ಆ್ಯಪ್ನಗರ

ಯಾವುದೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಸಜ್ಜಾಗಿದ್ದೇನೆ: ಅಯ್ಯರ್

ವೆಸ್ಟ್‌ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಎರಡನೇ ಪಂದ್ಯಕ್ಕೆ ಅಣಿಯಾಗಿರುವಂತೆಯೇ ಯಾವುದೇ ಕ್ರಮಾಕಂದಲ್ಲೂ ಬ್ಯಾಟಿಂಗ್ ಮಾಡಲು ಸಜ್ಜಾಗಿದ್ದೇನೆ ಎಂದು ಯುವ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ಅಭಿಪ್ರಾಯಪಟ್ಟಿದ್ದಾರೆ.

Vijaya Karnataka Web 11 Aug 2019, 3:00 pm
ಪೋರ್ಟ್‌ ಆಫ್ ಸ್ಪೇನ್: ವೆಸ್ಟ್‌ಇಂಡೀಸ್ ವಿರುದ್ಧ ಸಾಗುತ್ತಿರುವ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾ ನಾಲ್ಕನೇ ಕ್ರಮಾಂಕದಲ್ಲಿ ಕರ್ನಾಟಕದ ಕೆಎಲ್ ರಾಹುಲ್ ಅವರನ್ನು ಕಡೆಗಣಿಸಿ ಯುವ ಭರವಸೆಯ ಶ್ರೇಯಸ್ ಅಯ್ಯರ್‌ಗೆ ಅವಕಾಶ ಕಲ್ಪಿಸಲಾಗಿದೆ.
Vijaya Karnataka Web shreyas-iyer-01


ಮೊದಲು ಪಂದ್ಯ ಮಳೆಯಿಂದಾಗಿ ರದ್ದುಗೊಂಡಿರುವುದರಿಂದ ಮುಂದಿನ ಎರಡು ಪಂದ್ಯಗಳಲ್ಲೂ ನಾಲ್ಕನೇ ಕ್ರಮಾಂಕದಲ್ಲಿ ಶ್ರೇಯಸ್ ಅವರನ್ನೇ ನೆಚ್ಚಿಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಯ್ಯರ್ ತಂಡ ಬಯಸಿದಂತೆ ಯಾವುದೇ ಕ್ರಮಾಕಂದಲ್ಲೂ ಆಡಲು ಸಿದ್ಧವಾಗಿದ್ದೇನೆ ಎಂದಿದ್ದಾರೆ.

ನಮಗೆ ಯಾವುದೇ ಕಲ್ಪನೆಗಳಿಲ್ಲ. ಇವೆಲ್ಲವೂ ಮ್ಯಾನೇಜ್‌ಮೆಂಟ್ ನಿರ್ಧಾರ. ನಾನು ಹೋಗಿ ನನಗೆ ನಾಲ್ಕನೇ ಕ್ರಮಾಂಕದಲ್ಲಿ ಆಡಬೇಕು ಎಂದು ಹೇಳಲು ಸಾಧ್ಯವಿಲ್ಲ. ಆ ಕ್ರಮಾಂಕವನ್ನು ಅವರೇ ನೀಡಿದ್ದಾರೆ ಎಂದು ಅಯ್ಯರ್ ಹೇಳಿದರು.

ಇದೊಂದು ಖಾಲಿ ಜಾಗವಾಗಿದ್ದು, ಖಂಡಿತವಾಗಿಯೂ ಆ ಸ್ಥಾನದಲ್ಲಿ ಆಟಗಾರರಿಗೆ ಅವಕಾಶ ನೀಡಲಿದ್ದಾರೆ. ಸದ್ಯಕ್ಕೆ ಯಾರು ಆ ಸ್ಥಾನಕ್ಕೆ ಯೋಗ್ಯರಾಗಿಲ್ಲ ಎಂದರು.

ವೈಯಕ್ತಿಕವಾಗಿ ನಾಲ್ಕನೇ ಕ್ರಮಾಂಕದಲ್ಲೇ ಆಡಬೇಕೆಂದು ಯೋಚಿಸುತ್ತಿಲ್ಲ. ಯಾವುದೇ ಪರಿಸ್ಥಿತಿಯಲ್ಲೂ ಯಾವ ಕ್ರಮಾಂಕದಲ್ಲಾದರೂ ಆಡಲು ಸಜ್ಜಾಗಿರಬೇಕೆಂದು ನನ್ನ ಗುರಿಯಾಗಿದೆ. ಆ ಮೂಲಕ ಅವಕಾಶವನ್ನು ಸದುಪಯೋಗಪಡಿಸಬೇಕು ಎಂದು ಸೇರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌