ಆ್ಯಪ್ನಗರ

ಸಂಜು ಜಾದೂ; ಸೂಪರ್ ಡ್ಯೂಪರ್ ಕ್ಯಾಚ್

ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಚಾಂಪಿಯನ್‌ಶಿಪ್‌ನಲ್ಲಿ ರಾಜಸ್ಥಾನ ರಾಯಲ್ಸ್ ಆಟಗಾರ ಸಂಜು ಸ್ಯಾಮ್ಸನ್ ಅದ್ಭುತ ಕ್ಯಾಚ್ ಹಿಡಿಯುವ ಮೂಲಕ ಗಮನ ಸೆಳೆದಿದ್ದಾರೆ.

Vijaya Karnataka Web 13 May 2018, 11:57 pm
ಮುಂಬಯಿ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಚಾಂಪಿಯನ್‌ಶಿಪ್‌ನಲ್ಲಿ ರಾಜಸ್ಥಾನ ರಾಯಲ್ಸ್ ಆಟಗಾರ ಸಂಜು ಸ್ಯಾಮ್ಸನ್ ಅದ್ಭುತ ಕ್ಯಾಚ್ ಹಿಡಿಯುವ ಮೂಲಕ ಗಮನ ಸೆಳೆದಿದ್ದಾರೆ.
Vijaya Karnataka Web sanju-samson-catch


ಭಾನುವಾರ ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಫೀಲ್ಡಿಂಗ್‌ನಲ್ಲಿ ನಿಜಕ್ಕೂ ಸಂಜು ಜಾದೂ ಮೆರೆದಿದ್ದರು.

ಒಂದೆಡೆ ರಾಜಸ್ಥಾನ ಫೀಲ್ಡರ್‌ಗಳು ಕ್ಯಾಚ್‌ಗಳನ್ನು ಕೆಚೆಲ್ಲುತ್ತಿದ್ದರೆ ಇನ್ನೊಂದೆಡೆ ತಮ್ಮ ಸಹ ಆಟಗಾರರಿಗೆ ಸ್ಫೂರ್ತಿ ತುಂಬಿದ ಸಂಜು ಮೂರು ಕ್ಯಾಚ್‌ಗಳನ್ನು ಹಿಡಿದಿದ್ದರು.

ಈ ಪೈಕಿ ಹಾರ್ದಿಕ್ ಪಾಂಡ್ಯ ಅವರು ಹೊಡೆದ ಚೆಂಡನ್ನು ಅದ್ಭುತವಾಗಿ ಡೈವ್ ಹೊಡೆಯುವ ಮೂಲಕ ಹಿಡಿದಿರುವುದು ಇಡೀ ಕ್ರಿಕೆಟ್ ಲೋಕವೇ ನಿಬ್ಬೇರಗಾಗುವಂತೆ ಮಾಡಿದೆ.

ಪ್ರಸಕ್ತ ಸಾಲಿನ ಐಪಿಎಲ್‌ನ ಅತ್ಯುತ್ತಮ ಕ್ಯಾಚ್‌ಗಳ ಸಾಲಿಗೆ ಸೇರಿದೆ.

ಬಳಿಕ ಬ್ಯಾಟಿಂಗ್‌ನಲ್ಲೂ ಮಿಂಚಿದ ಸಂಜು ಕೇವಲ 14 ಎಸೆತಗಳಲ್ಲಿ ತಲಾ ಎರಡು ಬೌಂಡರಿ ಹಾಗೂ ಸಿಕ್ಸರ್ ನೆರವಿನಿಂದ 26 ರನ್ ಗಳಿಸಿ ತಂಡದ ಗೆಲುವನ್ನು ಸುಲಭಗೊಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌