ಆ್ಯಪ್ನಗರ

ಸಿಎಂ, ಪರಂ ಮಧ್ಯೆ ಭಿನ್ನಾಭಿಪ್ರಾಯವಿಲ್ಲ: ವೇಣುಗೋಪಾಲ್‌

ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ನಡುವೆ ಯಾವುದೇ ಭಿನ್ನಮತ, ಅಸಮಾಧಾನ ಇಲ್ಲ. ಉತ್ತಮ ಸಂಬಂಧ ಅವರಿಬ್ಬರ ನಡುವೆ ಇದೆ. ಇಬ್ಬರು ಸೇರಿ ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ. ಸಿ. ವೇಣುಗೋಪಾಲ ಹೇಳಿದ್ದಾರೆ.

Vijaya Karnataka Web 16 Sep 2017, 3:53 pm
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ನಡುವೆ ಯಾವುದೇ ಭಿನ್ನಮತ, ಅಸಮಾಧಾನ ಇಲ್ಲ. ಉತ್ತಮ ಸಂಬಂಧ ಅವರಿಬ್ಬರ ನಡುವೆ ಇದೆ. ಇಬ್ಬರು ಸೇರಿ ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ. ಸಿ. ವೇಣುಗೋಪಾಲ ಹೇಳಿದ್ದಾರೆ.
Vijaya Karnataka Web no difference between cm and parameshwara
ಸಿಎಂ, ಪರಂ ಮಧ್ಯೆ ಭಿನ್ನಾಭಿಪ್ರಾಯವಿಲ್ಲ: ವೇಣುಗೋಪಾಲ್‌


ಅವರಿಬ್ಬರ ಮಧ್ಯೆ ಅಸಮಾಧಾನ ಇದೆ ಅನ್ನುವುದೆಲ್ಲ ಸುಳ್ಳು. ಇಬ್ಬರ ನಡುವೆ ಉತ್ತಮ ಸಂಬಂಧವಿದೆ. ರಾಜ್ಯದಲ್ಲಿ ಕಾನೂನು ಸುವವ್ಯಸ್ಥೆ ಉತ್ತಮವಾಗಿದೆ. ಕಾನೂ‌ನು ಸುವವ್ಯಸ್ಥೆ ಹಾಳು ಮಾಡುವವರು ಬಿಜೆಪಿಯವರು. ಗೌರಿ ಲಂಕೇಶ್‌ ಅವರ ಅಂತ್ಯ ಸಂಸ್ಕಾರಕ್ಕೂ ಬಾರದೆ ಅವರಿಗೆ ಅಂತಿಮ ಗೌರವ ಸಲ್ಲಿಸದವರು ಬಿಜೆಪಿಯವರು. ಗೌರಿ ಹತ್ಯೆಯ ಹಿಂದೆ ಯಾರಿದ್ದಾರೆ ಅನ್ನುವುದು ಕೆಲವೇ ದಿನಗಳಲ್ಲಿ ಗೊತ್ತಾಗುತ್ತದೆ. ಗೌರಿ ಲಂಕೇಶ್‌ ಅವರ ಪ್ರಕರಣದ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿ ಮುಖಂಡರಿಗಿಲ್ಲ ಎಂದರು.

ನಮ್ಮಿಬ್ಬರ ಮಧ್ಯೆ ಅಸಮಾಧಾನ ಇಲ್ಲವೆಂದ ಪರಮೇಶ್ವರ್‌ ಸಿಎಂ ಹಾಗೂ ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಅಥವಾ ಯಾವುದೇ ಅಸಮಾಧಾನ ಇಲ್ಲ. ಒಂದೆರಡು ದಿನದ ಹಿಂದೆ ನಾನೇ ಸಿಎಂ ಮನೆಗೆ ಹೋಗಿದ್ದು, ಗಂಟೆಗಳ ಕಾಲ ಪಕ್ಷ ಹಾಗೂ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಅವರು ನಮ್ಮನೆಗೆ ಬರದೇ ಇರಬಹುದು. ನಾನು ಹೋಗಿ ಮಾತಾಡಿದ್ದೇನೆ. ಇಬ್ಬರು ಸೇರಿಯೇ ಪಕ್ಷವನ್ನು ಚುನಾವಣೆಗೆ ಸನ್ನದ್ಧಗೊಳಿಸುತ್ತಿದ್ದೇವೆ. ನಮ್ಮಿಬ್ಬರ ನಡುವೆ ಭಿನ್ನಮತ ಇದೆ ಅನ್ನುವುದು ಸುಳ್ಳು. ಬೆಳಗಾವಿ ಕಾರ್ಯಕ್ರಮಕ್ಕೆ ನನಗೆ ಹೋಗಲು ಆಗಲಿಲ್ಲ ಎಂದರು.

ಸಿಎಂ ಸರಕಾರಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ದಿಲ್ಲಿಗೆ ತೆರಳಿದ್ದಾರೆ. ಅಲ್ಲಿಗೆ ಹೋದ ಮೇಲೆ ಹೈಕಮಾಂಡ್ ಅನ್ನು ಭೇಟಿ ಮಾಡಿದರೆ ತಪ್ಪೇನಿದೆ. ನಾನು ಒಬ್ಬನೇ ಸಾಕಷ್ಟು ಬಾರಿ ಹೈಕಮಾಂಡ್ ಭೇಟಿ ಮಾಡಿದ್ದೇನೆ. ಅದರಲ್ಲಿ ತಪ್ಪೇನಿಲ್ಲ ಎಂದು ಹೇಳಿದರು.

ಜಾರ್ಜ್ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹೋರಾಟದ ವಿಚಾರಕ್ಕೆ ಪ್ರತಿಕ್ರಿಯಿಸಿ, ಸಿಐಡಿ ತನಿಖೆ ಪ್ರಕಾರ ಜಾರ್ಜ್ ನಡೆದುಕೊಳ್ಳುತ್ತಿದ್ದಾರೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಚುನಾವಣಾ ದೃಷ್ಟಿಯಿಂದ ಬಿಜೆಪಿ ಹೋರಾಟ ಮಾರಡುತ್ತಿದೆ. ಬಿಜೆಪಿ ಹೋರಾಟದ ಹಿಂದೆ ರಾಜಕೀಯ ಉದ್ದೇಶ ಬಿಟ್ಟು ಯಾವುದೇ ಬೇರೆ ಉದ್ದೇಶವಿಲ್ಲ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ