ಆ್ಯಪ್ನಗರ

ಕುಲಭೂಷಣ್‌ ಜಾಧವ್‌ ರಾಯಭಾರಿ ಭೇಟಿಗೆ ಅವಕಾಶ ಕಲ್ಪಿಸಲು ಪಾಕ್‌ ಒಪ್ಪಿಗೆ

ಭಾರತದ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್‌ ಜಾಧವ್‌ ಅವರನ್ನು ಭೇಟಿ ಮಾಡಲು ಭಾರತೀಯ ರಾಯಭಾರಿ ಅಧಿಕಾರಗಳಿಗೆ ಪಾಕಿಸ್ತಾನ ಅವಕಾಶ ನೀಡಿದೆ.

Vijaya Karnataka Web 19 Jul 2019, 6:02 pm
Vijaya Karnataka Web ಕುಲಭೂಷಣ್‌ ಜಾಧವ್‌
ಕುಲಭೂಷಣ್‌ ಜಾಧವ್‌
ಇಸ್ಲಾಮಾಬಾದ್‌: ಭಾರತದ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಕುರಿತು ಅಂತಾರಾಷ್ಟ್ರೀಯ ನ್ಯಾಯಾಲಯ ನೀಡಿರುವ ತೀರ್ಪಿನ ಬೆನ್ನಲ್ಲೇ ಪಾಕಿಸ್ತಾನ ಕ್ರಮ ಕೈಗೊಳ್ಳಲು ಮುಂದಾಗಿದೆ.

ಕುಲಭೂಷಣ್‌ ಜಾಧವ್ ಅವರ ಭೇಟಿಗೆ ಭಾರತದ ರಾಯಭಾರಿಗೆ ಅವಕಾಶ ಕಲ್ಪಿಸಲಾಗುವುದು. ಈ ಸಂಬಂಧ ಕೆಲವು ಕಾನೂನು ತಿದ್ದುಪಡಿ ಮಾಡಲಾಗುವುದು ಎಂದು ಪಾಕಿಸ್ತಾನ ವಿದೇಶಾಂಗ ವ್ಯವಹಾರ ಸಚಿವಾಲಯ ಮಾಹಿತಿ ನೀಡಿದೆ.

ವಿಯೆನ್ನಾ ಒಪ್ಪಂದವನ್ನು ಪಾಲಿಸುವಂತೆ ಅಂತಾರಾಷ್ಟ್ರೀಯ ನ್ಯಾಯಾಲಯ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಪಾಕಿಸ್ತಾನ ಕ್ರಮ ಕೈಗೊಳ್ಳುತ್ತಿದೆ.

ಪಾಕಿಸ್ತಾನದ ಬಂಧನದಲ್ಲಿರುವ ಕುಲಭೂಷಣ್ ಜಾಧವ್‍ಗೆ ಗಲ್ಲು ಶಿಕ್ಷೆ ವಿಧಿಸಲಾಗಿತ್ತು. ಆದರೆ ಇದನ್ನು ಪ್ರಶ್ನಿಸಿ ಭಾರತ, ಅಂತಾರಾಷ್ಟ್ರೀಯ ನ್ಯಾಯಾಲಯದ ಮೊರೆ ಹೋಗಿತ್ತು. ವಾದ ಪ್ರತಿವಾದ ಆಲಿಸಿದ ಅಂತಾರಾಷ್ಟ್ರೀಯ ನ್ಯಾಯಾಲಯ ಮೊನ್ನೆ ಆದೇಶ ಪ್ರಕಟಿಸಿತ್ತು.

ಜಾಧವ್ ಅವರಿಗೆ ನೀಡಿರುವ ಮರಣದಂಡನೆ ಶಿಕ್ಷೆಯನ್ನು ಮರುಪರಿಶೀಲಿಸಬೇಕು ಎಂದು ನೆದರ್‌ಲೆಂಡ್‌ನ ಹೇಗ್‍ನಲ್ಲಿರುವ ಅಂತಾರಾಷ್ಟ್ರೀಯ ನ್ಯಾಯಾಲಯ, ಪಾಕಿಸ್ತಾನಕ್ಕೆ ಸೂಚಿಸಿತ್ತು. ನ್ಯಾಯಾಲಯದ ಈ ತೀರ್ಪಿನಿಂದಾಗಿ ಜಾಧವ್ ಅವರಿಗೆ ಪಾಕಿಸ್ತಾನ ನೀಡಿರುವ ಮರಣದಂಡನೆ ಶಿಕ್ಷೆಯನ್ನು ಅಮಾನತ್ತಿಲ್ಲಿಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ