ಆ್ಯಪ್ನಗರ

ಶ್ರೀಲಂಕಾ ಪ್ರಧಾನಿ ಹುದ್ದೆಗೆ ಮಹಿಂದಾ ರಾಜಪಕ್ಸೆ ರಾಜೀನಾಮೆ

ಶ್ರೀಲಂಕಾದಲ್ಲಿ ನಡೆದ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಅ. 26ರಂದು ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರು ಮಹಿಂದಾ ರಾಜಪಕ್ಸೆ ಅವರನ್ನು ಪ್ರಧಾನಿಯನ್ನಾಗಿ ನೇಮಕ ಮಾಡಿದ್ದರು.

Vijaya Karnataka Web 15 Dec 2018, 5:13 pm
ಕೊಲಂಬೊ: ಕಳೆದ ಕೆಲವು ದಿನಗಳಿಂದ ವಿವಿಧ ರಾಜಕೀಯ ವಿದ್ಯಮಾನಗಳಿಗೆ ಸಾಕ್ಷಿಯಾಗಿರುವ ಶ್ರೀಲಂಕಾದಲ್ಲಿ ಪ್ರಧಾನಿ ಹುದ್ದೆಗೆ ಮಹಿಂದಾ ರಾಜಪಕ್ಸೆ ರಾಜೀನಾಮೆ ಶನಿವಾರ ನೀಡಿದ್ದಾರೆ. ಹೀಗಾಗಿ ರಾನಿಲ್ ವಿಕ್ರಮಸಿಂಘೆ ಶ್ರೀಲಂಕಾ ಪ್ರಧಾನಿಯಾಗುವ ಸಾಧ್ಯತೆಯಿದೆ.

ಶ್ರೀಲಂಕಾ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿರುವ ಕುರಿತು ಮಹಿಂದಾ ರಾಜಪಕ್ಸೆ ಯುನೈಟೆಡ್ ಪೀಪಲ್ಸ್‌ ಫ್ರೀಡಂ ಅಲೈಯನ್ಸ್‌ಗೆ ಮಾಹಿತಿ ನೀಡಿದ್ದಾರೆ.

ಶ್ರೀಲಂಕಾದಲ್ಲಿ ನಡೆದ ಕ್ಷಿಪ್ರ ರಾಜಕೀಯದಲ್ಲಿ ಅ. 26ರಂದು ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರು ಮಹಿಂದಾ ರಾಜಪಕ್ಸೆ ಅವರನ್ನು ಪ್ರಧಾನಿಯನ್ನಾಗಿ ನೇಮಕ ಮಾಡಿದ್ದರು.

ಆದರೆ ರಾಜಪಕ್ಸೆಯನ್ನು ಪ್ರಧಾನಿಯನ್ನಾಗಿ ನೇಮಕ ಮಾಡಿದ್ದು ತಪ್ಪು ಎಂದಿರುವ ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಮಹಿಂದಾ ರಾಜಪಕ್ಸೆ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಭಾನುವಾರ ರಾನಿಲ್ ವಿಕ್ರಮಸಿಂಘೆ ಶ್ರೀಲಂಕಾ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ