ಆ್ಯಪ್ನಗರ

ಜಿಂದಾಲ್‌ನಿಂದ ಕಿಕ್ ಬ್ಯಾಕ್ ಪಡೆದ ಸಿಎಂ: ಯಡಿಯೂರಪ್ಪ

ಜಿಂದಾಲ್ ಕಂಪನಿಗೆ ಭೂಮಿ ಮಾರಾಟದಲ್ಲಿ ಕಿಕ್ ಬ್ಯಾಕ್ ಪಡೆಯಲಾಗಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿಕೊಂಡು ಕೆಲ ಸಚಿವರು ಕಿಕ್ ಬ್ಯಾಕ್ ಪಡೆದುಕೊಂಡಿದ್ದಾರೆ. ಎಂದು ಪುನರುಚ್ಚರಿಸಿದರು.

Vijaya Karnataka Web 9 Jun 2019, 11:23 am
ಯಾದಗಿರಿ: ಜಿಂದಾಲ್‌ ಕಂಪನಿಗೆ ಅತಿ ಕಡಿಮೆ ದರದಲ್ಲಿ ಭೂಮಿ ಮಾರಾಟ ಮಾಡುವ ಮೂಲಕ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹಾಗೂ ಸಂಪುಟ ಸಹೋದ್ಯೋಗಿಗಳು ಕಿಕ್‌ಬ್ಯಾಕ್‌ ಪಡೆದುಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದ್ದಾರೆ.
Vijaya Karnataka Web ಯಡಿಯೂರಪ್ಪ
ಯಡಿಯೂರಪ್ಪ


ಯಾದಗಿರಿಯಲ್ಲಿ ಬಿ ಎಸ್ ಯಡಿಯೂರಪ್ಪ ಸುದ್ದಿಗಾರರೊಂದಿಗೆ ಮಾತನಾಡಿದರು.

ಜಿಂದಾಲ್ ಕಂಪನಿಗೆ ಭೂಮಿ ಮಾರಾಟದಲ್ಲಿ ಕಿಕ್ ಬ್ಯಾಕ್ ಪಡೆಯಲಾಗಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿಕೊಂಡು ಕೆಲ ಸಚಿವರು ಕಿಕ್ ಬ್ಯಾಕ್ ಪಡೆದುಕೊಂಡಿದ್ದಾರೆ. ಎಂದು ಪುನರುಚ್ಚರಿಸಿದರು.

ಒಂದು ಎಕರೆಗೆ ಕೇವಲ ಒಂದು ಲಕ್ಷ ಇಪ್ಪತ್ತು ಸಾವಿರ ರೂಪಾಯಿ ನಿಗದಿ ಮಾಡಿ ಮಾರಾಟ ಮಾಡಿದ್ದಾರೆ. ಈ ಮೂಲಕ ಜಿಂದಾಲ್ ಕಂಪನಿಯಿಂದ ಕಿಕ್ ಬ್ಯಾಕ್ ಹೋಗಿದೆ ಎಂದು ಬಿಎಸ್‌ವೈ ದೂರಿದರು.

ಜಿಂದಾಲ್ ಏನು ಮಾಡುತ್ತಿದೆ ಎಂಬುದು ಯಾವುದೇ ಮಾಹಿತಿ ನೀಡಿಲ್ಲ. ಆದರೆ ಸರಕಾರ ಅವರಿಗೆ ಭೂಮಿ ಕೊಡುತ್ತಿರುವುದು ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ ಎಂದರು.

ಸಂಪುಟ ವಿಸ್ತರಣೆಯಾದ ನಂತರ ಸರಕಾರ ಉಳಿಯುತ್ತೊ ಪತನವಾಗುತ್ತೋ ಕಾದು ನೋಡಿ ಎಂದು ಬಿಎಸ್‌ ಯಡಿಯೂರಪ್ಪ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ