ಆ್ಯಪ್ನಗರ

ಮೈದಾನದ ಹೊರಗೂ ವಿಶ್ವ ದಾಖಲೆ ಬರೆದ ಕಿಂಗ್ ಕೊಹ್ಲಿ

ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೈದಾನದ ಹೊರಗೂ ದಾಖಲೆಯನ್ನು ಬರೆದಿದ್ದು, ಟ್ವಿಟರ್‌ನಲ್ಲಿ 3 ಕೋಟಿ ಅನುಯಾಯಿಗಳನ್ನು ಪಡೆದಿದ್ದಾರೆ. ಈ ಮೂಲಕ ಅನುಯಾಯಿಗಳ ಪ್ರೀತಿಗೆ ಕೊಹ್ಲಿ ಧನ್ಯವಾದ ಸಲ್ಲಿಸಿದ್ದಾರೆ.

Vijaya Karnataka Web 20 Jun 2019, 3:53 pm
ಹೊಸದಿಲ್ಲಿ: ಟೀಮ್ ಇಂಡಿಯಾ ಕಪ್ತಾನ ವಿರಾಟ್ ಕೊಹ್ಲಿ ಬ್ಯಾಟ್ ಹಿಡಿದು ಮೈದಾನಕ್ಕಿಳಿದಾಗ ಪ್ರತಿ ಬಾರಿಯೂ ದಾಖಲೆಗಳ ಮೇಲೆ ದಾಖಲೆಗಳನ್ನು ಬರೆಯುತ್ತಲೇ ಸಾಗುತ್ತಿದ್ದಾರೆ.
Vijaya Karnataka Web virat-kohli-06


ಪ್ರಸ್ತುತ ಐಸಿಸಿ 2019 ಏಕದಿನ ವಿಶ್ವಕಪ್‌ನಲ್ಲಿ ಕಿಂಗ್ ಕೊಹ್ಲಿ, ಅತಿ ವೇಗದಲ್ಲಿ 11000 ರನ್ ಮೈಲುಗಲ್ಲು ತಲುಪಿದ ದಾಖಲೆಗೆ ಪಾತ್ರವಾಗಿದ್ದರು.

ಇದೀಗ ಮೈದಾನದ ಹೊರಗೂ ವಿರಾಟ್ ಕೊಹ್ಲಿ ವಿಶ್ವದಾಖಲೆಯೊಂದನ್ನು ಬರೆದಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ 3 ಕೋಟಿ ಅನುಯಾಯಿಗಳನ್ನು ಹೊಂದಿದ್ದಾರೆ.

ಈ ಸಂತಸದ ಸುದ್ದಿಯನ್ನು ಸ್ವತ: ವಿರಾಟ್ ಅವರೇ ವಿಶಿಷ್ಟ ಶೈಲಿಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಎಲ್ಲರ ಬೆಂಬಲ ಹಾಗೂ ಪ್ರೀತಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ಅಂದ ಹಾಗೆ ಫೇಸುಬುಕ್, ಟ್ವಿಟರ್ ಹಾಗೂ ಇನ್‌ಸ್ಟಾಗ್ರಾಂ ಖಾತೆಗಳಲ್ಲಾಗಿ ವಿರಾಟ್ 10 ಕೋಟಿಗೂ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದಾರೆ. ಅಲ್ಲದೆ ದೇಶದಲ್ಲಿ ಅತಿ ಹೆಚ್ಚು ಅನುಯಾಯಿಗಳನ್ನು ಹೊಂದಿರುವ ಕ್ರೀಡಾಪಟು ಎಂಬ ಹಿರಿಮೆಗೆ ಪಾತ್ರವಾಗಿದ್ದಾರೆ. ಕೊಹ್ಲಿ ಹಿಂದಿರುವ ಮಾಜಿ ಕ್ರಿಕೆಟ್ ಐಕಾನ್ ಸಚಿನ್ ತೆಂಡೂಲ್ಕರ್ ಮೂರು ಕೋಟಿ ಅನುಯಾಯಿಗಳನ್ನು ಹೊಂದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌