ಆ್ಯಪ್ನಗರ

ಭಾರತ-ವಿಂಡೀಸ್ ಮೊದಲ ಏಕದಿನಕ್ಕೆ ಮಳೆ ಕಾಟ

ಆತಿಥೇಯ ವೆಸ್ಟ್‌ಇಂಡೀಸ್ ಹಾಗೂ ಟೀಮ್ ಇಂಡಿಯಾ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯಕ್ಕೆ ಮಳೆ ಅಡಚಣೆಯನ್ನುಂಟು ಮಾಡಿದೆ. ಇದರ ಪರಿಣಾಮ ಟಾಸ್ ಪ್ರಕ್ರಿಯೆಯು ವಿಳಂಬವಾಗಿದೆ.

Vijaya Karnataka Web 8 Aug 2019, 6:34 pm
ಗಯಾನ: ಪ್ರವಾಸಿ ಭಾರತ ಹಾಗೂ ಆತಿಥೇಯ ವೆಸ್ಟ್‌ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೆ ಮಳೆಯ ಅಡಚಣೆಯುಂಟಾಗಿದೆ.
Vijaya Karnataka Web ind-vs-wi


ಇದರಿಂದಾಗಿ ಟಾಸ್ ವಿಳಂಬವಾಗಿದೆ. ಭಾರತೀಯ ಕಾಲಮಾನದಂತೆ ಟಾಸ್ ಸಂಜೆ 6.30ಕ್ಕೆ ನಡೆಯಬೇಕಿತ್ತು. ಆದರೆ ಮಳೆಯಿಂದಾಗಿ ಪಂದ್ಯಕ್ಕೆ ಅಡ್ಡಿಯಾಗಿದೆ.

ಈ ಮೊದಲು ನಡೆದ ಮೂರು ಪಂದ್ಯಗಳ ಟ್ವೆಂಟಿ-20 ಸರಣಿಯನ್ನು ಟೀಮ್ ಇಂಡಿಯಾ 3-0 ಅಂತರದಲ್ಲಿ ಕ್ಲೀನ್ ಸ್ವೀಪ್‌ಗೈದಿತ್ತು.
ಗಯಾನದಲ್ಲಿ ನಡೆದ ಅಂತಿಮ ಟಿ20 ಪಂದ್ಯಕ್ಕೂ ಮಳೆ ಅಡಚಣೆಯಾಗಿತ್ತು. ಕೊನೆಗೂ ಪಂದ್ಯ ನಡೆದಾಗ ಭಾರತ ಏಳು ವಿಕೆಟ್‌ಗಳ ಅಂತರದ ಗೆಲುವು ದಾಖಲಿಸಿತ್ತು. ಇದೀಗ ಏಕದಿನ ಸರಣಿಯಲ್ಲೂ ಗೆಲುವಿನ ಓಟ ಮುಂದುವರಿಸುವ ಇರಾದೆಯಲ್ಲಿದೆ.

ಟ್ವೆಂಟಿ-20 ತಂಡದಲ್ಲಿದ್ದ ನಾಯಕ ವಿರಾಟ್ ಕೊಹ್ಲಿ, ಉಪನಾಯಕ ರೋಹಿತ್ ಶರ್ಮಾ, ಶಿಖರ್ ಧವನ್, ರಿಷಬ್ ಪಂತ್, ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಕೆಎಲ್ ರಾಹುಲ್, ಮನೀಶ್ ಪಾಂಡೆ, ಖಲೀಲ್ ಅಹ್ಮದ್ ಹಾಗೂ ನವದೀಪ್ ಸೈನಿ ಏಕದಿನ ತಂಡದಲ್ಲೂ ಕಾಣಿಸಿಕೊಂಡಿದ್ದಾರೆ.

ಇವರ ಜತೆಗೆ ಕೇದಾರ್ ಜಾಧವ್, ಕುಲ್‌ದೀಪ್ ಯಾದವ್, ಯುಜ್ವೇಂದ್ರ ಚಹಲ್ ಹಾಗೂ ಮೊಹಮ್ಮದ್ ಶಮಿ ತಂಡವನ್ನು ಸೇರಿಕೊಂಡಿದ್ದಾರೆ. ಈ ಎಲ್ಲ ನಾಲ್ವರು ಆಟಗಾರರು ಮೊದಲ ಪಂದ್ಯದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌