ಆ್ಯಪ್ನಗರ

ಕುಮಾರಸ್ವಾಮಿ ನೇತೃತ್ವದಲ್ಲಿ ಮತ್ತೆ ಸರಕಾರ

ಸಮ್ಮಿಶ್ರ ಸರಕಾರ ಪತನಗೊಂಡಿರಬಹುದು ಆದರೆ ಜೆಡಿಎಸ್‌ ಫಿನಿಕ್ಸ್‌ನಂತೆ ಮತ್ತೆ ಎದ್ದು ನಿಲ್ಲುತ್ತದೆ. ರಾಜ್ಯಾದ್ಯಂತ ಪಕ್ಷವನ್ನು ಬೇರುಮಟ್ಟದಿಂದ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಮತ್ತೆ ಸರಕಾರ ರಚನೆಯಾಗಲಿದೆ ಎಂದು ನಾಗಠಾಣ ಶಾಸಕ ದೇವಾನಂದ ಚೌಹಾಣ್‌ ಹೇಳಿದರು.

Vijaya Karnataka 5 Aug 2019, 5:00 am
ವಿಜಯಪುರ : ಸಮ್ಮಿಶ್ರ ಸರಕಾರ ಪತನಗೊಂಡಿರಬಹುದು ಆದರೆ ಜೆಡಿಎಸ್‌ ಫಿನಿಕ್ಸ್‌ನಂತೆ ಮತ್ತೆ ಎದ್ದು ನಿಲ್ಲುತ್ತದೆ. ರಾಜ್ಯಾದ್ಯಂತ ಪಕ್ಷವನ್ನು ಬೇರುಮಟ್ಟದಿಂದ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಮತ್ತೆ ಸರಕಾರ ರಚನೆಯಾಗಲಿದೆ ಎಂದು ನಾಗಠಾಣ ಶಾಸಕ ದೇವಾನಂದ ಚೌಹಾಣ್‌ ಹೇಳಿದರು.
Vijaya Karnataka Web government again under kumaraswamy
ಕುಮಾರಸ್ವಾಮಿ ನೇತೃತ್ವದಲ್ಲಿ ಮತ್ತೆ ಸರಕಾರ


ನಗರದ ಜಿಲ್ಲಾ ಜೆಡಿಎಸ್‌ ಕಾರ್ಯಾಲಯದಲ್ಲಿ ಮುಂಬರುವ ಮಹಾನಗರ ಪಾಲಿಕೆ ಚುನಾವಣೆ ಹಾಗೂ ಪಕ್ಷ ಸಂಘಟನೆಗಾಗಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ ಮಾತನಾಡಿ, ಪಕ್ಷ ದ ನಿಷ್ಠಾವಂತ ಕಾರ್ಯಕರ್ತರಿಗೆ ಮುಂಬರುವ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಟಿಕೆಟ್‌ ನೀಡಲಾಗುವುದು. ಈ ಕುರಿತು ಕೋರ್‌ ಕಮಿಟಿ ರಚನೆ ಮಾಡಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ನಗರ ಘಟಕ ಅಧ್ಯಕ್ಷ ಗೋವಿಂದ ಜೋಶಿ ಮಾತನಾಡಿ, ಮುಂಬರುವ ಚುನಾವಣೆಯಲ್ಲಿ ಪಕ್ಷ ವನ್ನು ಕಟ್ಟಿ ಬೆಳೆಸುವ ನಿಟ್ಟಿನಲ್ಲಿ ನಾವೆಲ್ಲರೂ ಅಣಿಯಾಗಬೇಕಾಗಿದೆ. ಪಕ್ಷ ದಿಂದ ಯಾರಿಗೆ ಟಿಕೆಟ್‌ ಸಿಕ್ಕರೂ ಅಭ್ಯರ್ಥಿಯ ಗೆಲುವಿಗೆ ಹಗಲಿರುಳು ಶ್ರಮಿಸೋಣ ಎಂದರು.

ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಯಾಕೂಬ ಕೊಪ್ಪರ, ಎಸ್‌ಸಿ,ಎಸ್‌ಟಿ ಘಟಕ ಅಧ್ಯಕ್ಷ ಸಿದ್ದು ಕಾಮತ, ರಾಜ್ಯ ಮಹಿಳಾ ಕಾರ್ಯದರ್ಶಿ ರೇಖಾ ಮಾಶ್ಯಾಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಕಾಂತ ಹಿರೇಮಠ, ಸ್ನೇಹಲತಾ ಶೆಟ್ಟಿ, ಶೈಲಜಾ ಸ್ಥಾವರಮಠ, ಅರವಿಂದ ಹಂಗರಗಿ, ಅನ್ವರ ಮಕಾನದಾರ, ಮುಕದಸ್‌ ಜಹಾಗೀರದಾರ, ಸಾಜೀದ ರಿಸಾಲ್ದಾರ, ಸಯ್ಯದ ಅಮೀನ, ರಾಜು ಹಿಪ್ಪರಗಿ, ವಿನೋದ ಕೋಟ್ಯಾಳ, ರಮೀಜಾ ನದಾಫ, ಸತ್ತಾರ ಇನಾಮದಾರ, ಖಾಜಿ, ಇಜಾಜ ಮುಕಬಿಲ್‌ ಸೇರಿದಂತೆ ಪಕ್ಷದ ಅನೇಕ ಕಾರ್ಯಕರ್ತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ