ಆ್ಯಪ್ನಗರ

ಪ್ರಜ್ವಲ್‌ ರೇವಣ್ಣ ಕೇಸ್‌: ಎಸ್‌ಐಟಿ ಡಿಕೆ ಶಿವಕುಮಾರ್‌ ಏಜೆಂಟ್ಸ್‌! ನ್ಯಾಯ ಸಿಗಲ್ಲ, ಸಿಬಿಐ ತನಿಖೆ ಆಗಲೇಬೇಕು- ಯತ್ನಾಳ್

Yatnal On DK Shivakumar : ಪ್ರಜ್ವಲ್‌ ರೇವಣ್ಣ ಪ್ರಕರಣದ ಕುರಿತು ವಿಜಯಪುರ ಬಿಜೆಪಿ ಶಾಸಕ ಯತ್ನಾಳ್‌ ಪ್ರತಿಕ್ರಿಯೆ ನೀಡಿದ್ದಾರೆ. ಸದ್ಯ ತನಿಖೆ ನಡೆಸುತ್ತಿರುವ ಎಸ್‌ಐಟಿಯಿಂದ ನ್ಯಾಯ ಸಿಗುವುದಿಲ್ಲ, ಸಿಬಿಐ ತನಿಖೆ ಆಗಬೇಕು ಎಂದಿದ್ದಾರೆ. ಈ ಬಗ್ಗೆ ಹೆಚ್ಚಿನ ವಿವರ ಇಲ್ಲಿದೆ.

ಹೈಲೈಟ್ಸ್‌:

  • ಪ್ರಕರಣದಲ್ಲಿ ಎಸ್‌ಐಟಿಯಿಂದ ನ್ಯಾಯಯುತ ತನಿಖೆಯಾಗಲ್ಲ ಎಂದ ಬಸನಗೌಡ ಪಾಟೀಲ್ ಯತ್ನಾಳ್
  • ಎಸ್‌ಐಟಿಯಲ್ಲಿ ಇರುವ ಅಧಿಕಾರಿಗಳ ಮೇಲೆ ಡಿಕೆ ಶಿವಕುಮಾರ್ ಕಂಟ್ರೋಲ್‌ನಲ್ಲಿದ್ದಾರೆ ಎಂದು ಯತ್ನಾಳ್‌ ಆರೋಪ.
  • ದೇಶ ರಾಜ್ಯ ಮನೆ ಸುರಕ್ಷಿತವಾಗಬೇಕೆಂದರೆ ಮೋದಿ ಮತ್ತೇ ಪ್ರಧಾನಿಯಾಗಬೇಕು ಎಂದ ಬಿಜೆಪಿ ವಿಜಯಪುರ ಶಾಸಕ.
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web ಯತ್ನಾಳ್
ಸಾಂದರ್ಭಿಕ ಚಿತ್ರ
ವಿಜಯಪುರ: ಪ್ರಜ್ವಲ್‌ ರೇವಣ್ಣ ಕೇಸ್‌ನ ತನಿಖೆ ಮಾಡುತ್ತಿರುವ ಎಸ್‌ಐಟಿ ಡಿಕೆ ಶಿವಕುಮಾರ್‌ ಏಜೆಂಟ್ಸ್‌ ರೀತಿ ವರ್ತಿಸುತ್ತಿದೆ. ಹೀಗಾಗಿ, ನ್ಯಾಯ ಸಿಗಲ್ಲ. ಈ ಕೇಸ್‌ ಅನ್ನು ಸಿಬಿಐಗೆ ವಹಿಸಬೇಕು ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಒತ್ತಾಯಿಸಿದ್ದಾರೆ.
ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಎಸ್‌ಎಸ್ ಹೈಸ್ಕೂಲ್ ಆವರಣದಲ್ಲಿರುವ ಮತಗಟ್ಟೆ 70ರಲ್ಲಿ ಮತ ಚಲಾವಣೆ ಮಾಡಿದರು. ಅನಂತರ ಮಾಧ್ಯಮದವರೊಂದಿಗೆ ಮಾತನಾಡಿ, '' ದೇಶ ರಾಜ್ಯ ಮನೆ ಸುರಕ್ಷಿತವಾಗಬೇಕೆಂದರೆ ಮೋದಿ ಮತ್ತೇ ಪ್ರಧಾನಿಯಾಗಬೇಕು. ದೇಶದ ಉಳುವಿಗಾಗಿ ಶೇಕಡ 80ರಷ್ಟಾದರೂ ಜನರು ಮತದಾನ ಮಾಡಬೇಕು'' ಎಂದರು.

ಇದೇ ವೇಳೆ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಬಗ್ಗೆ ಮಾತನಾಡಿ, '' ರಾಜ್ಯದ ಎಸ್‌ಐಟಿ ತಂಡದಿಂದ ನ್ಯಾಯ ಸಿಗುವುದಿಲ್ಲ. ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಎಸ್‌ಐಟಿ ಅಧಿಕಾರಿಗಳು ಡಿಕೆ ಶಿವಕುಮಾರ್‌ ಅವರ ಏಜೆಂಟ್‌ಗಳಂತೆ ವರ್ತಿಸುತ್ತಿದ್ದಾರೆ. ಪ್ರಕರಣವನ್ನು ಸಿಬಿಐಗೆ ವಹಿಸಬೇಕು'' ಎಂದು ಆಗ್ರಹಿಸಿದರು.

ದೇವರಾಜೇಗೌಡಾ ಸ್ಪಷ್ಟವಾಗಿ ಹೇಳಿದ್ದಾರೆ

''ಇದನ್ನು ಮಾಡಿದವರು ಯಾರು ಎಂದು ದೇವರಾಜೇಗೌಡಾ ಸ್ಪಷ್ಟವಾಗಿ ಹೇಳಿದ್ದಾರೆ. ಆಡಿಯೋವನ್ನು ಬಿಡುಗಡೆ ಮಾಡಿದ್ದಾರೆ. ಎಸ್‌ಐಟಿಯಲ್ಲಿ ಇರುವ ಅಧಿಕಾರಿಗಳೆಲ್ಲ ಡಿಕೆ ಶಿವಕುಮಾರ್‌ ಕಂಟ್ರೋಲ್‌ನಲ್ಲಿ ಇರುವವರು. ಮೊದಲೆ ಹೇಳಿದ್ದೆ ರಾಜ್ಯದಲ್ಲಿ ಎರಡು ಸಿಡಿ ಫ್ಯಾಕ್ಟರಿ ಇದೆಯಂತಾ. ಇದೊಂದು ಓಪನ್‌ ಆಗಿದೆ, ಇನ್ನೊಂದು ಓಪನ್ ಆಗುತ್ತದೆ'' ಎಂದರು.
ಲೇಖಕರ ಬಗ್ಗೆ
ಜಯಪ್ರಕಾಶ್‌ ಬಿರಾದಾರ್‌
ವಿಜಯ ಕರ್ನಾಟಕದ ಡಿಜಿಟಲ್ ವಿಭಾಗದಲ್ಲಿ ಪತ್ರಕರ್ತ. ಚಿನ್ನದ ಪದಕದೊಂದಿಗೆ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ಆರು ವರ್ಷಗಳಿಂದ ರಾಜ್ಯಮಟ್ಟದ ವಿವಿಧ ಪತ್ರಿಕೆಗಳಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ಆರೋಗ್ಯ, ಅರಣ್ಯ, ಸಾರಿಗೆ, ರಾಜಕೀಯ, ಕೊರೊನಾ, ಬೆಂಗಳೂರು ಅಭಿವೃದ್ಧಿ ಸೇರಿದಂತೆ ವಿವಿಧ ವಿಷಯದ ಕುರಿತು ಒಂದು ಸಾವಿರಕ್ಕೂ ಅಧಿಕ ವಿಶೇಷ ವರದಿಗಳನ್ನು ಬರೆದಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೊಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ