ಆ್ಯಪ್ನಗರ

ಉಸಿರಾಟದ ಸಮಸ್ಯೆಯಿಂದಾಗಿ ಚಿಕಿತ್ಸೆಗಾಗಿ ಪರದಾಡುತ್ತಿದ್ದ ರೋಗಿಗೆ ವಿಜಯಪುರ ಜಿಲ್ಲಾಧಿಕಾರಿ ನೆರವು!

ಉಸಿರಾಟದ ಸಮಸ್ಯೆಯಿದ ಬಳಲಿ ಚಿಕಿತ್ಸೆ ಸಿಗದೆ ಪರದಾಡುತ್ತಿದ್ದ ವ್ಯಕ್ತಿಗೆ ವಿಜಯಪುರ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ತಕ್ಷಣದ ಚಿಕಿತ್ಸೆಗೆ ಅಗತ್ಯ ಕ್ರಮ ಕೈಗೊಂಡು ಮಾನವೀಯತೆ ಮೆರೆದಿದ್ದಾರೆ. ರೋಗಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಯವರು ನಿರಾಕರಿಸಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಆತನ ಚಿಕಿತ್ಸೆಗೆ ಏರ್ಪಾಡು ಮಾಡಿದ್ದಾರೆ.

Vijaya Karnataka Web 10 Jul 2020, 3:13 pm
ವಿಜಯಪುರ: ಉಸಿರಾಟದ ಸಮಸ್ಯೆಯಿದ ಬಳಲಿ ಚಿಕಿತ್ಸೆ ಸಿಗದೆ ಪರದಾಡುತ್ತಿದ್ದ ವ್ಯಕ್ತಿಗೆ ವಿಜಯಪುರ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ತಕ್ಷಣದ ಚಿಕಿತ್ಸೆಗೆ ಅಗತ್ಯ ಕ್ರಮ ಕೈಗೊಂಡು ಮಾನವೀಯತೆ ಮೆರೆದಿದ್ದಾರೆ.
Vijaya Karnataka Web YS Patil
ವಿಜಯಪುರ ಜಿಲ್ಲಾಧಿಕಾರಿ


ಸಿಂದಗಿ ತಾಲೂಕಿನ ಗ್ರಾಮವೊಂದರ ವ್ಯಕ್ತಿ ಉಸಿರಾಟ ಸಮಸ್ಯೆಯಿಂದ ಬಳಲಿದ್ದು, ಸಂಬಂಧಿಕರು ನಿನ್ನೆ(ಗುರುವಾರ) ರಾತ್ರಿ ವಿಜಯಪುರಕ್ಕೆ ಕರೆತಂದು ಚಿಕಿತ್ಸೆ ಕೊಡಿಸಲು ಮುಂದಾದಾಗ ಯಾವುದೇ ಆಸ್ಪತ್ರೆಯವರು ದಾಖಲಿಸಕೊಳ್ಳಲು ನಿರಾಕರಿಸಿದ್ದಾರೆ.

ವಿಜಯಪುರ: 28 ಜನಕ್ಕೆ ಕೊರೊನಾ ಪಾಸಿಟಿವ್, 427ಕ್ಕೇರಿದ ಸೋಂಕಿತರ ಸಂಖ್ಯೆ

ಇಂದು(ಶುಕ್ರವಾರ) ಬೆಳಗ್ಗೆ ರೋಗಿಯನ್ನು ಕಾರಿನಲ್ಲಿ ನೇರವಾಗಿ ಜಿಲ್ಲಾಧಿಕಾರಿ ಕಚೇರಿಗೆ ಕರೆತರಲಾಗಿದ್ದು, ಈ ವೇಳೆ ರೋಗಿಯೊಂದಿಗೆ ಖುದ್ದು ಜಿಲ್ಲಾಧಿಕಾರಿ ಮಾತನಾಡಿಸಿ ಆರೋಗ್ಯ ವಿಚಾರಿಸಿದರು.

ಜಿಲ್ಲಾಸ್ಪತ್ರೆ ಸೇರಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ವೈದ್ಯರು ನಿರಾಕರಿಸಿದ್ದಾರೆ. ರಾತ್ರಿಯೆಲ್ಲಾ ತಿರುಗಾಡಿದೆವು. ಆದರೆ, ಯಾರೊಬ್ಬರೂ ಚಿಕಿತ್ಸೆ ನೀಡಲು ಸ್ಪಂದಿಸಿಲ್ಲ ಎಂದು ಸಂಬಂಧಿಕರು ಈ ವೇಳೆ ಜಿಲ್ಲಾಧಿಕಾರಿ ಎದುರು ಅಳಲು ತೋಡಿಕೊಂಡರು.

ವಿಜಯಪುರ: ಅಕ್ಕಮಹಾದೇವಿ ವಿವಿಯ 7 ಸಿಬ್ಬಂದಿ ಸೇರಿ‌ 51 ಜನರಿಗೆ ಸೋಂಕು ದೃಢ

ಜಿಲ್ಲಾಧಿಕಾರಿ ತಕ್ಷಣವೇ ವಿಜಯಪುರ ಜಿಲ್ಲಾಸ್ಪತ್ರೆ ವೈದ್ಯರಿಗೆ ಕರೆ ಮಾಡಿ ರೋಗಿಯನ್ನು ಚಿಕಿತ್ಸೆಗೆ ದಾಖಲಿಸಿಕೊಳ್ಳಲು ಸೂಚನೆ ನೀಡಿದರು. ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಅವರ ಕರ್ತವ್ಯಪ್ರಜ್ಞೆ ಹಾಗೂ ಮಾನವೀಯತೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ