ಆ್ಯಪ್ನಗರ

CM Ibrahim: ಎಚ್. ಡಿ. ಕುಮಾರಸ್ವಾಮಿ ಸಿಎಂ ಆಗದಿದ್ದರೆ ರಾಜಕೀಯ ನಿವೃತ್ತಿ: ಸಿ. ಎಂ. ಇಬ್ರಾಹಿಂ

CM Ibrahim: ನಮ್ಮ ಪಕ್ಷದ ಪ್ರಣಾಳಿಕೆಯನ್ನು ಜನರ ಮುಂದೆ ಇಡಲಾಗುತ್ತಿದೆ. ಉತ್ತರ ಕರ್ನಾಟಕದಲ್ಲಿ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಕಾಳಜಿ ವಹಿಸಲಾಗಿದೆ. ಅದಕ್ಕಾಗಿ ಸಂಕಲ್ಪ ಮಾಡಿದ್ದು, ಯೋಜನೆಯನ್ನು ಜಾರಿಗೊಳಿಸದಿದ್ದಲ್ಲಿ 2028ರ ಚುನಾವಣೆಯಲ್ಲಿ ಜೆಡಿಎಸ್‌ ಸ್ಪರ್ಧಿಸುವುದಿಲ್ಲ ಎಂದ ಸಿ. ಎಂ. ಇಬ್ರಾಹಿಂ, ಕಾಂಗ್ರೆಸ್‌ ನಾಯಕರು ಜೆಡಿಎಸ್‌ ಪಕ್ಷವನ್ನು ಬಿಜೆಪಿಯ ಬಿ ಟೀಂ ಎನ್ನುವ ಆರೋಪಕ್ಕೆ ತಿರುಗೇಟು ನೀಡಿದರು. ಕುಮಾರಸ್ವಾಮಿ ಅವರನ್ನು ಬಲವಂತವಾಗಿ ಸಿಎಂ ಮಾಡಿ, ನಂತರ ಕೆಳಗಿಳಿಸಿ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಿದವರು ಯಾವ ಟೀಂ ಎಂದು ಪ್ರಶ್ನಿಸಿದರು.

Edited byದಿಲೀಪ್ ಡಿ. ಆರ್. | Vijaya Karnataka 27 Nov 2022, 6:24 pm

ಹೈಲೈಟ್ಸ್‌:

  • ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ 123 ಸೀಟು ಗೆಲ್ಲಲಿದೆ
  • ಈಗಾಗಲೇ ಜೆಡಿಎಸ್ ಪಕ್ಷದ 70 ರಿಂದ 80 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ತಯಾರಾಗಿದೆ
  • ಎಚ್‌. ಡಿ. ಕುಮಾರಸ್ವಾಮಿ ಸಿಎಂ ಆಗಲಿದ್ದಾರೆ, ಇಲ್ಲದಿದ್ದರೆ ರಾಜಕೀಯದಿಂದ ನಿವೃತ್ತಿ: ಸಿ. ಎಂ. ಇಬ್ರಾಹಿಂ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web CM Ibrahim
ಸಂಗ್ರಹ ಚಿತ್ರ
ವಿಜಯಪುರ: ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ 123 ಸೀಟು ಗೆಲ್ಲುವ ಮೂಲಕ ಅಧಿಕಾರಕ್ಕೆ ಬರಲಿದೆ. ಈಗಾಗಲೇ 70 ರಿಂದ 80 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ತಯಾರಾಗಿದೆ. ಎಚ್‌. ಡಿ. ಕುಮಾರಸ್ವಾಮಿ ಸಿಎಂ ಆಗಲಿದ್ದಾರೆ. ಇಲ್ಲದಿದ್ದರೆ ರಾಜಕೀಯದಿಂದ ನಿವೃತ್ತಿ ಆಗುವುದಾಗಿ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ. ಎಂ. ಇಬ್ರಾಹಿಂ ಹೇಳಿದರು.
ಭಾನುವಾರ ವಿಜಯಪುರದ ಜೆಡಿಎಸ್‌ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಜೆಡಿಎಸ್‌ ಪಂಚ ರತ್ನ ಯಾತ್ರೆಗೆ ಉತ್ತಮ ಸ್ಪಂದನೆ ಸಿಗುತ್ತಿದೆ. ಜನವರಿಯಲ್ಲಿ ಮುಂಬೈ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಪಂಚ ರತ್ನ ಯಾತ್ರೆ ಆಯೋಜಿಸಲಾಗಿದೆ ಎಂದರು.

Tipu controversy- ಭದ್ರಾವತಿಯಲ್ಲಿ ಟಿಪ್ಪು ಪ್ರತಿಮೆಗೆ ಇಬ್ರಾಹಿಂ ಸಹೋದರ ಖಾದರ್ ಬೇಡಿಕೆ: ಬಿಜೆಪಿಯಿಂದ ಎಚ್ಚರಿಕೆ
ನಮ್ಮ ಪಕ್ಷದ ಪ್ರಣಾಳಿಕೆಯನ್ನು ಜನರ ಮುಂದೆ ಇಡಲಾಗುತ್ತಿದೆ. ಉತ್ತರ ಕರ್ನಾಟಕದಲ್ಲಿ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ವಿಶೇಷ ಕಾಳಜಿ ವಹಿಸಲಾಗಿದೆ. ಅದಕ್ಕಾಗಿ ಸಂಕಲ್ಪ ಮಾಡಿದ್ದು, ಯೋಜನೆಯನ್ನು ಜಾರಿಗೊಳಿಸದಿದ್ದಲ್ಲಿ 2028ರ ಚುನಾವಣೆಯಲ್ಲಿ ಜೆಡಿಎಸ್‌ ಸ್ಪರ್ಧಿಸುವುದಿಲ್ಲ ಎಂದು ತಿಳಿಸಿದರು.

ತೆರಿಗೆ ಸಂಗ್ರಹದಲ್ಲಿ ಸೋರಿಕೆ: ಪ್ರತಿ ವರ್ಷ ರಾಜ್ಯ ಸರಕಾರಕ್ಕೆ 6 ಲಕ್ಷ ಕೋಟಿ ರೂ. ತೆರಿಗೆ ಸಂಗ್ರಹವಾಗಬೇಕು. ಆದರೆ 3 ಲಕ್ಷ ಕೋಟಿ ರೂ. ಸಂಗ್ರಹವಾಗುತ್ತಿದೆ. ಇನ್ನುಳಿದ ಹಣ ಸೋರಿಕೆ ಆಗುತ್ತಿದೆ. ಜಿಎಸ್‌ಟಿ ನಿರ್ವಹಣೆ ಸರಿಯಾಗಿ ಆಗುತ್ತಿಲ್ಲ ಎಂದು ಸಿ. ಎಂ. ಇಬ್ರಾಹಿಂ ಆರೋಪಿಸಿದರು.

ಅಬಕಾರಿ ಸುಂಕ, ಕಂದಾಯ ಇಲಾಖೆಯಿಂದ ಬರುವ ಆದಾಯದ ನಿರ್ವಹಣೆ ಸರಿಯಾದರೆ ಬೊಕ್ಕಸಕ್ಕೆ ಹಣದ ಕೊರತೆ ಆಗುವುದಿಲ್ಲ. ಹಾಲು ಮಾರುವವನು ಮನೆ ಮನೆಗೆ ತೆರಳಿ ಮಾರಾಟ ಮಾಡುತ್ತಿದ್ದಾನೆ. ಹೆಂಡ ಮಾರುವವನು ಅಂಗಡಿಯಲ್ಲಿ ಕುಳಿತು ಮಾರಾಟ ಮಾಡುತ್ತಿದ್ದಾನೆ. ಇದು ನಮ್ಮ ದೇಶದ ಸ್ಥಿತಿ ಎಂದು ವ್ಯಂಗ್ಯವಾಡಿದರು.

ಬಸವರಾಜ ಬೊಮ್ಮಾಯಿ ಜೆಡಿಎಸ್ ಬರೋದಾದ್ರೆ ಸ್ವಾಗತಿಸುತ್ತೇನೆ: ಸಿಎಂ ಇಬ್ರಾಹಿಂ
ಪ್ರಧಾನಿ ನರೇಂದ್ರ ಮೋದಿ ಅವರ ಮನ್‌ ಕೀ ಬಾತ್‌ ಬಗ್ಗೆಯೂ ವ್ಯಂಗ್ಯವಾಡಿದ ಸಿ. ಎಂ. ಇಬ್ರಾಹಿಂ, ಜನರ ಮನಸಿನ ಮಾತುಗಳನ್ನು ಜನರಿಗೆ ತಿಳಿಸ ಬೇಕೇ ಹೊರತು ಅವರ ಮನಸಿನ ಮಾತುಗಳನ್ನಲ್ಲ ಎಂದರು.

'ಹಮ್‌ ದೋ ಹಮಾರೇ ದೋ' ಎಂದು ಮೋದಿ ಅವರು ಹೇಳುತ್ತಾರೆ. ಹಮ್‌ ದೋ ಅಂದರೆ ಮೋದಿ, ಅಮಿತ್‌ ಶಾ ಹಾಗೂ ಹಮಾರೇ ದೋ ಎಂದರೆ ಅಂಬಾನಿ, ಅದಾನಿ ಎಂದು ಟೀಕಿಸಿದರು.

ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಮುಚ್ಚುವ ಸ್ಥಿತಿಯಲ್ಲಿದೆ. ತೈಲ ದರ ಹೆಚ್ಚಾಗುತ್ತಿದೆ. ರಸಗೊಬ್ಬರದ ಬೆಲೆ ಏರಿಕೆ ಆಗುತ್ತಿದೆ. ಗ್ಯಾಸ್‌ ಬೆಲೆ ಗಗನಕ್ಕೇರಿದೆ. ಈ ಬಗ್ಗೆ ಮನ್‌ ಕೀ ಬಾತ್‌ ನಲ್ಲಿ ಏಕೆ ಮಾತಾಡುವುದಿಲ್ಲ ಎಂದು ಪ್ರಶ್ನಿಸಿದರು.

ಕಾಂಗ್ರೆಸ್‌ ನಾಯಕರು ಜೆಡಿಎಸ್‌ ಪಕ್ಷವನ್ನು ಬಿಜೆಪಿಯ ಬಿ ಟೀಂ ಎನ್ನುವ ಆರೋಪಕ್ಕೆ ತಿರುಗೇಟು ನೀಡಿದ ಸಿ. ಎಂ. ಇಬ್ರಾಹಿಂ, ಕುಮಾರಸ್ವಾಮಿ ಅವರನ್ನು ಬಲವಂತವಾಗಿ ಸಿಎಂ ಮಾಡಿ, ನಂತರ ಕೆಳಗಿಳಿಸಿ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಿದವರು ಯಾವ ಟೀಂನವರು ಎಂದು ಪ್ರಶ್ನಿಸಿದರು.


ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬರಲು ಯಾವ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಿರಿ ಎಂಬ ಪ್ರಶ್ನೆಗೆ, ಸಂಸ್ಕಾರವಂತರೊಂದಿಗೆ ಮದುವೆ ಆಗುವುದಾಗಿ ಉತ್ತರಿಸಿದರು.

ಬದಲಾವಣೆ ಸನ್ನಿಹಿತ: ಹಿಂದುತ್ವ ವಿಚಾರಗಳನ್ನು ಇಟ್ಟುಕೊಂಡು ಚುನಾವಣೆ ಪ್ರಚಾರ ಮಾಡುತ್ತಿರುವವರು ಬಸವ ತತ್ವಕ್ಕೆ ಬದಲಾವಣೆಗೊಳ್ಳುವ ಕಾಲ ಸನ್ನಿಹಿತ ಆಗಿದೆ. ಇನ್ನು ದೇಶದ ಇತಿಹಾಸವನ್ನು ತಿದ್ದುವ, ಬದಲಿಸುವ ಪ್ರಯತ್ನ ಪಡುತ್ತಿರುವ ಮೋದಿ ಹಾಗೂ ಅಮಿತ್‌ ಶಾ, ತಮ್ಮ ಇತಿಹಾಸವನ್ನು ಮೊದಲು ಜನರ ಮುಂದೆ ಇಡಲಿ ಎಂದು ಸಿ. ಎಂ. ಇಬ್ರಾಹಿಂ ಆಗ್ರಹಿಸಿದರು.

ಜೆಡಿಎಸ್‌ ಜಿಲ್ಲಾಧ್ಯಕ್ಷ ಬಸನಗೌಡ ಎಸ್‌. ಮಾಡಗಿ, ಮುಖಂಡರಾದ ಮಲ್ಲಿಕಾರ್ಜುನ ಯಂಡಿಗೇರಿ, ಲತಾ ಬಿರಾದಾರ, ಅರವಿಂದ ಹಂಗರಗಿ ಮತ್ತಿತರರಿದ್ದರು.
ಲೇಖಕರ ಬಗ್ಗೆ
ದಿಲೀಪ್ ಡಿ. ಆರ್.
ವಿಜಯ ಕರ್ನಾಟಕದ ಡಿಜಿಟಲ್ ಪತ್ರಕರ್ತನಾಗಿ 2019ರ ಆಗಸ್ಟ್‌ನಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡ ಟಿವಿ ನ್ಯೂಸ್ ವಾಹಿನಿಗಳಲ್ಲಿ 14 ವರ್ಷಕ್ಕೂ ಹೆಚ್ಚು ಕಾಲ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ರಾಜಕೀಯ, ವಿಜ್ಞಾನ-ತಂತ್ರಜ್ಞಾನ ರಂಗಗಳು ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ಹಾಸ್ಯ, ವಿಡಂಬನಾತ್ಮಕ ಬರಹ, ವ್ಯಕ್ತಿ ಚಿತ್ರ, ಜೀವ ಪರ ನಿಲುವಿನ ಸಂವೇದನಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಕಾಡು, ಹಸಿರು, ಬೆಟ್ಟ ಗುಡ್ಡಗಳ ಚಾರಣ ಮಾಡುವುದು ಇವರ ಹವ್ಯಾಸ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ