ಆ್ಯಪ್ನಗರ

ಭಾರತ vs ಚೀನಾ ಗಡಿ ವಿವಾದ; ಮಧ್ಯಸ್ಥಿಕೆ ವಹಿಸಲು ಅಮೆರಿಕ ರೆಡಿಯಂತೆ!

ಭಾರತ ಹಾಗೂ ಚೀನಾ ದೇಶಗಳ ನಡುವಣ ಗಡಿ ವಿವಾದ ಸಂಬಂಧ ಮಧ್ಯಸ್ಥಿಕೆ ವಹಿಸಲು ಸಿದ್ಧವಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಭಿಪ್ರಾಯಪಟ್ಟಿದ್ದಾರೆ. ಟ್ರಂಪ್ ಹೇಳಿಕೆಯು ಹೆಚ್ಚಿನ ಮಹತ್ವ ಗಿಟ್ಟಿಸಿದೆ.

Vijaya Karnataka Web 27 May 2020, 5:50 pm

ಹೈಲೈಟ್ಸ್‌:

  • ಕೊರೊನಾ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಚೀನಾ ವಿರುದ್ದ ವಾಗ್ದಾಳಿ ಮಾಡಿರುವ ಡೊನಾಲ್ಡ್ ಟ್ರಂಪ್.
  • ಭಾರತ ಹಾಗೂ ಚೀನಾ ಗಡಿಯಲ್ಲಿ ಸಂಘರ್ಷ ವಾತಾವರಣ.
  • ಅಮೆರಿಕ ಮುಂದಿಟ್ಟಿರುವ ಆಫರ್ ಭಾರತ-ಚೀನಾ ಸ್ವೀಕರಿಸಬಹುದೇ?.
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web ಡೊನಾಲ್ಡ್ ಟ್ರಂಪ್
ಹೊಸದಿಲ್ಲಿ: ಭಾರತ ಹಾಗೂ ಚೀನಾ ನಡುವಣ ಗಡಿ ವಿವಾದ ತಾರಕಕ್ಕೇರಿದೆ. ಲಡಾಕ್ ಗಡಿ ಪ್ರದೇಶದಲ್ಲಿ ಎರಡೂ ವಿಭಾಗವು ಸೈನ್ಯ ಬಲ ವೃದ್ಧಿಸಿದೆ.
ಈ ಮಧ್ಯೆ ಭಾರತ ಹಾಗೂ ಚೀನಾ ಗಡಿ ವಿವಾದ ಸಂಬಂಧ ಹೇಳಿಕೆ ನೀಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವಿವಾದ ಬಗೆ ಹರಿಸಲು ಮಧ್ಯಸ್ಥಿಕೆ ವಹಿಸಲು ನಾವು ಸಿದ್ಧ ಎಂದು ಹೇಳಿದ್ದಾರೆ.

ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಚೀನಾ ಮೇಲೆ ಆರೋಪಗಳ ಸುರಿಮಳೆಗೈದಿರುವ ಡೊನಾಲ್ಡ್ ಟ್ರಂಪ್ ಹೇಳಿಕೆಯು ಹೆಚ್ಚಿನ ಮಹತ್ವ ಗಿಟ್ಟಿಸಿಕೊಂಡಿದೆ.

ಟಿಬೆಟ್ ಪ್ರತ್ಯೇಕ ರಾಷ್ಟ್ರ ಎಂದು ಪರಿಗಣಿಸುವಂತೆ ಅಮೆರಿಕ ಕಾಂಗ್ರೆಸ್‌ನಲ್ಲಿ ಮಸೂದೆ!

ಭಾರತ ಹಾಗೂ ಚೀನಾ ಗಡಿ ವಿವಾದ ಸಂಬಂಧ ಮಧ್ಯಸ್ಥಿಕೆ ವಹಿಸಲು ಅಮೆರಿಕ ಸಿದ್ಧವಾಗಿದೆ ಎಂಬುದನ್ನು ಎರಡೂ ದೇಶಗಳಿಗೆ ತಿಳಿಸಿದ್ದೇವೆ ಎಂದು ಡೊನಾಲ್ಡ್ ಟ್ರಂಪ್ ಹೇಳಿಕೆ ನೀಡಿದ್ದಾರೆ.

ಕೆಲವು ಸಮಯಗಳ ಹಿಂದೆಯಷ್ಟೇ ಭಾರತ ಹಾಗೂ ಪಾಕಿಸ್ತಾನ ನಡುವಣ ಜಮ್ಮು ಮತ್ತು ಕಾಶ್ಮೀರ ಗಡಿ ವಿಷಯದಲ್ಲೂ ಮಧ್ಯಸ್ಥಿಕೆ ವಹಿಸಲು ಸಿದ್ಧವಾಗಿರುವುದಾಗಿ ಡೊನಾಲ್ಡ್ ಟ್ರಂಪ್ ಹೇಳಿಕೆ ನೀಡಿದ್ದರು.

ಅಂದು ಅಮೆರಿಕ ಸಲಹೆಯನ್ನು ಭಾರತ ನಿರಾಕರಿಸಿತ್ತು. ಇದೀಗ ಅಮೆರಿಕ ಜೊತೆಗೆ ಉತ್ತಮ ಒಡನಾಟವನ್ನು ಹೊಂದಿರುವ ಭಾರತ ಯಾವ ನಿಲುವನ್ನು ತೆಗೆದುಕೊಳ್ಳಲಿದೆ ಎಂಬದನ್ನು ಕಾದು ನೋಡಬೇಕಿದೆ.

ಗಡಿ ಉದ್ವಿಗ್ನತೆ ಕಡಿಮೆ ಮಾಡಲು ಭಾರತ-ಚೀನಾ ಉನ್ನತ ಸೇನಾಧಿಕಾರಿಗಳ ಸರಣಿ ಸಭೆ!

ಚೀನಾ ಜೊತೆಗಿನ ಗಡಿ ವಿವಾದವನ್ನು ರಾಜತಾಂತ್ರಿಕ ಹಾಗೂ ಉನ್ನತ ಮಟ್ಟದ ಮಿಲಿಟರಿ ಮಾತುಕತೆಯ ಮೂಲಕ ಬಗೆ ಹರಿಸಲು ಭಾರತ ಪ್ರಯತ್ನಿಸುತ್ತಿದೆ. ಈ ಮಧ್ಯೆ ಟ್ರಂಪ್ ಹೇಳಿಕೆ ಮಹತ್ವ ಗಿಟ್ಟಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ