ಆ್ಯಪ್ನಗರ

ಎಬಿ ಡಿ ಆಡುತ್ತಿಲ್ಲ ಏಕೆ ಗೊತ್ತಾ?

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಅನಾರೋಗ್ಯದ ಹಿನ್ನಲೆಯಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯವನ್ನು ಎಬಿ ಡಿ ವಿಲಿಯರ್ಸ್ ಮಿಸ್ ಮಾಡಿಕೊಂಡಿದ್ದಾರೆ. ಇದರಿಂದ ಆರ್‌ಸಿಬಿಗೆ ಹಿನ್ನಡೆಯಾಗಿದೆ.

Vijaya Karnataka Web 19 Apr 2019, 7:43 pm
ಕೋಲ್ಕತ್ತಾ: ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಪ್ರತಿಯೊಂದು ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಿಗೆ ಫೈನಲ್ ಅಥವಾ ಸೆಮಿಫೈನಲ್ ಮಹತ್ವವನ್ನು ಪಡೆದಿದೆ.
Vijaya Karnataka Web ab-de-villiers-02


ಆಗಲೇ ಆಡಿರುವ ಎಂಟು ಪಂದ್ಯಗಳಲ್ಲಿ ಒಂದು ಪಂದ್ಯವನ್ನು ಗೆದ್ದು ಕೇವಲ ಎರಡು ಅಂಕಗಳನ್ನು ಮಾತ್ರ ಸಂಪಾದಿಸಿರುವ ಆರ್‌ಸಿಬಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಹಾಗಾಗಿ ಪ್ಲೇ-ಆಫ್ ಪ್ರವೇಶ ಸಾಧ್ಯತೆಯು ಕ್ಷೀಣಿಸಿದೆ. ಅಲ್ಲದೆ ಮುಂದಿನ ಎಲ್ಲ ಪಂದ್ಯಗಳಲ್ಲೂ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ.

ಈ ನಡುವೆ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯಕ್ಕೆ ಮಿಸ್ಟರ್ 360 ಡಿಗ್ರಿ ಖ್ಯಾತಿಯ ಬ್ಯಾಟ್ಸ್‌ಮನ್ ಎಬಿ ಡಿ ವಿಲಿಯರ್ಸ್ ಸೇವೆಯು ಅಲಭ್ಯವಾಗಿದೆ.

ಈ ಬಗ್ಗೆ ಟಾಸ್ ವೇಳೆ ಸ್ಪಷ್ಟನೆ ನೀಡಿರುವ ನಾಯಕ ವಿರಾಟ್ ಕೊಹ್ಲಿ, ಎಬಿ ಡಿ ಅನಾರೋಗ್ಯಕ್ಕೆ ತುತ್ತಾಗಿದ್ದು, ನಾವು ಯಾವುದೇ ರಿಸ್ಕ್ ತೆಗೆದುಕೊಳ್ಳಲು ಬಯಸುತ್ತಿಲ್ಲ ಎಂದರು.

ಇದರೊಂದಿಗೆ ಆರ್‌ಸಿಬಿಗೆ ದೊಡ್ಡ ಹಿನ್ನಡೆಯಾಗಿದೆ. ಎಬಿಡಿ ಸ್ಥಾನವ್ನನು ಹೆನ್ರಿಚ್ ಕ್ಲಾಸೆನ್ ತುಂಬಿಕೊಂಡಿದ್ದಾರೆ. ಹಾಗೆಯೇ ದಕ್ಷಿಣ ಆಫ್ರಿಕಾ ಅನುಭವಿ ವೇಗಿ ಡೇಲ್ ಸ್ಟೈನ್ ಒಂಬತ್ತು ವರ್ಷಗಳ ಬಳಿಕ ಆರ್‌ಸಿಬಿ ತಂಡಕ್ಕೆ ಕಮ್‌ಬ್ಯಾಕ್ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌