ಆ್ಯಪ್ನಗರ

'ಕೂಡಲೇ ಶಾಲೆ ಆರಂಭಿಸದಿದ್ದರೆ ಸರ್ಕಾರದ ನೆರವು ಕಟ್ ಮಾಡ್ತೀವಿ' - ಡೊನಾಲ್ಡ್ ಟ್ರಂಪ್

ಕೊರೊನಾ ಸೋಂಕು ಅಮೆರಿಕಾದಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಇಂತಹ ಸಂಕಷ್ಟದ ಸಮಯದಲ್ಲೇ ಶಾಲಾ ಆಡಳಿತ ಮಂಡಳಿಗಳಿಗೆ ಶಾಲೆಗಳನ್ನು ಪುನರ್ ಆರಂಭಿಸುವಂತೆ ಸೂಚಿಸಿದ್ದು, ತಪ್ಪಿದ್ದಲ್ಲಿ ಸರ್ಕಾರದಿಂದ ನೀಡುವ ಹಣಕಾಸಿನ ನೆರವನ್ನು ಸ್ಥಗಿತಗೊಳಿಸುವುದಾಗಿ ಎಚ್ಚರಿಸಿದ್ದಾರೆ.

TIMESOFINDIA.COM 9 Jul 2020, 1:18 pm
ವಾಷಿಂಗ್ಟನ್: ಜಗತ್ತಿನೆಲ್ಲೆಡೆ ಕೊರೊನಾ ವೈರಸ್‌ ರೋಗ ಇನ್ನೂ ತಾಂಡವವಾಡುತ್ತಿದೆ. ಈಗಾಗಲೇ ಸಾವಿರಾರು ಮಂದಿ ಸಾವನ್ನಪ್ಪಿ, ಲಕ್ಷಾಂತರ ಮಂದಿ ಸೋಂಕಿಗೆ ಒಳಗಾಗಿದ್ದಾರೆ. ಜಗತ್ತಿನ ದೊಡ್ಡಣ್ಣ ಅಂತಾ ಕರೆಸಿಕೊಳ್ತಿರೋ ಅಮೆರಿಕಾ ಕೂಡ ಕೊರೊನಾ ರೋಗದ ಏಟಿನಿಂದ ಇನ್ನೂ ಹೊರಬಂದಿಲ್ಲ. ಈ ಮಧ್ಯೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶಾಲೆಗಳನ್ನು ಆರಂಭಿಸಲೇಬೇಕೆಂದು ವಾರ್ನಿಂಗ್ ಕೊಟ್ಟಿದ್ದಾರೆ.
Vijaya Karnataka Web DONALD TRUMP




ಇದಕ್ಕೆ ಪೂರಕವಾಗಿ ಉಪಾಧ್ಯಕ್ಷ ಮೈಕ್ ಪೆನ್ಸ್ ಅವರು ಶಾಲಾ ಕಾಲೇಜುಗಳನ್ನು ಮರು ಆರಂಭಿಸುವುದಕ್ಕೆ ಪೂರಕವಾಗಿರುವಂತಹ ನೂತನ ಮಾರ್ಗಸೂಚಿಗಳನ್ನು ಕೊರೊನಾ ನಿಯಂತ್ರಣ ಕೇಂದ್ರದ ಅದಿಕಾರಿಗಳು ಶೀಘ್ರದಲ್ಲೇ ಬಿಡುಗಡೆ ಮಾಡುತ್ತಾರೆ ಎಂದಿದ್ದಾರೆ. ಮೈಕ್ ಪೆನ್ಸ್ ಹೇಳಿಕೆ ನೀಡಿದ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ ಶಾಲೆಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಜಗತ್ತು ಚೀನಾ ಕಮ್ಯೂನಿಸ್ಟ್ ಪಕ್ಷದ ಅಸಲಿ ಚಹರೆ ನೋಡಿದೆ: ಪಾಂಪಿಯೋ ಅಬ್ಬರಕ್ಕೆ ಹೈರಾಣಾದ ಡ್ರ್ಯಾಗನ್!

ಇನ್ನೊಂದೆಡೆ ನ್ಯೂಯಾರ್ಕ್ ಮೇಯರ್ ಬಿಲ್ ಡಿ ಬ್ಲೆಸಿಯೋ ಅವರು ‘ ಬಹುತೇಕ ಶಾಲೆಗಳಲ್ಲಿ ಎಲ್ಲಾ ಮಕ್ಕಳು ಪುನಃ ಶಾಲೆಗೆ ಬರುವ ಪರಿಸ್ಥಿತಿ ನಿರ್ಮಾಣವಾಗಿಲ್ಲ. ವಾರದಲ್ಲಿ ಎರಡ್ಮೂರು ದಿನ ಮಾತ್ರ ಮಕ್ಕಳು ಶಾಲೆಗೆ ಬಂದರೆ ಉಳಿದ ದಿನಗಳಲ್ಲಿ ಆನ್‌ಲೈನ್ ಮೂಲಕವೇ ಶಿಕ್ಷಣ ಪಡೆಯಲಿದ್ದಾರೆ’ ಎಂದಿದ್ದಾರೆ. ಈ ಮಧ್ಯೆ ಕೊರೊನಾ ಸೋಂಕು ತಡೆಗಟ್ಟಲು ಆರೋಗ್ಯಾಧಿಕಾರಿಗಳು ಜಾರಿಗೊಳಿಸಿರುವ ಸುರಕ್ಷತಾ ಕ್ರಮಗಳು ಅವಾಸ್ತವಿಕತೆಯಿಂದ ಕೂಡಿದ್ದು, ವೆಚ್ಚದಾಯಕವಾಗಿವೆ ಎಂದು ಟೀಕಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ