ಆ್ಯಪ್ನಗರ

ವೀರಶೈವ, ಲಿಂಗಾಯತ ಅಭಿವೃದ್ಧಿ ನಿಗಮ, ನನ್ನ ಪ್ರಯತ್ನಕ್ಕೆ ಸಿಕ್ಕ ಯಶಸ್ಸು: ಇಂಡಿ ಶಾಸಕ

ಸಿಎಂ ಯಡಿಯೂರಪ್ಪ ಅವರು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಆದೇಶ ಹೊರಡಿಸಿದ್ದರಿಂದ ನಮ್ಮ ಬೇಡಿಕೆಗೆ ಸಂದ ಜಯ ಎಂದು ಯಶವಂತರಾಯಗೌಡ ಪಾಟೀಲ ತಿಳಿಸಿದ್ದಾರೆ.

Vijaya Karnataka Web 17 Nov 2020, 8:47 pm
ವಿಜಯಪುರ: ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಬಗ್ಗೆ ಸದನದಲ್ಲಿ ಬೇಡಿಕೆ ಇಟ್ಡಿದ್ದೆ. ಅದಕ್ಕೀಗ ಮನ್ನಣೆ ಸಿಕ್ಕಿದೆ ಎಂದು ಇಂಡಿ ಕ್ಷೇತ್ರದ ಕಾಂಗ್ರೆಸ್ ಯಶವಂತರಾಯಗೌಡ ಪಾಟೀಲ ತಿಳಿಸಿದ್ದಾರೆ.
Vijaya Karnataka Web ಯಶವಂತ ರಾಯಗೌಡ ಪಾಟೀಲ
ಯಶವಂತ ರಾಯಗೌಡ ಪಾಟೀಲ


ವಿಜಯಕರ್ನಾಟಕದೊಂದಿಗೆ ಮಾತನಾಡಿದ ಅವರು, ಕಳೆದ ಅಧಿವೇಶನದಲ್ಲಿ ಈ ಬಗ್ಗೆ ಧ್ವನಿ ಎತ್ತಿದ್ದೆ. ಆರ್ಥಿಕವಾಗಿ ಹಿಂದುಳಿದ ವೀರಶೈವ-ಲಿಂಗಾಯತರಿಗೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಲು ಬೇಡಿಕೆ ಮಂಡಿಸಿದ್ದೆ. ಆಗ ಸಂಬಂಧಿಸಿದ ಸಚಿವರು ದೇವರಾಜ ಅರಸು ಹಿಂದುಳಿದ ನಿಗಮದಿಂದ ವೀರಶೈವ-ಲಿಂಗಾಯತರಿಗೆ ಸಹಾಯವಾಗುತ್ತದೆ ಎಂದು ಉತ್ತರಿಸಿದ್ದರು. ಆದರೆ, ಪ್ರತ್ಯೇಕ ನಿಗಮದ ವಿಚಾರ ಅತ್ಯಂತ ಮಹತ್ವದ್ದಾಗಿದ್ದು ಈ ಬಗ್ಗೆ ಚರ್ಚೆಗೆ ಅರ್ಧ ಗಂಟೆ ಸಮಯ ಮೀಸಲಿಡಲು ಸಭಾಪತಿಗಳಲ್ಲಿ ಮನವಿ ಮಾಡಿದ್ದಾಗಿ ಯಶವಂತರಾಯಗೌಡ ಪಾಟೀಲ ತಿಳಿಸಿದರು.

ಸದನದಲ್ಲೇ ವೀರಶೈವ- ಲಿಂಗಾಯತ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪನೆಗೆ ಪಟ್ಟು ಹಿಡಿದಿದ್ದೆ. ಇದಕ್ಕೆ ಅನೇಕ ನಾಯಕರು ಧ್ವನಿ ಗೂಡಿಸಿದ್ದರು. ಇದೀಗೆ ಸಿಎಂ ಯಡಿಯೂರಪ್ಪ ಅವರು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಆದೇಶ ಹೊರಡಿಸಿದ್ದರಿಂದ ನಮ್ಮ ಬೇಡಿಕೆಗೆ ಸಂದ ಜಯ ಎಂದು ಯಶವಂತರಾಯಗೌಡ ಪಾಟೀಲ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ