ಆ್ಯಪ್ನಗರ

ಟೀಮ್‌ ಇಂಡಿಯಾದಲ್ಲಿ ರಿಷಭ್‌ ಪಂತ್‌ರ ಭವಿಷ್ಯ ನುಡಿದ ರಿಕಿ ಪಾಂಟಿಂಗ್‌!

ಟೀಮ್‌ ಇಂಡಿಯಾದ ಆಡುವ 11ರ ಬಳಗದಲ್ಲಿ ರಿಷಭ್‌ ಪಂತ್‌ ಮರಳಿ ಸ್ಥಾನ ಪಡೆಯಲಿದ್ದಾರೆ ಎಂದು ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್‌ ಭವಿಷ್ಯ ನುಡಿದಿದ್ದಾರೆ. ಮುಂಬರುವ ಐಪಿಎಲ್‌ನಲ್ಲಿ ಪಂತ್‌ಗೆ ಈ ವಿಚಾರವಾಗಿ ನೆರವಾಗುವುದಾಗಿ ಪಂಟರ್‌ ಹೇಳಿದ್ದಾರೆ.

Vijaya Karnataka Web 27 Jan 2020, 2:56 pm
ಹೊಸದಿಲ್ಲಿ: ಯುವ ವಿಕೆಟ್‌ಕೀಪರ್‌ ಬ್ಯಾಟ್ಸ್‌ಮನ್‌ ರಿಷಭ್‌ ಪಂತ್‌ ಅದ್ಭುತ ಪ್ರತಿಭೆ ಅವರು ಟೀಮ್‌ ಇಂಡಿಯಾದ ಆಡುವ 11ರ ಬಳಗದಲ್ಲಿ ಮರಳಿ ಸ್ಥಾನ ಪಡೆದುಕೊಳ್ಳಲಿದ್ದಾರೆ ಎಂದು ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್‌ ಭವಿಷ್ಯ ನುಡಿದಿದ್ದಾರೆ.
Vijaya Karnataka Web ricky ponting on rishabh pant 2020


ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಮುಖ್ಯ ಸಲಹೆಗಾರ ಕೂಡ ಆಗಿರುವ ಪಾಂಟಿಂಗ್‌, ಇದೇ ವೇಳೆ 13ನೇ ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲಿ ಪಂತ್‌ ಜೊತೆಗೆ ಕೆಲಸ ಮಾಡಿ ಅವರಿಗೆ ನೆರವಾಗುವುದನ್ನು ಎದುರು ನೋಡುತ್ತಿರುವುದಾಗಿ ಹೇಳಿಕೊಂಡಿದ್ದಾರೆ.

"ರಿಷಭ್‌ ಪಂತ್‌ ಅಪಾರ ಪ್ರತಿಭೆ ಹೊಂದಿರುವ ಯುವ ಆಟಗಾರ. ಮುಂಬರುವ ಐಪಿಎಲ್‌ ಟೂರ್ನಿಯಲ್ಲಿ ಅವರೊಟ್ಟಿಗೆ ಕೆಲಸ ಮಾಡಿ ಅವರ ಸಮಸ್ಯೆ ಬಗೆಹರಿಸುವುದನ್ನು ಎದುರು ನೋಡುತ್ತಿದ್ದೇನೆ. ಶೀಘ್ರದಲ್ಲೇ ಅವರು ಭಾರತ ತಂಡದ ಆಡುವ 11ರ ಬಳಗಕ್ಕೆ ಮರಳುತ್ತಾರೆ ಎಂಬ ವಿಶ್ವಾಸ ನನ್ನಲ್ಲಿದೆ," ಎಂದು ಟ್ವಿಟರ್‌ನಲ್ಲಿ ಅಭಿಮಾನಿಯೊಬ್ಬ ಕೇಳಿದ ಪ್ರಶ್ನೆಗೆ ಪಾಂಟಿಂಗ್‌ ಉತ್ತರಿಸಿದ್ದಾರೆ.

ಆರ್‌ಸಿಬಿ ತೊರೆದ ದುಃಖ ತೋಡಿಕೊಂಡ ಸರ್ಫರಾಝ್ ಖಾನ್‌

ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ವಿಕೆಟ್‌ಕೀಪರ್‌ ಬ್ಯಾಟ್ಸ್‌ಮನ್‌ ಜವಾಬ್ದಾರಿಯನ್ನು ಟೀಮ್‌ ಇಂಡಿಯಾ ಮ್ಯಾನೇಜ್ಮೆಂಟ್‌ ಓಪನರ್‌ ಕೆಎಲ್‌ ರಾಹುಲ್‌ಗೆ ವಹಿಸಿದ್ದು, ರಾಹುಲ್‌ ಇದರ ಸಂಪೂರ್ಣ ಲಾಭ ಪಡೆದು ಗಮನ ಸೆಳೆದಿದ್ದಾರೆ. ಹೀಗಾಗಿ ರಿಷಭ್‌ ಪಂತ್‌ಗೆ ಆಡುವ 11ರ ಬಳಗದಲ್ಲಿ ಸ್ಥಾನ ಇಲ್ಲವಾಗಿದೆ. ಪ್ರಸಕ್ತ ನ್ಯೂಜಿಲೆಂಡ್‌ ವಿರುದ್ಧ 5 ಪಂದ್ಯಗಳ ಟಿ20 ಸರಣಿಯ ಮೊದಲೆರಡೂ ಪಂದ್ಯಗಳಲ್ಲಿ ಪಂತ್‌ಗೆ ಅವಕಾಶ ಸಿಕ್ಕಿಲ್ಲ.

'ಬೂಮ್‌ ಬೂಮ್‌' ಲಯ ಕಳೆದುಕೊಂಡರೆ ಸಾಕಪ್ಪ ಎಂದ ಕಿವೀಸ್‌ ಬ್ಯಾಟ್ಸ್‌ಮನ್‌!

ಕರ್ನಾಟಕ ಮೂಲದ ಆರಂಭಿಕ ಬ್ಯಾಟ್ಸ್‌ಮನ್‌ ಕೆಎಲ್‌ ರಾಹುಲ್‌ ನ್ಯೂಜಿಲೆಂಡ್‌ ಎದುರು ಟಿ20 ಕ್ರಿಕೆಟ್‌ನಲ್ಲಿ ಮೊದಲ ಬಾರಿ ವಿಕೆಟ್‌ಕೀಪರ್‌ ಬ್ಯಾಟ್ಸ್‌ಮನ್‌ ಆಗಿ ಆಡುವ ಮೂಲಕ ಸತತ ಎರಡು ಅರ್ಧಶತಕಗಳನ್ನು ಬಾರಿಸಿದ್ದಾರೆ. ಟಿ20-ಐನಲ್ಲಿ ವಿಕೆಟ್‌ ಕೀಪರ್‌ ಆಗಿ ಆಡಿದ ಮೊದಲೆರಡು ಪಂದ್ಯಗಳಲ್ಲಿ ಅರ್ಧಶತಕ ಬಾರಿಸಿದ ಮೊತ್ತ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಆಕ್ಲೆಂಡ್‌ನಲ್ಲಿ ಬ್ಯಾಕ್‌ ಟು ಬ್ಯಾಕ್‌ ಫಿಫ್ಟಿ ಮೂಲಕ ವಿಶೇಷ ದಾಖಲೆ ಬರೆದ ಕೆಎಲ್‌ ರಾಹುಲ್!

ಭಾರತ ತಂಡ ಸರಣಿಯ ಮೊದಲ ಪಂದ್ಯದಲ್ಲಿ 6 ವಿಕೆಟ್‌ಗಳ ಜಯ ದಾಖಲಿಸಿ, ಬಳಿಕ 2ನೇ ಪಂದ್ಯದಲ್ಲೂ 7 ವಿಕೆಟ್‌ ಜಯದೊಂದಿಗೆ 2-0 ಅಂತರದ ಮುನ್ನಡೆ ಪಡೆದುಕೊಂಡಿದೆ. ಸರಣಿಯ 3ನೇ ಪಂದ್ಯ ಬುಧವಾರ (ಜ.29) ಹ್ಯಾಮಿಲ್ಟನ್‌ನ ಸೆಡಾನ್‌ ಪಾರ್ಕ್‌ ಕ್ರೀಡಾಂಗಣದಲ್ಲಿ ನಡೆಯಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌