ಆ್ಯಪ್ನಗರ

ರಾಜ್ಯದಲ್ಲಿ ಶೀಘ್ರವೇ ಬಿಜೆಪಿ ಸರಕಾರ

ರಾಜ್ಯದಲ್ಲಿರುವ ಸಮ್ಮಿಶ್ರ ಸರಕಾರದ ಆಯಸ್ಸು ಮುಗಿದಿದೆ. ಕಾಂಗ್ರೆಸ್‌ ಪಕ್ಷ ವು ಕೊನೇ ಕ್ಷ ಣಗಳನ್ನು ಎಣಿಸುತ್ತಿದೆ. 14 ಶಾಸಕರ ರಾಜೀನಾಮೆಯಿಂದ ರಾಜ್ಯದಲ್ಲಿನ ಸಮ್ಮಿಶ್ರ ಸರಕಾರದ ಆಯಸ್ಸು ಮುಗಿದಿದೆ. ಶೀಘ್ರವೇ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಚಿವ ಮುಖಂಡ ಬಾಬುರಾವ್‌ ಚಿಂಚನಸೂರ ವಿಶ್ವಾಸ ವ್ಯಕ್ತಪಡಿಸಿದರು.

Vijaya Karnataka 21 Jul 2019, 4:42 pm
ಗುರುಮಠಕಲ್‌ :ರಾಜ್ಯದಲ್ಲಿರುವ ಸಮ್ಮಿಶ್ರ ಸರಕಾರದ ಆಯಸ್ಸು ಮುಗಿದಿದೆ. ಕಾಂಗ್ರೆಸ್‌ ಪಕ್ಷ ವು ಕೊನೇ ಕ್ಷ ಣಗಳನ್ನು ಎಣಿಸುತ್ತಿದೆ. 14 ಶಾಸಕರ ರಾಜೀನಾಮೆಯಿಂದ ರಾಜ್ಯದಲ್ಲಿನ ಸಮ್ಮಿಶ್ರ ಸರಕಾರದ ಆಯಸ್ಸು ಮುಗಿದಿದೆ. ಶೀಘ್ರವೇ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಚಿವ ಮುಖಂಡ ಬಾಬುರಾವ್‌ ಚಿಂಚನಸೂರ ವಿಶ್ವಾಸ ವ್ಯಕ್ತಪಡಿಸಿದರು.
Vijaya Karnataka Web soon the bjp government in the state
ರಾಜ್ಯದಲ್ಲಿ ಶೀಘ್ರವೇ ಬಿಜೆಪಿ ಸರಕಾರ


ಜನರ ಆಶೋತ್ತರಗಳಿಗೆ ಸ್ಪಂದಿಸದ ಸರಕಾರದ ಧೋರಣೆಯಿಂದ ಬೇಸತ್ತು ರಾಜೀನಾಮೆ ನೀಡಿರುವುದಾಗಿ ಶಾಸಕರು ಹೇಳಿದ್ದಾರೆ. ರಾಜ್ಯದಲ್ಲಿ ಇಂತಹ ಚಟುವಟಿಕೆಗಳು ನಡೆಯತ್ತಲೇ ಇವೆ. ರಾಜ್ಯ ಹಾಗೂ ಕ್ಷೇತ್ರದ ಜನರ ಹಿತರಕ್ಷ ಣೆ ನಿಟ್ಟಿನಲ್ಲಿ ಇಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಿಂದ ಹೊರಬಂದಿದ್ದಾರೆ. ಈ ಸರಕಾರಕ್ಕೆ ಬಹಮತ ಇಲ್ಲ ಎಂದು ತಮ್ಮನ್ನು ಭೇಟಿಯಾದ ಸುದ್ದಿಗಾರರಿಗೆ ತಿಳಿಸಿದರು.

ಆಕಾಶದಲ್ಲಿ ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ ಈ ತಿಂಗಳ ಕೊನೆಯ ವಾರದಲ್ಲಿ ಬಿಜೆಪಿ ಪಕ್ಷ ವು ಅಧಿಕಾರಕ್ಕೆ ಬಂದು ಯಡಿಯೂರಪ್ಪನವರು ಮುಖ್ಯಮಂತ್ರಿಯಾಗುವುದು ಅಷ್ಟೇ ಸತ್ಯ ಎಂದು ಭವಿಷ್ಯ ನುಡಿದರು.

ಸಂವಿಧಾನದ ಪ್ರಕಾರ ರಾಜ್ಯಪಾಲರು ಬಹುಮತ ಇರುವ ಪಕ್ಷ ವನ್ನು ಸರಕಾರ ರಚನೆಗೆ ಆಹ್ವಾನಿಸಿದರೆ ಸರಕಾರ ರಚನೆಗೆ ಸಿದ್ಧ ಇರುವುದಾಗಿ ಹೇಳಿದ ಚಿಂಚನಸೂರ, ಶಾಸಕರ ರಾಜೀನಾಮೆ ಹಿಂದೆ ಬಿಜೆಪಿಯ ಪಾತ್ರವಿಲ್ಲ. ಯಾವುದೇ ರೀತಿಯ ಆಪರೇಷನ್‌ ಕಮಲ ನಡೆಸಿಲ್ಲ ಎಂದು ಹೇಳಿದರು.

ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಶಾಸಕರು ಸ್ವಇಚ್ಛೆಯಿಂದ ಸ್ಪೀಕರ್‌ ಬಳಿ ತೆರಳಿ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಸುಮ್ಮನೆ ಬಿಜೆಪಿ ಕೈವಾಡ ಇದೆ ಎಂದು ಹೇಳಿ ಜನರ ದಾರಿತಪ್ಪಿಸುವ ಕೆಲಸವನ್ನು ಬಿಜೆಪಿ ಹಾಗೂ ಕಾಂಗ್ರೆಸ್‌ ನಾಯಕರು ಮಾಡುತ್ತಿದ್ದಾರೆ ಎಂದು ಹೇಳಿದರು.

ಸುರಪುರ ಶಾಸಕ ರಾಜೂಗೌಡ ಅವರು ಮಾಜಿ ಮಂತ್ರಿಗಳಾಗಿದ್ದವರು, ಅಲ್ಲದೆ ಈ ಭಾಗದ ಬಿಜೆಪಿಯ ಪ್ರಭಾವಿ ನಾಯಕರಾಗಿದ್ದಾರೆ. ಅವರು ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ. ಸುಖಾ ಸುಮ್ಮನೆ ಗಾಳಿ ಸುದ್ದಿಗಳನ್ನು ಹರಡಿಸಲಾಗುತ್ತಿದೆ. ರಾಜ್ಯದ ಜನತೆ ಸುಳ್ಳು ವದಂತಿಗಳಿಗೆ ಕಿವಿ ಕೊಡಬಾರದು ಎಂದು ಮನವಿ ಮಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ