ಆ್ಯಪ್ನಗರ

ಧೋನಿ, ಜಾಧವ್ ಆಡಲು ಯತ್ನಿಸಿದರೂ ಸಾಧ್ಯವಾಗಿಲ್ಲ: ರೋಹಿತ್ ಶರ್ಮಾ

ಕೊನೆಯ ಐದು ಓವರ್‌ನಲ್ಲಿ ಭಾರತ ಎಡವಿದ್ದು, ಇಂಗ್ಲೆಂಡ್ ವಿರುದ್ಧ 31 ರನ್‌ ಸೋಲು ಅನುಭವಿಸುವಂತಾಯಿತು. ಹೀಗಾಗಿ ಪ್ರಸಕ್ತ ಟೂರ್ನಿಯಲ್ಲಿ ಭಾರತದ ಗೆಲುವಿನ ಓಟಕ್ಕೆ ಇಂಗ್ಲೆಂಡ್ ತಡೆಯೊಡ್ಡಿತು.

TIMESOFINDIA.COM 1 Jul 2019, 5:55 pm
ಬರ್ಮಿಂಗ್‌ಹ್ಯಾಂ: ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಗೆಲುವಿನ ಓಟಕ್ಕೆ ಇಂಗ್ಲೆಂಡ್ ಬ್ರೇಕ್ ಹಾಕಿದ್ದು, ಭಾನುವಾರದ ಪಂದ್ಯದಲ್ಲಿ ಟೀಂ ಇಂಡಿಯಾ 31 ರನ್ ಸೋಲು ಅನುಭವಿಸಿದೆ.
Vijaya Karnataka Web MSD


ಕೊನೆಯ ಐದು ಓವರ್‌ನಲ್ಲಿ ತಂಡದ ಗೆಲುವಿಗೆ 71 ರನ್ ಅಗತ್ಯವಾಗಿದ್ದರೂ, ಮಹೇಂದ್ರ ಸಿಂಗ್ ಧೋನಿ ಮತ್ತು ಕೇದಾರ್ ಜಾಧವ್, ಜತೆಯಾಗಿ 40 ರನ್ ಗಳಿಸಲಷ್ಟೇ ಶಕ್ತವಾಗಿದ್ದರು. ಅವರು ಆಡಲು ಯತ್ನಿಸಿದರೂ, ಅದು ಸಾಧ್ಯವಾಗಿಲ್ಲ ಎಂದು ಟೀಂ ಇಂಡಿಯಾದ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಅಭಿಪ್ರಾಯಪಟ್ಟಿದ್ದಾರೆ.

ರೋಹಿತ್ ಶರ್ಮಾ, ಪ್ರಸಕ್ತ ಟೂರ್ನಿಯಲ್ಲಿ ಮೂರು ಸೆಂಚುರಿ ಬಾರಿಸಿದ್ದು, ಭಾನುವಾರ ಇಂಗ್ಲೆಂಡ್ ವಿರುದ್ಧ 102 ರನ್ ಗಳಿಸಿದ್ದಾರೆ. ಇಂಗ್ಲೆಂಡ್ ಅತ್ಯಂತ ಪರಿಣಾಮಕಾರಿ ಬೌಲಿಂಗ್ ದಾಳಿ ನಡೆಸುವ ಮೂಲಕ ಭಾರತ ತಂಡವನ್ನು ಕಟ್ಟಿಹಾಕಿತು ಎಂದು ಶರ್ಮಾ ಅಭಿಪ್ರಾಯಪಟ್ಟಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌