ಆ್ಯಪ್ನಗರ

ಪಾಕಿಸ್ತಾನಕ್ಕೆ ಮರಳುತ್ತಿದ್ದಂತೆ ನವಾಜ್ ಷರೀಫ್ ಬಂಧನ ಸಾಧ್ಯತೆ

ಭ್ರಷ್ಟಾಚಾರ ಮತ್ತು ಅಧಿಕಾರ ದುರುಪಯೋಗ ಪ್ರಕರಣದಲ್ಲಿ ಪಾಕಿಸ್ತಾನ ಸುಪ್ರೀಂಕೋರ್ಟ್‌ನಿಂದ 10 ವರ್ಷ ಜೈಲು ಶಿಕ್ಷೆಗೊಳಗಾಗಿರುವ ಪಾಕ್‌ನ ಮಾಜಿ ಪ್ರಧಾನಿ ನವಾಜ್ ಷರೀಫ್ ಲಂಡನ್‌ನಿಂದ ಪಾಕಿಸ್ತಾನಕ್ಕೆ ಮರಳುತ್ತಿದ್ದಂತೆ ಏರ್‌ಪೋರ್ಟ್‌ನಲ್ಲೇ ಬಂಧನಕ್ಕೊಳಗಾಗುವ ಸಾಧ್ಯತೆಯಿದೆ.

Vijaya Karnataka Web 12 Jul 2018, 10:27 pm
ಲಾಹೋರ್: ಭ್ರಷ್ಟಾಚಾರ ಮತ್ತು ಅಧಿಕಾರ ದುರುಪಯೋಗ ಪ್ರಕರಣದಲ್ಲಿ ಪಾಕಿಸ್ತಾನ ಸುಪ್ರೀಂಕೋರ್ಟ್‌ನಿಂದ 10 ವರ್ಷ ಜೈಲು ಶಿಕ್ಷೆಗೊಳಗಾಗಿರುವ ಪಾಕ್‌ನ ಮಾಜಿ ಪ್ರಧಾನಿ ನವಾಜ್ ಷರೀಫ್ ಲಂಡನ್‌ನಿಂದ ಪಾಕಿಸ್ತಾನಕ್ಕೆ ಮರಳುತ್ತಿದ್ದಂತೆ ಏರ್‌ಪೋರ್ಟ್‌ನಲ್ಲೇ ಬಂಧನಕ್ಕೊಳಗಾಗುವ ಸಾಧ್ಯತೆಯಿದೆ.
Vijaya Karnataka Web Navaz Sharif


ನವಾಜ್ ಷರೀಫ್ ಮರಳುವ ಸಂದರ್ಭ ಅವರ ಬೆಂಬಲಿಗರು ರ‍್ಯಾಲಿ ನಡೆಸಿ ಅವರನ್ನು ಮೆರವಣಿಗೆಯಲ್ಲಿ ಕರೆದೊಯ್ಯುವ ಸಾಧ್ಯತೆಯಿರುವುದರಿಂದ ಮುಂಜಾಗೃತಾ ಕ್ರಮವಾಗಿ ಅಪಾರ ಸಂಖ್ಯೆಯ ಬೆಂಬಲಿಗರನ್ನು ಪಾಕ್ ಪೊಲೀಸರು ಬಂಧಿಸಿದ್ದಾರೆ.

ಕಳೆದ ಜುಲೈನಲ್ಲಿ ಭ್ರಷ್ಟಾಚಾರ ಪ್ರಕರಣದಲ್ಲಿ ದೋಷಿ ಎಂದು ನವಾಜ್ ಷರೀಫ್ ವಿರುದ್ಧ ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ನಂತರ ಕಳೆದ ವಾರ ಶಿಕ್ಷೆ ಪ್ರಮಾಣ ಪ್ರಕಟಿಸಿದ್ದು, ಲಂಡನ್‌ನಲ್ಲಿ ಐಷಾರಾಮಿ ಬಂಗಲೆ ಸೇರಿದಂತೆ ಅಕ್ರಮ ಆಸ್ತಿ ಖರೀದಿಸಿದ್ದ ಆರೋಪದ ಮೇರೆಗೆ ನವಾಜ್ ಷರೀಫ್‌ಗೆ 10 ವರ್ಷ ಜೈಲು ಶಿಕ್ಷೆ ಮತ್ತು ಪನಾಮ ಹಗರಣದಲ್ಲಿ ಪುತ್ರಿ ಮರಿಯಮ್ ನವಾಜ್‌ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು.

ನವಾಜ್ ಪತ್ನಿ ಅನಾರೋಗ್ಯದ ಹಿನ್ನೆಲೆಯಲ್ಲಿ ಲಂಡನ್‌ನಲ್ಲಿದ್ದು, ಪಾಕ್ ಸುಪ್ರೀಂಕೋರ್ಟ್‌ ಶಿಕ್ಷೆ ಪ್ರಕಟಿಸಿರುವ ಹಿನ್ನೆಲೆಯಲ್ಲಿ ಲಾಹೋರ್‌ಗೆ ಮರಳಲಿದ್ದಾರೆ ಎನ್ನಲಾಗಿದೆ. ಹೀಗಾಗಿ ಲಾಹೋರ್ ಏರ್‌ಪೋರ್ಟ್ ಮತ್ತು ಅಲ್ಲಿನ ರಸ್ತೆಗಳಲ್ಲಿ ಪೊಲೀಸರು ಬಿಗಿಭದ್ರತೆ ಕೈಗೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ