ಆ್ಯಪ್ನಗರ

ಚೆನ್ನೈ ಸೂಪರ್; ಪ್ಲೇ-ಆಫ್ ಪ್ರವೇಶಿಸಿದ ಮೊದಲ ತಂಡ

ಶನಿವಾರ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಏಳು ವಿಕೆಟ್ ಅಂತರದ ಗೆಲುವು ದಾಖಲಿಸುವುದರೊಂದಿಗೆ ಇಂಡಿಯನ್ ಪ್ರೀಮಿಯರ್ ಲೀಗ್ 12ನೇ ಆವೃತ್ತಿಯ ಟ್ವೆಂಟಿ-20 ಕ್ರಿಕೆಟ್ ಚಾಂಪಿಯನ್‌ಶಿಪ್‌ನಲ್ಲಿ ಪ್ಲೇ-ಆಫ್ ಹಂತವನ್ನು ಪ್ರವೇಶಿಸಿದ ಮೊದಲ ತಂಡವೆಂಬ ಹೆಗ್ಗಳಿಕೆಗೆ ಚೆನ್ನೈ ಸೂಪರ್ ಕಿಂಗ್ಸ್ ಪಾತ್ರವಾಗಿದೆ.

Vijaya Karnataka Web 28 Apr 2019, 2:55 pm
ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 12ನೇ ಆವೃತ್ತಿಯ ಟ್ವೆಂಟಿ-20 ಕ್ರಿಕೆಟ್ ಚಾಂಪಿಯನ್‌ಶಿಪ್‌ನಲ್ಲಿ ಪ್ಲೇ-ಆಫ್ ಹಂತವನ್ನು ಪ್ರವೇಶಿಸಿದ ಮೊದಲ ತಂಡವೆಂಬ ಹೆಗ್ಗಳಿಕೆಗೆ ಚೆನ್ನೈ ಸೂಪರ್ ಕಿಂಗ್ಸ್ ಪಾತ್ರವಾಗಿದೆ.
Vijaya Karnataka Web mitchell-santner-csk


ಶನಿವಾರ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಏಳು ವಿಕೆಟ್ ಅಂತರದ ಗೆಲುವು ದಾಖಲಿಸುವುದರೊಂದಿಗೆ ಚೆನ್ನೈ ತನ್ನ ಸ್ಥಾನವನ್ನು ಅಧಿಕೃತವಾಗಿ ಖಚಿತಪಡಿಸಿಕೊಂಡಿತು.

ಮೂರು ಬಾರಿಯ ಚಾಂಪಿಯನ್ ಚೆನ್ನೈ, ಇದೀಗ ಮಗದೊಂದು ಕಿರೀಟವನ್ನು ಎದುರು ನೋಡುತ್ತಿದೆ. ಅಂಕಪಟ್ಟಿಯಲ್ಲಿ ಅಗ್ರ ಎರಡು ಸ್ಥಾನಗಳನ್ನು ಕಾಯ್ದುಕೊಂಡರೆ ಫೈನಲ್ ಪ್ರವೇಶಿಸಲು ಎರಡು ಅವಕಾಶಗಳನ್ನು ಪಡೆಯಲಿದೆ ಎಂಬುದು ಅಷ್ಟೇ ಮುಖ್ಯವೆನಿಸುತ್ತದೆ.

ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಎರಡು ವರ್ಷಗಳ ನಿಷೇಧವನ್ನು ಎದುರಿಸುವುದರನ್ನು ಬಿಟ್ಟರೆ ಐಪಿಎಲ್‌ನಲ್ಲಿ ಆಡಿರುವ ಪ್ರತಿಯೊಂದು ಆವೃತ್ತಿಯಲ್ಲಿ ಪ್ಲೇ-ಆಫ್ ಅಥವಾ ಸೆಮಿಫೈನಲ್ ಹಂತವನ್ನು ಪ್ರವೇಶಿಸಿದ ದಾಖಲೆಗೆ ಚೆನ್ನೈ ಪಾತ್ರವಾಗಿದೆ. ಇದುವೇ ಧೋನಿ ನಾಯಕತ್ವಕ್ಕೆ ಕೈಗನ್ನಡಿಯಾಗಿದೆ.

ಐಪಿಎಲ್‌ನಲ್ಲಿ ಚೆನ್ನೈ ಸಾಧನೆಗಳು:
2008: ರನ್ನರ್ ಅಪ್
2009: ಸೆಮಿಫೈನಲ್
2010: ಚಾಂಪಿಯನ್
2011: ಚಾಂಪಿಯನ್
2012: ರನ್ನರ್ ಅಪ್
2013: ರನ್ನರ್ ಅಪ್
2014: ಮೂರನೇ ಸ್ಥಾನ
2015: ರನ್ನರ್ ಅಪ್
2016 & 2017: ನಿಷೇಧಕ್ಕೊಳಗಾಗಿತ್ತು.
2018: ಚಾಂಪಿಯನ್

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌