ಆ್ಯಪ್ನಗರ

ನದಿ ವಿಗ್ರಹಕ್ಕೆ ಚಪ್ಪಲಿ ಹಾರ; ಗೊಳಸಂಗಿ ಗ್ರಾಮ ಉದ್ವಿಗ್ನ

ಶುಕ್ರವಾರ ರಾತ್ರಿ ಪೂಜೆ ಮಾಡಿ ಅರ್ಚಕರು ಮನೆಗೆ ತೆರಳಿದ ಬಳಿಕ ಕಿಡಗೇಡಿಗಳು ನಂದಿ ವಿಗ್ರಹಕ್ಕೆ ಚಪ್ಪಲಿ ಹಾಕಿದ್ದಾರೆ.

Vijaya Karnataka Web 8 Jun 2019, 1:24 pm
ವಿಜಯಪುರ: ಬಸವನ ಬಾಗೇವಾಡಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ಬಸವೇಶ್ವರ ದೇವಸ್ಥಾನದ ನಂದಿ ವಿಗ್ರಹಕ್ಕೆ ದುಷ್ಕರ್ಮಿಗಳು ಚಪ್ಪಲಿ ಹಾರ ಹಾಕಿರುವ ಘಟನೆ ನಡೆದಿದೆ.
Vijaya Karnataka Web ಬಸವೇಶ್ವರ ದೇವಾಲಯ


ಬೆಳಗ್ಗೆ 9 ಗಂಟೆ ಪೂಜಾರಿಗಳು ದೇವಸ್ಥಾನದ ಬಾಗಿಲು ತೆರೆದಾಗ ದುಷ್ಕೃತ್ಯ ಬೆಳಕಿಗೆ ಬಂದಿದೆ.

ಶುಕ್ರವಾರ ರಾತ್ರಿ ಪೂಜೆ ಮಾಡಿ ಅರ್ಚಕರು ಮನೆಗೆ ತೆರಳಿದ ಬಳಿಕ ಕಿಡಗೇಡಿಗಳು ನಂದಿ ವಿಗ್ರಹಕ್ಕೆ ಚಪ್ಪಲಿ ಹಾಕಿದ್ದಾರೆ.


ಘಟನೆ ಬಗ್ಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿದ್ದಾರೆ. ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.

ಸ್ಥಳಕ್ಕೆ ಡಿವೈಎಸ್ಪಿ, ಸಿಪಿಐ ಸೇರಿದಂತೆ ಪೊಲೀಸರ ತಂಡ ಆಗಮಿಸಿ ಪರಿಶೀಲನೆ ನಡೆಸಿದೆ. ಶ್ವಾನದಳದಿಂದಲೂ ತಪಾಸಣೆ ನಡೆಸಲಾಗಿದೆ.

3 ವರ್ಷಗಳ ಹಿಂದೆ ಇದೇ ದೇವಸ್ಥಾನದ ಬಳಿ ಸಾರ್ವಜನಿಕ ಗಣೇಶ ಮೂರ್ತಿ ಭಗ್ನಗೊಳಿಸಿದ ಘಟನೆ ನಡೆದಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ