ಆ್ಯಪ್ನಗರ

ಇನ್ನೈದು ನಿಮಿಷದಲ್ಲಿ ಇಳಿಯಬೇಕಾಗಿದ್ದ ವಿಮಾನ ದುರಂತ ಅಂತ್ಯ ಕಂಡಾಗ...!

ಕರಾಚಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಳಿಯಲು ಕೇವಲ 5 ನಿಮಿಷಗಳು ಬಾಕಿ ಇರುವಾಗ PIA ವಿಮಾನ ಅಪಘಾತಕ್ಕೀಡಾಗಿದ್ದು, ಜನವಸತಿ ಪ್ರದೇಶದ ಮೇಲೆ ವಿಮಾನ ಬಿದ್ದಿರುವುದು ಸಾವಿನ ಸಂಖ್ಯೆ ಹೆಚ್ಚುವ ಆತಂಕ ಎದುರಾಗಿದೆ.

Vijaya Karnataka Web 22 May 2020, 5:04 pm
ಕರಾಚಿ: ಪಾಕಿಸ್ತಾನ ಅಂತಾರಾಷ್ಟ್ರೀಯ ವಿಮಾನ(PIA) ಕರಾಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ದುರಂತ ಅಪಘಾತಕ್ಕೀಡಾಗಿದ್ದು, ಸಿಬ್ಬಂದಿಯೂ ಸೇರಿದಂತೆ ವಿಮಾನದಲ್ಲಿದ್ದ 107 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
Vijaya Karnataka Web jpg
ಪಾಕಿಸ್ತಾನದಲ್ಲಿ ವಿಮಾನ ಅಪಘಾತ


ಕರಾಚಿಯ ಜಿನ್ನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅತ್ಯಂತ ಸಮೀಪದ ಜನವಸತಿ ಪ್ರದೇಶದಲ್ಲಿ ವಿಮಾನ ಅಪಘಾತಕ್ಕೀಡಾಗಿದ್ದು, ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿರುವುದು ಆತಂಕಕ್ಕೆ ಕಾರಣವಾಗಿದೆ.

ಕರಾಚಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಳಿಯಲು ಕೇವಲ 5 ನಿಮಿಷಗಳು ಬಾಕಿ ಇರುವಾಗ ವಿಮಾನ ಅಪಘಾತಕ್ಕೀಡಾಗಿದ್ದು, ಜನವಸತಿ ಪ್ರದೇಶದ ಮೇಲೆ ವಿಮಾನ ಬಿದ್ದಿರುವುದು ಸಾವಿನ ಸಂಖ್ಯೆ ಹೆಚ್ಚುವ ಆತಂಕ ಎದುರಾಗಿದೆ.

ಪಾಕಿಸ್ತಾನದಲ್ಲಿ ವಿಮಾನ ದುರಂತ: ಸಿಬ್ಬಂದಿಯೂ ಸೇರಿ ಎಲ್ಲಾ 107 ಪ್ರಯಾಣಿಕರ ದುರ್ಮರಣ?


PIA ಯPK 8303 ವಿಮಾನದಲ್ಲಿ 99 ಪ್ರಯಾಣಿಕರು ಹಾಗೂ 8 ಸಿಬ್ಬಂದಿ ಇದ್ದರು ಎನ್ನಲಾಗಿದೆ. ಇನ್ನೈದು ನಿಮಿಷವಾಗಿದ್ದರೆ ವಿಮಾನ ಲ್ಯಾಂಡ್ ಆಗಬೇಕಿತ್ತು. ಆದರೆ ಅದಕ್ಕೂ ಮುನ್ನವೇ ಅಪಘಾತಕ್ಕೀಡಾಗಿದ್ದು ನಿಜಕ್ಕೂ ದುರಂತವೇ ಸರಿ.

ಕರಾಚಿಗೆ ವಿಮಾನ ನಿಲ್ದಾಣದಿಂದ ಸ್ವಲ್ಪ ದೂರದಲ್ಲಿರುವ ಮಾಲಿರ್‌ನ ಮಾಡೆಲ್ ಕಾಲೋನಿ ಬಳಿಯ ಜಿನ್ನಾ ಗಾರ್ಡ್‌ನ್ ವಸತಿ ಪ್ರದೇಶದಲ್ಲಿ ವಿಮಾನ ಅಪಘಾತಕ್ಕೀಡಾಗಿದೆ ಎನ್ನಲಾಗಿದೆ.

ಆದರೆ ವಿಮಾನ ಜನವಸತಿ ಪ್ರದೇಶದ ಮೇಲೆ ಬಿದ್ದಿರುವುದರಿಂದ ಮನೆಗಳಿಗೂ ಬೆಂಕಿ ಹೊತ್ತುಕೊಂಡಿದ್ದು, ಅಗ್ನಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತಾಗಿದ್ದಾರೆ.


ಇನ್ನು ಕರಾಚಿ ವಿಮಾನ ದುರಂತವನ್ನು ಅತ್ಯಂತ ದು:ಖಕರ ಎಂದು ಬಣ್ಣಿಸಿರುವ ಪಾಕ್ ಪ್ರಧಾನಿ ಇಮ್ರಾನ್ ಖಾನ್, ರಕ್ಷಣಾ ಕಾರ್ಯಾಚರಣೆಗಳ ಮೇಲುಸ್ತುವಾರಿ ಹೊತ್ತುಕೊಂಡಿರುವುದಾಗಿ ಟ್ವೀಟ್ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ