ಆ್ಯಪ್ನಗರ

ಪಾಕ್‌ನಲ್ಲಿ ಉಗ್ರವಾದ ಬೇರು ಸಮೇತ ಕಿತ್ತು ಹಾಕಲು ಸಜ್ಜು: ಅಮೆರಿಕ

ಆಂತರಿಕ ಭದ್ರತಾ ವಿಭಾಗದ ವಕ್ತಾರ ಮಾರ್ಗನ್ ವೋರ‍್ಟಗಸ್, ಹಲವಾರು ಭಯೋತ್ಪಾದಕ ದಾಳಿಗಳಿಗೆ ಜೈಷೆ ಕಾರಣವಾಗಿತ್ತು. ದಕ್ಷಿಣ ಏಷ್ಯಾದಲ್ಲಿ ಪ್ರಾದೇಶಿಕ ಸ್ಥಿರತೆ ಮತ್ತು ಶಾಂತಿಗೆ ಬೆದರಿಕೆಯೊಡ್ಡಿತ್ತು ಎಂದು ತಿಳಿಸಿದ್ದಾರೆ.

Vijaya Karnataka Web 2 May 2019, 9:42 pm
ವಾಷಿಂಗ್ಟನ್‌: ಜೈಷೆ ಮೊಹಮದ್‌ ಉಗ್ರ ಸಂಘಟನೆಯ ನಾಯಕ ಮಸೂದ್ ಅಜರ್‌ನನ್ನು ಜಾಗತಿಕ ಭಯೋತ್ಪಾದಕ ಎಂದು ವಿಶ್ವಸಂಸ್ಥೆ ಘೋಷಣೆ ಮಾಡುವ ಮೂಲಕ ಪಾಕಿಸ್ತಾನದಲ್ಲಿ ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತೊಗೆಯುವ ಅಂತಾರಾಷ್ಟ್ರೀಯ ಬದ್ಧತೆಯನ್ನು ಪ್ರದರ್ಶಿಸಿದೆ. ಇದರಿಂದ ದಕ್ಷಿಣ ಏಷ್ಯಾದಲ್ಲಿ ಭದ್ರತೆ ಮತ್ತು ಸ್ಥಿರತೆಯನ್ನು ಕಾಯ್ದುಕೊಳ್ಳಲು ಸಹಕಾರಿಯಾಗಿದೆ ಎಂದು ಅಮೆರಿಕ ಹೇಳಿದೆ.
Vijaya Karnataka Web ಭಾರತ, ಅಮೆರಿಕ
ಭಾರತ, ಅಮೆರಿಕ


ವಿಶ್ವಸಂಸ್ಥೆಯ ಈ ಕ್ರಮವನ್ನು ಸ್ವಾಗತಿಸಿರುವ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮೈಕ್ ಪಾಂಪಿಯೋ ಈ ನಿರ್ಧಾರದಿಂದ ಭಯೋತ್ಪಾದನೆ ವಿರುದ್ಧದ ಅಂತಾರಾಷ್ಟ್ರೀಯ ಸಮುದಾಯಕ್ಕೆ ಜಯ ದೊರೆತಂತಾಗಿದೆ ಮತ್ತು ದಕ್ಷಿಣ ಏಷ್ಯಾದಲ್ಲಿ ಶಾಂತಿ ನೆಲೆಸುವಂತೆ ಮಾಡಲು ಮಹತ್ವದ ಕ್ರಮಕೈಗೊಂಡಂತಾಗಿದೆ ಎಂದು ಹೇಳಿದ್ದಾರೆ.

ಆಂತರಿಕ ಭದ್ರತಾ ವಿಭಾಗದ ವಕ್ತಾರ ಮಾರ್ಗನ್ ವೋರ‍್ಟಗಸ್, ಹಲವಾರು ಭಯೋತ್ಪಾದಕ ದಾಳಿಗಳಿಗೆ ಜೈಷೆ ಕಾರಣವಾಗಿತ್ತು. ದಕ್ಷಿಣ ಏಷ್ಯಾದಲ್ಲಿ ಪ್ರಾದೇಶಿಕ ಸ್ಥಿರತೆ ಮತ್ತು ಶಾಂತಿಗೆ ಬೆದರಿಕೆಯೊಡ್ಡಿತ್ತು ಎಂದು ತಿಳಿಸಿದ್ದಾರೆ.

2010ರಲ್ಲಿ ಅಮೆರಿಕ, ಅಜರ್‌ಗೆ ಜಾಗತಿಕ ಭಯೋತ್ಪಾದಕ ಎಂಬ ಪಟ್ಟಕಟ್ಟಿತ್ತು. 40 ಸಿಆರ್‌ಪಿಎಫ್ ಯೋಧರನ್ನು ಬಲಿ ತೆಗೆದುಕೊಂಡ ಪುಲ್ವಾಮಾ ಭಯೋತ್ಪಾದಕ ದಾಳಿ ನಂತರದ ಕೆಲವೇ ದಿನಗಳಲ್ಲಿ ಅಮೆರಿಕ, ಫ್ರಾನ್ಸ್ ಹಾಗೂ ಬ್ರಿಟನ್ ಅಜರ್‌ನನ್ನು ಜಾಗತಿಕ ಭಯೋತ್ಪಾದಕನೆಂದು ಘೋಷಿಸುವಂತೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಬಂಧ ಸಮಿತಿಗೆ ಪ್ರಸ್ತಾವನೆಯನ್ನು ಸಲ್ಲಿಸಿದ್ದವು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ