ಆ್ಯಪ್ನಗರ

ಅಚ್ಚರಿಯ ಬೆಳವಣಿಗೆ, ಬ್ರಿಟನ್‌ ಹಣಕಾಸು ಸಚಿವರಾಗಿ ನಾರಾಯಣಮೂರ್ತಿ ಅಳಿಯ ರಿಷಿ ಸುನಕ್‌ ನೇಮಕ!

ಸಚಿವ ಸಂಪುಟ ಪುನಾರಚನೆ ವೇಳೆ ಅಚ್ಚರಿಯ ರೀತಿಯಲ್ಲಿ ಹಾಲಿ ವಿತ್ತ ಸಚಿವ ಸಾಜಿದ್‌ ಜಾವಿದ್‌ ರಾಜೀನಾಮೆ ನೀಡಿದ್ದರು. ಈ ಸ್ಥಾನಕ್ಕೆ ಇನ್ಫೋಸಿಸ್‌ ಸಂಸ್ಥಾಪಕ ನಾರಾಯಣಮೂರ್ತಿ ಅಳಿಯ ರಿಷಿ ಸುನಕ್‌ರನ್ನು ಜಾನ್ಸನ್‌ ನೇಮಕ ಮಾಡಿದ್ದಾರೆ.

Agencies 13 Feb 2020, 6:53 pm
ಲಂಡನ್‌: ಬ್ರಿಟನ್‌ ನೂತನ ಹಣಕಾಸು ಸಚಿವರಾಗಿ ರಿಷಿ ಸುನಕ್‌ರನ್ನು ಪ್ರಧಾನಿ ಬೋರಿಸ್‌ ಜಾನ್ಸನ್‌ ಗುರುವಾರ ನೇಮಕ ಮಾಡಿದ್ದಾರೆ.
Vijaya Karnataka Web Rishi Sunak


ಸಚಿವ ಸಂಪುಟ ಪುನಾರಚನೆ ವೇಳೆ ಅಚ್ಚರಿಯ ರೀತಿಯಲ್ಲಿ ಹಾಲಿ ವಿತ್ತ ಸಚಿವ ಸಾಜಿದ್‌ ಜಾವಿದ್‌ ರಾಜೀನಾಮೆ ನೀಡಿದ್ದರು. ಈ ಸ್ಥಾನಕ್ಕೆ ಇನ್ಫೋಸಿಸ್‌ ಸಂಸ್ಥಾಪಕ ನಾರಾಯಣಮೂರ್ತಿ ಅಳಿಯ ರಿಷಿ ಸುನಕ್‌ರನ್ನು ಜಾನ್ಸನ್‌ ನೇಮಕ ಮಾಡಿದ್ದಾರೆ.

2015ರಲ್ಲಿ ಬ್ರಿಟನ್‌ ಸಂಸತ್‌ಗೆ ಆಯ್ಕೆಯಾಗಿದ್ದ ರಿಷಿ ಈ ಹಿಂದೆ ಖಜಾನೆ ಇಲಾಖೆ ಮುಖ್ಯ ಕಾರ್ಯದರ್ಶಿಯಾಗಿದ್ದರು. ಇದು ಹಣಕಾಸು ಸಚಿವರ ನಂತರದ ಪ್ರಮುಖ ಸ್ಥಾನವಾಗಿದೆ.

ಪ್ರತಿಷ್ಠಿತ ವಿಂಚೆಸ್ಟರ್‌ ಕಾಲೇಜಿನಲ್ಲಿ ಅಧ್ಯಯನ ನಡೆಸಿರುವ ಸುನಕ್‌, ಆಕ್ಸ್‌ಫರ್ಡ್‌ ವಿವಿಯಲ್ಲಿ ರಾಜಕೀಯ, ಫಿಲಾಸಫಿ ಮತ್ತು ಅರ್ಥಶಾಸ್ತ್ರದಲ್ಲಿ ಉನ್ನತ ಶಿಕ್ಷಣ ಪಡೆದುಕೊಂಡಿದ್ದಾರೆ. ಅಮೆರಿಕಾ ಸ್ಟಾನ್‌ಫರ್ಡ್‌ ವಿವಿಯಿಂದ ಎಂಬಿಎ ಪದವಿಯನ್ನೂ ಅವರು ಪಡೆದುಕೊಂಡಿದ್ದಾರೆ.

ಸುನಕ್‌ ತಂದೆ ವೈದ್ಯರಾಗಿದ್ದು, ತಾಯಿ ರಾಸಾಯನಿಕ ವಸ್ತುಗಳ ಅಂಗಡಿ ನಡೆಸುತ್ತಿದ್ದರು. ರಾಜಕೀಯಕ್ಕೆ ಕಾಲಿಡುವ ಮೊದಲು ಹೂಡಿಕೆ ಬ್ಯಾಂಕ್‌ ಗೋಲ್ಡ್‌ಮನ್‌ ಸ್ಯಾಶ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ನಂತರ ಹೂಡಿಕೆ ಕಂಪನಿಯೊಂದನ್ನು ಸ್ಥಾಪಿಸಿದ್ದರು. ಕೆಲವೇ ತಿಂಗಳ ಹಿಂದೆ ಬ್ರಿಟನ್‌ ಸಂಸತ್‌ಗೆ ನಡೆದ ಚುನಾವಣೆಯಲ್ಲಿ ಅವರು ಪುನರಾಯ್ಕೆಯಾಗಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ