ಆ್ಯಪ್ನಗರ

​ಬೆನ್ ಸ್ಟೋಕ್ಸ್ ಅವಿಶ್ವಸನೀಯ ಕ್ಯಾಚ್

ಏಕದಿನ ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ದ ನಡೆದ ಉದ್ಘಾಟನಾ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್‌ನ ಆಲ್‌ರೌಂಡರ್ ಆಟಗಾರ ಬೆನ್ ಸ್ಟೋಕ್ಸ್ ಅದ್ಭುತ ಕ್ಯಾಚ್ ಹಿಡಿಯುವ ಮೂಲಕ ಗಮನ ಸೆಳೆದಿದ್ದಾರೆ.

Vijaya Karnataka Web 30 May 2019, 9:57 pm
ಲಂಡನ್: ಐಸಿಸಿ 2019 ಏಕದಿನ ವಿಶ್ವಕಪ್ ಉದ್ಘಾಟನಾ ಪಂದ್ಯದಲ್ಲೇ ಅದ್ಭುತ ಕ್ಯಾಚ್ ಹಿಡಿಯುವ ಮೂಲಕ ಇಂಗ್ಲೆಂಡ್‌ನ ಆಲ್‌ರೌಂಡರ್ ಬೆನ್ ಸ್ಟೋಕ್ಸ್ ಗಮನ ಸೆಳೆದಿದ್ದಾರೆ.
Vijaya Karnataka Web ben-stokes-01


ಗುರುವಾರದಂದು ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ನಲ್ಲಿ ಮಿಂಚಿದ ಸ್ಟೋಕ್ಸ್ ಬಳಿಕ ಫೀಲ್ಡಿಂಗ್‌ನಲ್ಲೂ ಜಾದೂ ಮೆರೆದರು.

ಇತ್ತೀಚೆಗಷ್ಟೇ ಐಪಿಎಲ್‌ನಲ್ಲಿ ಅದ್ಭುತ ನಿರ್ವಹಣೆ ನೀಡಿರುವ ಸ್ಟೋಕ್ಸ್, ಆತಿಥೇಯ ಇಂಗ್ಲೆಂಡ್ ಪರವೂ ಶ್ರೇಷ್ಠ ಪ್ರದರ್ಶನವನ್ನು ಮುಂದುವರಿಸಿದರು.

ಆದಿಲ್ ರಶೀದ್ ದಾಳಿಯಲ್ಲಿ ಆ್ಯಂಡಿಲ್ ಪೆಹ್ಲುಕಾಯೊ ಹೊಡೆತ ಚೆಂಡನ್ನು ಬೌಂಡರಿ ಗೆರೆ ಬಳಿ ತಮ್ಮ ಹಿಂದಕ್ಕೆ ಡೈವ್ ಹೊಡೆಯುವ ಮೂಲಕ ಸ್ಟೋಕ್ಸ್ ಅತ್ಯದ್ಭುತ ಕ್ಯಾಚ್ ಹಿಡಿದರು.

ಈ ಮೊದಲು ಬ್ಯಾಟಿಂಗ್‌ನಲ್ಲಿ ಮಿಂಚಿದ ಸ್ಟೋಕ್ಸ್ ಇಂಗ್ಲೆಂಡ್ ಪರ ಗರಿಷ್ಠ ರನ್ ಗಳಿಸಿದ್ದರು. 79 ಎಸೆತಗಳನ್ನು ಎದುರಿಸಿದ ಸ್ಟೋಕ್ಸ್ ಒಂಬತ್ತು ಬೌಂಡರಿಗಳಿಂದ 89 ರನ್ ಗಳಿಸಿದರು. ಈ ಮೂಲಕ ಇಂಗ್ಲೆಂಡ್ 311 ರನ್‌ಗಳ ಬೃಹತ್ ಮೊತ್ತ ಪೇರಿಸಲು ನೆರವಾದರು.
https://twitter.com/josh12marley/status/1134130644714512384

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌