ಆ್ಯಪ್ನಗರ

ಕ್ಯಾಲಿಫೋರ್ನಿಯಾ: ಗುಂಡಿನ ದಾಳಿಗೆ ಮೂವರ ಸಾವು

ಅಮೆರಿಕದಲ್ಲಿ ಮತ್ತೊಂದು ಶೂಟೌಟ್‌ ನಡೆದಿದೆ. ಕ್ಯಾಲಿಫೋರ್ನಿಯಾದಲ್ಲಿ ನಡೆದ ಗಾರ್ಲಿಕ್‌ ಫೆಸ್ಟಿವಲ್‌ನಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಪೊಲೀಸರು ಕೂಡ ಕಾರ್ಯಾಚರಣೆ ನಡೆಸಿದ್ದಾರೆ.

Vijaya Karnataka Web 29 Jul 2019, 7:51 pm
ಕ್ಯಾಲಿಫೋರ್ನಿಯಾ: ಅಮೆರಿಕದ ಕ್ಯಾಲಿಪೋರ್ನಿಯಾದ ಆಹಾರ ಉತ್ಸವದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟಿದ್ದು, ಇತರ 15 ಮಂದಿ ಗಾಯಗೊಂಡಿದ್ದಾರೆ.
Vijaya Karnataka Web ಗುಂಡಿನ ದಾಳಿ
ಗುಂಡಿನ ದಾಳಿ


ಪೊಲೀಸರ ಕಾರ್ಯಾಚರಣೆಯಲ್ಲಿ ಬಂದೂಕುಧಾರಿಯೊಬ್ಬ ಹತನಾಗಿದ್ದಾನೆ. ಗಿಲ್ರಾಯ್ ಗಾರ್ಲಿಕ್ ಉತ್ಸವ ವಾರಾಂತ್ಯದಲ್ಲಿ ಮುಗಿಯುವ ಹೊತ್ತಿಗೆ, ಈ ಗುಂಡಿನ ದಾಳಿ ನಡೆದಿದೆ.

ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಟ್ವೀಟ್ ಮಾಡಿದ್ದು, ಸುರಕ್ಷಿತ ಮತ್ತು ಎಚ್ಚರಿಕೆಯಿಂದ ಇರುವಂತೆ ಜನರಿಗೆ ಮನವಿ ಮಾಡಿದ್ದಾರೆ.

ತೀವ್ರವಾಗಿ ಗಾಯಗೊಂಡಿರುವ 10ಕ್ಕೂ ಹೆಚ್ಚು ಮಂದಿಗೆ ಚಿಕಿತ್ಸೆ ನೀಡಲಾಗಿದ್ದು, ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಸಾಂತಾ ಕ್ಲಾರಾ ವ್ಯಾಲಿ ಆರೋಗ್ಯ ವ್ಯವಸ್ಥೆಯ ವಕ್ತಾರರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ