ಆ್ಯಪ್ನಗರ

ವಿಶ್ವಸಂಸ್ಥೆಯಲ್ಲಿನ ಅಮೆರಿಕ ರಾಯಭಾರಿ ನಿಕ್ಕಿ ಹ್ಯಾಲೆ ರಾಜೀನಾಮೆ

ನಿಕ್ಕಿ ಹ್ಯಾಲೆ ರಾಜೀನಾಮೆಯನ್ನು ಖಚಿತಪಡಿಸಿದ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್

TOI.in 9 Oct 2018, 9:02 pm
ವಾಷಿಂಗ್ಟನ್: ವಿಶ್ವಸಂಸ್ಥೆಯಲ್ಲಿನ ಅಮೆರಿಕ ರಾಯಭಾರಿ ನಿಕ್ಕಿ ಹ್ಯಾಲೆ ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಈ ಅಚ್ಚರಿಯ ಬೆಳವಣಿಗೆಯನ್ನು ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಖಚಿತಪಡಿಸಿದ್ದಾರೆ.
Vijaya Karnataka Web nikkey-haley


ವರ್ಷಾಂತ್ಯದೊಳಗೆ ಭಾರತ ಸಂಜಾತೆ ನಿಕ್ಕಿ ಹ್ಯಾಲೆ ಟ್ರಂಪ್ ಆಡಳಿತವನ್ನು ತೊರೆಯಲಿದ್ದಾರೆ. ಅವರ ರಾಜೀನಾಮೆ ಪತ್ರವನ್ನು ಟ್ರಂಪ್ ಅಂಗೀಕರಿಸಿದ್ದಾರೆ ಎಂದು ಅಮೆರಿಕ ಮಾಧ್ಯಮ ಫಾಕ್ಸ್ ವರದಿ ಮಾಡಿದೆ.

ಸಮರ್ಥ ರಾಯಭಾರಿ ನಿಕ್ಕಿ ಹ್ಯಾಲೆ ರಾಜೀನಾಮೆ ಹಿಂದಿರುವ ಕಾರಣಗಳು ತಿಳಿದು ಬಂದಿಲ್ಲ. ಆದಗ್ಯೂ ಟ್ರಂಪ್ ಆಡಳಿತವನ್ನು ತೊರೆದಿರುವ ಹಿರಿಯ ಅಧಿಕಾರಿಗಳ ಸಾಲಿಗೆ ಸೇರ್ಪಡೆಯಾಗಿದ್ದಾರೆ.

ಸೌತ್ ಕರೊಲಿನಾ ಮಾಜಿ ಗವರ್ನರ್ ನಿಕ್ಕಿ ಹ್ಯಾಲೆ ಅವರನ್ನು 2017 ಜನವರಿ ತಿಂಗಳಲ್ಲಿ ಡೋನಾಲ್ಡ್ ಟ್ರಂಪ್, ವಿಶ್ವಸಂಸ್ಥೆಯಲ್ಲಿನ ಅಮೆರಿಕ ರಾಯಭಾರಿ ಆಗಿ ನೇಮಕ ಮಾಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ