ಆ್ಯಪ್ನಗರ

ವಿಂಡೀಸ್‌ನ ಆಂಡ್ರೆ ರಸೆಲ್ ವಿಶ್ವಕಪ್‌ನಿಂದ ಹೊರಕ್ಕೆ

ಗಾಯಗೊಂಡಿರುವ ಆಂಡ್ರೆ ರಸೆಲ್ ಶನಿವಾರ ನ್ಯೂಜಿಲೆಂಡ್‌ ವಿರುದ್ಧದ ಪಂದ್ಯದಲ್ಲಿ ಆಡಿರಲಿಲ್ಲ. ಜತೆಗೆ ವಿಶ್ರಾಂತಿ ಪಡೆಯುತ್ತಿದ್ದು, ಗುರುವಾರ ಭಾರತದ ವಿರುದ್ಧದ ಪಂದ್ಯದಲ್ಲಿ ಆಡುವ ನಿರೀಕ್ಷೆಯಿತ್ತು.

Agencies 24 Jun 2019, 9:42 pm
ಲಂಡನ್: ವೆಸ್ಟ್ ಇಂಡೀಸ್ ಆಲ್ ರೌಂಡರ್ ಆಂಡ್ರೆ ರಸೆಲ್ ಗಾಯದ ಸಮಸ್ಯೆಗೆ ತುತ್ತಾಗಿದ್ದು, ಪ್ರಸಕ್ತ ವಿಶ್ವಕಪ್ ಟೂರ್ನಿಯಿಂದ ಹೊರಗುಳಿಯಲಿದ್ದಾರೆ.
Vijaya Karnataka Web Rusel


ಗಾಯಗೊಂಡಿರುವ ಆಂಡ್ರೆ ರಸೆಲ್ ಶನಿವಾರ ನ್ಯೂಜಿಲೆಂಡ್‌ ವಿರುದ್ಧದ ಪಂದ್ಯದಲ್ಲಿ ಆಡಿರಲಿಲ್ಲ. ಜತೆಗೆ ವಿಶ್ರಾಂತಿ ಪಡೆಯುತ್ತಿದ್ದು, ಗುರುವಾರ ಭಾರತದ ವಿರುದ್ಧದ ಪಂದ್ಯದಲ್ಲಿ ಆಡುವ ನಿರೀಕ್ಷೆಯಿತ್ತು.

ಆದರೆ ಮೊಣಕಾಲಿನ ಗಾಯದ ಸಮಸ್ಯೆಯಿಂದ ರಸೆಲ್ ವಿಶ್ವಕಪ್‌ನಿಂದ ಹೊರಗುಳಿಯಬೇಕಾಗಿದೆ. ರಸೆಲ್ ಬದಲು ಸುನಿಲ್ ಅಂಬ್ರಿಸ್ ವೆಸ್ಟ್ ಇಂಡೀಸ್ ಪರ ಆಡುವ ಸಾಧ್ಯತೆಯಿದೆ.

ರಸೆಲ್ ಈ ಟೂರ್ನಿಯಲ್ಲಿ ಗಾಯದ ಸಮಸ್ಯೆ ಎದುರಿಸಿದ್ದು, ಕೇವಲ ನಾಲ್ಕು ಪಂದ್ಯಗಳನ್ನಷ್ಟೇ ಆಡಿದ್ದಾರೆ.

ಗುರುವಾರ ಭಾರತ ವಿರುದ್ಧದ ಪಂದ್ಯದ ವೇಳೆಗೆ ರಸೆಲ್ ಲಭ್ಯತೆ ಕುರಿತು ಸಂಶಯವಿದ್ದಾಗಲೇ, ರಸೆಲ್ ವಿಶ್ವಕಪ್ ಪ್ರಸಕ್ತ ಸಾಲಿನ ಟೂರ್ನಿಯಿಂದ ಹೊರಗುಳಿಯುವುದು ಖಚಿತವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌