ಆ್ಯಪ್ನಗರ

ಆರ್‌ಸಿಬಿ ಗೆಲುವಿನಲ್ಲೂ ಕ್ಯಾಪ್ಟನ್ ಕೊಹ್ಲಿಗೆ ಕಹಿ

ಐಪಿಎಲ್‌ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ನಡೆದ ಪಂದ್ಯದಲ್ಲಿ ಸ್ಲೋ-ಓವರ್ ರೇಟ್ ಕಾಯ್ದುಕೊಂಡಿರುವುದಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕ ವಿರಾಟ್ ಕೊಹ್ಲಿ ಮೇಲೆ 12 ಲಕ್ಷ ರೂ.ಗಳ ದಂಡ ವಿಧಿಸಲಾಗಿದೆ.

Vijaya Karnataka Web 14 Apr 2019, 2:36 pm
ಮೊಹಾಲಿ: ಐಪಿಎಲ್‌ 12ನೇ ಆವೃತ್ತಿಯ ತನ್ನ 7ನೇ ಪಂದ್ಯದಲ್ಲಿ ಕಿಂಗ್ಸ್‌ ಇಲೆವೆನ್‌ ಪಂಜಾಬ್‌ ವಿರುದ್ಧ ಗೆಲುವು ದಾಖಲಿಸುವುದರೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ ಇತಿಹಾಸದಲ್ಲೇ ಆರಂಭದ ಏಳೂ ಪಂದ್ಯಗಳನ್ನು ಸೋತ ಮೊದಲ ತಂಡ ಎಂಬ ಅಪಖ್ಯಾತಿಗೊಳಗಾಗುವುದರಿಂದ ಪಾರಾಯಿತು.
Vijaya Karnataka Web virat-kohli-09


ಆಕರ್ಷಕ ಅರ್ಧಶತಕಗಳನ್ನು ಬಾರಿಸಿದ ನಾಯಕ ವಿರಾಟ್ ಕೊಹ್ಲಿ ಹಾಗೂ ಎಬಿ ಡಿ ವಿಲಿಯರ್ಸ್ ಆರ್‌ಸಿಬಿ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು.

ಆದರೂ ಗೆಲುವಿನ ಬಳಿಕವೂ ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿಗೆ ಕಹಿ ಅನುಭವ ಎದುರಾಗಿದೆ. ಅಲ್ಲದೆ ಸ್ಲೋ-ಓವರ್ ರೇಟ್ ಕಾಯ್ದುಕೊಂಡಿರುವುದಕ್ಕೆ ದಂಡ ತೆರಬೇಕಾಗಿ ಬಂದಿದೆ.

ನಿಗದಿತ ಅವಧಿಯಲ್ಲಿ ಓವರ್-ರೇಟ್ ಕಾಯ್ದುಕೊಳ್ಳಲು ವಿಫಲವಾಗಿರುವ ಹಿನ್ನಲೆಯಲ್ಲಿ ಐಪಿಎಲ್ ನೀತಿ ಸಂಹಿತೆಯ ಪ್ರಕಾರ ಕೊಹ್ಲಿಗೆ 12 ಲಕ್ಷ ರೂ.ಗಳ ದಂಡ ವಿಧಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌