ಆ್ಯಪ್ನಗರ

ಮಗದೊಂದು ದಾಖಲೆಯ ಸನಿಹದಲ್ಲಿ ಸಿಕ್ಸರ್‌ಗಳ ಸರದಾರ ಗೇಲ್

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳ ಸರದಾರನಾಗಿರುವ ವೆಸ್ಟ್‌ಇಂಡೀಸ್‌ನ ಕ್ರಿಸ್ ಗೇಲ್, ಮಗದೊಂದು ದಾಖಲೆಯ ಸನಿಹದಲ್ಲಿದ್ದಾರೆ. ಐಪಿಎಲ್‌ನಲ್ಲಿ 300 ಸಿಕ್ಸರ್‌ಗಳನ್ನು ಸಿಡಿಸಿದ ಮೊದಲ ಬ್ಯಾಟ್ಸ್‌ಮನ್ ಎಂದೆನಿಸಿಕೊಳ್ಳಲು ನಾಲ್ಕು ಸಿಕ್ಸರ್‌ಗಳ ಅಗತ್ಯವಿದೆ.

Vijaya Karnataka Web 27 Mar 2019, 3:21 pm
ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಚಾಂಪಿಯನ್‌ಶಿಪ್‌ನಲ್ಲಿ ಅತ್ಯಂತ ಜನಪ್ರಿಯ ಆಟಗಾರನಾಗಿರುವ ಕ್ರಿಸ್ ಗೇಲ್ ಮಗದೊಂದು ದಾಖಲೆಯ ಸನಿಹದಲ್ಲಿದ್ದಾರೆ.
Vijaya Karnataka Web chris-gayle-01


ಕಳೆದ ವರ್ಷ ಕಿಂಗ್ಸ್ ಇವೆಲೆನ್ ಪಂಜಾಬ್ ತಂಡವನ್ನು ಸೇರಿಕೊಂಡಿರುವ ಗೇಲ್, ಅಮೋಘ ಫಾರ್ಮ್ ಮುಂದುವರಿಸಿದ್ದಾರೆ. ಪ್ರಸಕ್ತ ಸಾಲಿನ ಮೊದಲ ಪಂದ್ಯದಲ್ಲೂ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರವಾಗಿದ್ದಾರೆ.

ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಅತಿ ವೇಗದಲ್ಲಿ 4000 ಐಪಿಎಲ್ ರನ್‌ಗಳ ದಾಖಲೆಯನ್ನು ಬರೆದಿರುವ ಗೇಲ್ ಇದೀಗ 300 ಸಿಕ್ಸರ್‌ಗಳ ದಾಖಲೆಯನ್ನು ಬರೆಯುವ ತವಕದಲ್ಲಿದ್ದಾರೆ.

ಐಪಿಎಲ್‌ನಲ್ಲಿ 300 ಸಿಕ್ಸರ್ ಸಿಡಿಸಿದ ಮೊದಲ ಬ್ಯಾಟ್ಸ್‌ಮನ್ ಎಂದೆನಿಸಿಕೊಳ್ಳಲು ಗೇಲ್‌ಗಿನ್ನು ನಾಲ್ಕು ಸಿಕ್ಸರ್‌ಗಳಷ್ಟೇ ಬೇಕಿದೆ. ಇಲ್ಲಿ ಆಸಕ್ತಿದಾಯಕ ಸಂಗತಿಯೆಂದರೆ ಐಪಿಎಲ್ 100 ಹಾಗೂ 200 ಸಿಕ್ಸರ್‌ಗಳನ್ನು ಸಿಡಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಗೌರವಕ್ಕೂ ಗೇಲ್ ಪಾತ್ರವಾಗಿದ್ದರು.

ರಾಜಸ್ಥಾನ್ ವಿರುದ್ಧ ನಡೆದ ಮೊದಲ ಪಂದ್ಯದಲ್ಲಿ ಗೇಲ್ ಕೇವಲ 47 ಎಸೆತಗಳಲ್ಲಿ 79 ರನ್ ಗಳಿಸಿದ್ದರು. ಅಂತಾರಾಷ್ಟ್ರೀಯ ಪಂದ್ಯದಲ್ಲೂ ಅಮೋಘ ಫಾರ್ಮ್ ಮುಂದುವರಿಸಿರುವ ಗೇಲ್ ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿಯಲ್ಲಿ 424 ರನ್ ಕಲೆ ಹಾಕಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌