೈ ಮಂಜುನಾಥ ಹಾಗೂ ಅಬಕಾರಿ ಉಪ ಆಯುಕ್ತ ಕೆ.ಅರುಣಕುಮಾರ ಮಾರ್ಗದರ್ಶನದಲ್ಲಿ ಅಬಕಾರಿ‌ ಪೊಲೀಸರು ದಾಳಿಯಲ್ಲಿ ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ