ಆ್ಯಪ್ನಗರ

ಬಸ್‌ ಸಂಚಾರ ಇರಲ್ಲ

ಕೊರೊನಾ ಹರಡದಂತೆ ಮುಂಜಾಗೃತೆ ವಹಿಸಲು ಪ್ರಯಾಣಿಕರನ್ನು ಹೊತ್ತೊಯ್ಯುವ ಅಂತಾರಾಜ್ಯ, ಅಂತರ್‌ ಜಿಲ್ಲಾಮತ್ತು ಜಿಲ್ಲೆಯ ಒಳಗೆ ರಸ್ತೆ ಸಾರಿಗೆ ನಿಗಮದ ಮತ್ತು ಖಾಸಗಿ ವಾಹನಗಳ ಸಂಚಾರವನ್ನು ನಿರ್ಭಂಧಿಸಿ ಜಿಲ್ಲಾಧಿಕಾರಿ ವೈ.ಎಸ್‌ ಪಾಟೀಲ ಆದೇಶ ಹೊರಡಿಸಿದ್ದಾರೆ.

Vijaya Karnataka Web 24 Mar 2020, 5:00 am
ವಿಜಯಪುರ : ಕೊರೊನಾ ಹರಡದಂತೆ ಮುಂಜಾಗೃತೆ ವಹಿಸಲು ಪ್ರಯಾಣಿಕರನ್ನು ಹೊತ್ತೊಯ್ಯುವ ಅಂತಾರಾಜ್ಯ, ಅಂತರ್‌ ಜಿಲ್ಲಾಮತ್ತು ಜಿಲ್ಲೆಯ ಒಳಗೆ ರಸ್ತೆ ಸಾರಿಗೆ ನಿಗಮದ ಮತ್ತು ಖಾಸಗಿ ವಾಹನಗಳ ಸಂಚಾರವನ್ನು ನಿರ್ಭಂಧಿಸಿ ಜಿಲ್ಲಾಧಿಕಾರಿ ವೈ.ಎಸ್‌ ಪಾಟೀಲ ಆದೇಶ ಹೊರಡಿಸಿದ್ದಾರೆ.
Vijaya Karnataka Web 23MDBL2A_38


ಮಾ.24ರ ಬೆಳಗ್ಗೆ 6ರಿಂದ ಮಾ.31ರ ಮಧ್ಯರಾತ್ರಿ ತನಕ ಈ ಆದೇಶ ಜಾರಿಯಲ್ಲಿದ್ದು, ಅಗತ್ಯ ವಸ್ತುಗಳನ್ನು ಪೂರೈಸುವ ಹಾಗೂ ಸಕ್ಷಮ ಪ್ರಾಧಿಕಾರಿಗಳಿಂದ ಅನುಮತಿ ಪಡೆದಿರುವ ಖಾಸಗಿ ವಾಹನಗಳಿಗೆ ನಿರ್ಬಂಧ ಇರುವುದಿಲ್ಲ. ಟ್ಯಾಕ್ಸಿ, ಆಟೋರಿಕ್ಷಾ ಮತ್ತು ಬಾಡಿಗೆ ಸೇವೆಗೆ ಪಡೆಯುವ ವಾಹನಗಳಿಗೂ ನಿರ್ಬಂಧಿಸಲಾಗಿದೆ. ವರ್ತಕರು ನಿಗದಿತ ದರಕ್ಕಿಂತ ಹೆಚ್ಚಿನ ದರಕ್ಕೆ ಆಹಾರ ಧಾನ್ಯಗಳನ್ನು ಮಾರಾಟ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಆಹಾರ ನಿರಿಕ್ಷಕರು ನಿರಂತರ ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ