ಆ್ಯಪ್ನಗರ

ವಿಶ್ವಕಪ್ ವೇಳೆ ಭಾರತ ವಿರೋಧಿ ಬ್ಯಾನರ್, ಟಿ-ಶರ್ಟ್ ಧರಿಸಿದ ನಾಲ್ವರು ಸಿಖ್ ಪ್ರತ್ಯೇಕತಾವಾದಿಗಳ ಬಂಧನ!

ಏಕದಿನ ವಿಶ್ವಕಪ್‌ನಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಮೊದಲ ಸೆಮಿಫೈನಲ್ ಪಂದ್ಯದ ವೇಳೆ ಖಾಲಿಸ್ತಾನ ಪ್ರತ್ಯೇಕ ರಾಷ್ಟ್ರಕ್ಕಾಗಿ ಭಾರತ ವಿರೋಧಿ ಬ್ಯಾನರ್ ಹಾಗೂ ಟೀ ಶರ್ಟ್ ಧರಿಸಿದ ನಾಲ್ವರು ಸಿಖ್ ಪ್ರತ್ಯೇಕತಾವಾದಿಗಳನ್ನು ಸ್ಟೇಡಿಯಂನಿಂದ ತೆರವುಗೊಳಿಸಿ ಪೊಲೀಸರಿಗೆ ಹಸ್ತಾಂತರಿಸಿರುವ ಘಟನೆ ನಡೆದಿದೆ.

Vijaya Karnataka Web 10 Jul 2019, 2:16 pm
ಮ್ಯಾಂಚೆಸ್ಟರ್: ಕೆಲವು ದಿನಗಳ ಹಿಂದೆಯಷ್ಟೇ ಏಕದಿನ ವಿಶ್ವಕಪ್‌ನಲ್ಲಿ ಶ್ರೀಲಂಕಾ ವಿರುದ್ಧ ಪಂದ್ಯದ ವೇಳೆ ಕಾಶ್ಮೀರ ವಿರೋಧಿ ಬ್ಯಾನರ್ ಅಂಟಿಸಿದ ವಿಮಾನವೊಂದು ಸ್ಟೇಡಿಯಂ ಮೇಲಿಂದ ಹಾರಾಡಿತ್ತು. ಇದು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತಲ್ಲದೆ ಬಿಸಿಸಿಐ ತನ್ನ ಪ್ರತಿಭಟನೆಯನ್ನು ವ್ಯಕ್ತಪಡಿಸಿತ್ತು.
Vijaya Karnataka Web khalistan


ಪರಿಣಾಮ ನ್ಯೂಜಿಲೆಂಡ್ ವಿರುದ್ಧ ಸೆಮಿಫೈನಲ್‌ ನಡೆಯುತ್ತಿರುವ ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ಸ್ಟೇಡಿಯಂ ಮೇಲಿಂದ ವಿಮಾನಗಳ ಹಾರಾಟಕ್ಕೆ ನಿಷೇಧ ಹೇರಲಾಗಿತ್ತು.

ಇದಾದ ಬೆನ್ನಲ್ಲೇ ಮಗದೊಂದು ವಿವಾದ ಹುಟ್ಟಿಕೊಂಡಿದೆ. ನ್ಯೂಜಿಲೆಂಡ್ ವಿರುದ್ಧ ಪಂದ್ಯದ ವೇಳೆ ಭಾರತ ವಿರೋಧಿ ಬ್ಯಾನರ್ ಹಾಗೂ ಟಿ-ಶರ್ಟ್ ಧರಿಸಿದ ನಾಲ್ವರು ಸಿಖ್ ಪ್ರತ್ಯೇಕತಾವಾದಿಗಳನ್ನು ಸ್ಟೇಡಿಯಂನಿಂದ ತೆರವುಗೊಳಿಸಿ ಪೊಲೀಸರಿಗೆ ಹಸ್ತಾಂತರಿಸಿರುವ ಘಟನೆ ನಡೆದಿದೆ.

ಖಾಲಿಸ್ತಾನ (ಪಂಜಾಬ್) ಪ್ರತ್ಯೇಕ ರಾಷ್ಟ್ರಕ್ಕಾಗಿ ಸಿಖ್ ಪ್ರತ್ಯೇಕತಾವಾದಿಗಳು ಟೀ-ಶರ್ಟ್ ಧರಿಸಿ ಬ್ಯಾನರ್‌ಗಳನ್ನು ಪ್ರದರ್ಶಿಸಿದ್ದರು. ಅಲ್ಲದೆ ಪ್ರತ್ಯೇಕ ರಾಷ್ಟ್ರಕ್ಕಾಗಿ ಘೋಷಣೆಗಳನ್ನು ಕೂಗುತ್ತಿದ್ದರು.

ಐಸಿಸಿ ನಿಮಯಗಳ ಪ್ರಕಾರ ಅಭಿಮಾನಿಗಳು ಯಾವುದೇ ರಾಜಕೀಯ ಅಥವಾ ಧಾರ್ಮಿಕ ಬ್ಯಾನರ್‌ಗಳನ್ನು ಪ್ರದರ್ಶಿಸುವಂತಿಲ್ಲ. ಬಳಿಕ ಎಚ್ಚೆತ್ತುಕೊಂಡಿರುವ ಭದ್ರತಾ ಸಿಬ್ಬಂದಿಗಳು ನಾಲ್ವರು ಸಿಖ್ ಪ್ರತ್ಯೇಕತಾವಾದಿಗಳನ್ನು ಗ್ಯಾಲರಿಯಿಂದ ತೆರವುಗೊಳಿಸಿ ಪೊಲೀಸರಿಗೆ ಹಸ್ತಾಂತರಿಸಿದರು. ಬಳಿಕ ಸ್ಪಷ್ಟನೆ ನೀಡಿರು ಪೊಲೀಸರು ಇಬ್ಬರನ್ನು ಬಂಧಮುಕ್ತಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಖಾಲಿಸ್ತಾನವು ಹರಿಯಾಣ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಹಾಗೂ ರಾಜಸ್ತಾನ ಸೇರಿದ ಸಿಖ್ ಪ್ರಾಬಲ್ಯ ಪ್ರದೇಶವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌