ಆ್ಯಪ್ನಗರ

ಮೈದಾನದಲ್ಲಿ ಆಕರ್ಷಕ ಅರ್ಧಶತಕ; ಮೈದಾನದ ಹೊರಗೂ ಅಭಿಮಾನಿಗಳ ಹೃದಯ ಗೆದ್ದ ವಿರಾಟ್ ಕೊಹ್ಲಿ

ವೆಸ್ಟ್‌ಇಂಡೀಸ್ ವಿರುದ್ಧ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ದಿನದಲ್ಲಿ ಆಕರ್ಷಕ ಅರ್ಧಶತಕ ಬಾರಿಸಿರುವ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಬಳಿಕ ಅಭಿಮಾನಿಗಳಿಗೆ ಆಟೋಗ್ರಾಫ್ ನೀಡುವ ಮೂಲಕ ಹೃದಯ ಗೆದ್ದಿದ್ದಾರೆ.

Vijaya Karnataka Web 31 Aug 2019, 2:54 pm
ಕಿಂಗ್‌ಸ್ಟನ್: ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ದಾಖಲೆಗಳ ಮೇಲೆ ದಾಖಲೆಗಳನ್ನು ಬರೆಯುತ್ತಲೇ ಸಾಗುತ್ತಿರುವ ರನ್ ಮೆಶಿನ್ ಖ್ಯಾತಿಯ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಮಗದೊಮ್ಮೆ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ.
Vijaya Karnataka Web virat-kohli-vs-wi-01


ವೆಸ್ಟ್‌ಇಂಡೀಸ್ ವಿರುದ್ಧ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಕ್ಯಾಪ್ಟನ್ ಕೊಹ್ಲಿ ಆಕರ್ಷಕ ಅರ್ಧಶತಕ ಬಾರಿಸಿದ್ದರು. ಬಳಿಕ ಪಂದ್ಯದ ಬಳಿಕ ಅಭಿಮಾನಿಗಳಿಗೆ ಆಟೋಗ್ರಾಫ್ ಹಂಚಿಕೊಳ್ಳುವ ಮೂಲಕ ಪ್ರೀತಿಗೆ ಪಾತ್ರವಾಗಿದ್ದಾರೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ತನ್ನ ಅಧಿಕೃತ ಟ್ವಿಟರ್ ಪುಟದಲ್ಲಿ ವೀಡಿಯೋವನ್ನು ಹಂಚಿಕೊಂಡಿದೆ.

ಈ ಮೊದಲು ಮಯಾಂಕ್ ಅಗರ್ವಾಲ್ ಜತೆಗೆ ನಿರ್ಣಾಯಕ ಇನ್ನಿಂಗ್ಸ್ ಕಟ್ಟಿದ ವಿರಾಟ್ ಕೊಹ್ಲಿ ಮತ್ತೊಮ್ಮೆ ನಾಯಕನ ಇನ್ನಿಂಗ್ಸ್ ಕಟ್ಟಿದ್ದರು. ಅಲ್ಲದೆ ಟೆಸ್ಟ್ ಕ್ರಿಕೆಟ್‌ನಲ್ಲಿ 21ನೇ ಅರ್ಧಶತಕ ಸಾಧನೆ ಮಾಡಿದ್ದರು.

ಮೊದಲ ಟೆಸ್ಟ್‌ನಲ್ಲೂ ಫಿಫ್ಟಿ ಸಾಧನೆ ಮಾಡಿರುವ ವಿರಾಟ್, ಜಮೈಕಾದಲ್ಲೂ 76 ರನ್‌ಗಳ ಅಮೂಲ್ಯ ಇನ್ನಿಂಗ್ಸ್ ಕಟ್ಟಿದ್ದರು. ಈ ಮೂಲಕ ಟೀಮ್ ಇಂಡಿಯಾ ಮೊದಲ ದಿನದಾಟದಲ್ಲಿ ಐದು ವಿಕೆಟ್ ನಷ್ಟಕ್ಕೆ 264 ರನ್‌ಗಳ ಸ್ಪರ್ಧಾತ್ಮಕ ಮೊತ್ತ ಪೇರಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌